Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ಸೌಜನ್ಯ ಪರ ಹೋರಾಟಗಾರ...

ಬೆಳ್ತಂಗಡಿ | ಸೌಜನ್ಯ ಪರ ಹೋರಾಟಗಾರ ಜಯಂತ್ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ; SIT ವರದಿ ನೀಡಲು ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ2 Dec 2025 2:12 PM IST
share
ಬೆಳ್ತಂಗಡಿ | ಸೌಜನ್ಯ ಪರ ಹೋರಾಟಗಾರ ಜಯಂತ್ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ; SIT ವರದಿ ನೀಡಲು ಸಮ್ಮತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಪ್ರಾಥಮಿಕ ವರದಿಯನ್ನು ಕೇಳಿ ಸೌಜನ್ಯ ಪರ ಹೋರಾಟಗಾರ ಜಯಂತ್. ಟಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದ್ದು, 3923 ಪುಟಗಳ ದಾಖಲೆ ನೀಡಲು ಸಮ್ಮತಿಸಿರುವುದಾಗಿ ಜಯಂತ್. ಟಿ ಪರವಾಗಿ ವಾದ ಮಂಡಿಸಿದ್ದ ಬೆಂಗಳೂರಿನ ಹಿರಿಯ ನ್ಯಾಯವಾದಿಗಳು ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಐ.ಟಿಯು ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಹಾಗೂ ಇತರರಿಗೆ ನಿರಂತರವಾಗಿ ನೋಟೀಸ್ ನೀಡುತ್ತಾ ಬಂದಿತ್ತು. ಹಾಜರಾಗದಿದ್ದರೆ‌ ಬಂಧಿಸುವುದಾಗಿ ನೋಟೀಸ್ ನೀಡಿತ್ತು. ಇದಾದ ಬಳಿಕ ಎಸ್.ಐ.ಟಿಯು ನ್ಯಾಯಾಲಯದ ಮುಂದೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು.

ತಾನು ಆರೋಪಿ ಎಂದು ನೋಟೀಸ್ ನೀಡಿರುವ ಹಿನ್ನಲೆಯಲ್ಲಿ ಎಸ್.ಐ.ಟಿ ಸಲ್ಲಿಸಿರುವ ವರದಿಯನ್ನು ತನಗೆ ನೀಡುವಂತೆ ಆಗ್ರಹಿಸಿ ಜಯಂತ್‌ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅದನ್ನು ನೀಡಲು ನಿರಾಕರಿಸಿತ್ತು. ಎಸ್.ಐ.ಟಿಯು ವರದಿಯನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿರುವ ಕಾರಣದಿಂದ ಈ ವರದಿಯನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿರಿಯ ನ್ಯಾಯವಾದಿಯೊಬ್ಬರು ಪ್ರಕರಣದ ಬಗ್ಗೆ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಮುಂದೆ ಜಯಂತ್ ಟಿ ಪರವಾಗಿ ವಕಾಲತು ವಹಿಸಿ, ಎಸ್.ಐ‌.ಟಿ ಸಲ್ಲಿಸಿದ್ದ ವರದಿಯನ್ನು ನೀಡುವಂತೆ ವಿನಂತಿಸಿದ್ದರು.

ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದ ಜಯಂತ್ ಪರ ನ್ಯಾಯವಾದಿಗಳು, ʼಎಸ್.ಐ.ಟಿ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ, ಚಿನ್ನಯ್ಯ ಹಾಗೂ ಜಯಂತ್ ತಲೆ ಬುರುಡೆಯನ್ನು ನ್ಯಾಯಾಲಯಕ್ಕೆ ತಂದಿರುವುದು ಯಾವುದೋ ದುರುದ್ದೇಶದಿಂದ ಅಲ್ಲ. ಸದುದ್ದೇಶದಿಂದಲೇ ಇಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಗಮನಸೆಳೆಯಲು ಬಂಗ್ಲೆ ಗುಡ್ಡದ ಕಾಡಿನಿಂದ ಈ ತಲೆ ಬುರುಡೆಯನ್ನು ತಂದಿದ್ದಾರೆ. ಅದಕ್ಕಾಗಿ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಜಯಂತ್ ಅವರಿಗೆ 9 ನೋಟೀಸ್ ಗಳನ್ನು ನೀಡಲಾಗಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಹೇಳಿದ್ದಾರೆ. ಹೀಗಿರುವಾಗ ಅವರ ವಿರುದ್ದ ಸಲ್ಲಿಕೆಯಾಗಿರುವ ವರದಿಯನ್ನು ಪಡೆಯುವುದು ಅವರ ಮೂಲಭೂತ ಹಕ್ಕಾಗಿದೆ, ಇದು ಯಾವುದೇ ರೀತಿಯಲ್ಲಿ ದೇಶದ ಭದ್ರತೆಯ ವಿಚಾರ ಅಥವಾ ಇನ್ಯಾವುದೇ ಗುಪ್ತ ವಿಚಾರವಾಗಿರುವುದಿಲ್ಲʼ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ಇದಲ್ಲದೆ ಸುಪ್ರೀಂಕೋರ್ಟ್ ಹಾಗೂ ವಿವಿಧ ಹೈಕೋರ್ಟ್ ಗಳು ಈ ಬಗ್ಗೆ ನೀಡಿರುವ ತೀರ್ಪು ಗಳನ್ನು ನ್ಯಾಯಾಲಯದ ಗಮನಕ್ಕೆ ತಂದು, ತಮ್ಮ ಕಕ್ಷಿದಾರರಿಗೆ ಕಾನೂನಿನ ರಕ್ಷಣೆ ಪಡೆಯಲು ಈ ದಾಖಲೆಗಳು ಅಗತ್ಯವಾಗಿದೆ ಎಂಬ ವಾದವನ್ನು ಮಂಡಿಸಿದ್ದಾರೆ. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಎಸ್.ಐ.ಟಿ ಅಪರಾಧ ಸಂಖ್ಯೆ 30/2025ಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯನ್ನು ಕಕ್ಷಿದಾರರಿಗೆ ನೀಡುವಂತೆ ಆದೇಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X