ಬೆಳ್ತಂಗಡಿ | ಆಟೋ ಪಲ್ಟಿ : ಓರ್ವ ಬಾಲಕ ಮೃತ್ಯು ಹಲವರಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು - ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂದು ಗುರುತಿಸಲಾಗಿದೆ.
ನಾವೂರಿನ ಶಶಿ ಎಂಬವರ ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Next Story





