ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿಶ್ವ ಭೂ ದಿನಾಚರಣೆ

ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿಶ್ವ ಭೂದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಬಿಐಟಿಯ ಅಂತಾರಾಷ್ಟ್ರೀಯ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿತು.
ಬಿಐಟಿಯ ಸಿವಿಲ್ ಎಂಜಿನಿಯರಿಂಗ್ ಮತ್ತು ಮೂಲ ವಿಜ್ಞಾನ ವಿಭಾಗವು ʼನಮ್ಮ ಶಕ್ತಿ, ನಮ್ಮ ಗ್ರಹʼ ಎಂಬ ಶೀರ್ಷಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ ಪರಿಸರವನ್ನು ರಕ್ಷಿಸುವ ಮತ್ತು ಸುಸ್ಥಿರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರ ಮಹತ್ವವನ್ನು ಹೇಳಲಾಗಿದೆ.
ಕಾರ್ಯಕ್ರಮದಲ್ಲಿ ಯೆನೆಪೊಯ ಪರಿಸರ ಅಧ್ಯಯನ ಕೇಂದ್ರದ ಉಪನಿರ್ದೇಶಕಿ ಡಾ. ಭಾಗ್ಯ ಬಿ. ಶರ್ಮಾ ಮುಖ್ಯ ಭಾಷಣವನ್ನು ಮಾಡಿದರು. ಅವರು ʼPowering the Future: The Earth Day Call to Actionʼ ಎಂಬ ವಿಷಯದ ಬಗ್ಗೆ ಮಾತನಾಡಿದರು.
ಸಿವಿಲ್ ಎಂಜಿನಿಯರಿಂಗ್ ವಿಭಾಗದ ಡಾ. ಪುರುಷೋತ್ತಮ ಸಿ.ಟಿ ಅವರುʼ Sustainability: The Revolution Earth Needsʼ ಎಂಬ ವಿಷಯದ ಬಗ್ಗೆ ಮಾತನಾಡಿದರು. ಅವರು ಪರಿಸರದ ಸವಾಲುಗಳನ್ನು ಎದುರಿಸುವ ಪ್ರಾಯೋಗಿಕ ವಿಧಾನಗಳ ಬಗ್ಗೆ ಚರ್ಚಿಸಿದರು ಮತ್ತು ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು.
ಬಿಐಟಿ ಪ್ರಾಂಶುಪಾಲರಾದ ಡಾ.ಎಸ್.ಐ. ಮಂಝೂರ್ ಬಾಷಾ ಅವರು ಸಣ್ಣ, ಸ್ಥಿರ ಪ್ರಯತ್ನಗಳ ಮೂಲಕ ಪರಿಸರವನ್ನು ಸಂರಕ್ಷಿಸುವಲ್ಲಿ ವೈಯಕ್ತಿಕ ಜವಾಬ್ದಾರಿಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಅಲ್ತಮಾಶುದ್ದೀನ್ ಖಾನ್ ಸ್ವಾಗತಿಸಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪೂಜಾ ಕೆ ವಂದಿಸಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಡಾ. ಪುರುಷೋತ್ತಮ ಸಿ.ಟಿ. ಮತ್ತು ಝಹೀರ್ ಅಹ್ಮದ್ ಸಂಯೋಜಿಸಿದರು. ಕಾರ್ಯಕ್ರಮದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು.