BELTHANGADY | ಬಸ್ ಢಿಕ್ಕಿ: ಬೈಕ್ ಸವಾರ ಯುವಕ ಮೃತ್ಯು

ಬೆಳ್ತಂಗಡಿ: ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿಯ ಪಾರ್ಪಿಕಲ್ಲು ಎಂಬಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ.
ಬೈಕ್ ಸವಾರ, ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗಣಹಳ್ಳಿ ನಿವಾಸಿ ಪನ್ನ ಕೇಶವ ಗೌಡ ಎಂಬವರ ಪುತ್ರ ದೀಪಕ್(24) ಮೃತಪಟ್ಟವರು.
ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸರಕಾರಿ ಬಸ್ ಮತ್ತು ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





