Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊರಗ ಸಮುದಾಯದ ಮೀಸಲು ಮನೆ ನಿವೇಶನ...

ಕೊರಗ ಸಮುದಾಯದ ಮೀಸಲು ಮನೆ ನಿವೇಶನ ಹಸ್ತಾಂತರಕ್ಕೆ ಒತ್ತಾಯಿಸಿ ಫಲಾನುಭವಿಗಳಿಂದ 12 ತಾಸುಗಳ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ9 Jan 2026 3:16 PM IST
share
ಕೊರಗ ಸಮುದಾಯದ ಮೀಸಲು ಮನೆ ನಿವೇಶನ ಹಸ್ತಾಂತರಕ್ಕೆ ಒತ್ತಾಯಿಸಿ ಫಲಾನುಭವಿಗಳಿಂದ 12 ತಾಸುಗಳ ಸತ್ಯಾಗ್ರಹ

ಮಂಗಳೂರು, ಜ.9: ಕುಡುಪು ಗ್ರಾಮದ ಮಂಗಳಜ್ಯೋತಿಯಲ್ಲಿ ಕೊರಗ ಸಮುದಾಯದ ಮೀಸಲು ಮನೆ ನಿವೇಶನವನ್ನು ಹಸ್ತಾಂತರಿಸಲು ಆಗ್ರಹಿಸಿ ಸಮುದಾಯದ ಫಲಾನುಭವಿಗಳು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಮನಪಾ ಎದುರು ಶುಕ್ರವಾರ 12 ತಾಸುಗಳ ನಿರಂತರ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಮಾತನಾಡಿದರು.

ಮೂಲ ನಿವಾಸಿಗಳಾಗಿರುವ ಕೊರಗ ಕುಟುಂಬಗಳು ತಮ್ಮ ಹಕ್ಕನ್ನು ಕೇಳಲು ಈ ರೀತಿ ಪ್ರತಿಭಟನೆ ನಡೆಸುವ ದಯನೀಯ ಸ್ಥಿತಿ ಅಭಿವೃದ್ಧಿಯ ಪಥದಲ್ಲಿರುವ ಮಂಗಳೂರು ನಗರಕ್ಕೆ ಕಳಂಕ ಎಂದರು.

ಕೊರಗ ತನಿಯ ಇಲ್ಲಿನ ಅಸ್ಥಿತೆ. ಕಾಸರಗೋಡು, ದ.ಕ., ಉಡುಪಿ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕೊರಗರ ಕುಟುಂಬಗಳು ಅಂದಾಜು 3000. ಮಂಗಳೂರು ನಗರದಲ್ಲಿ ಸುಮಾರು 200 ಕುಟುಂಬಗಳಿವೆ ಎಂದು ಅಂದಾಜಿಸಲಾಗಿದೆ. ಅಳಿವಿನಂಚಿನಲ್ಲಿರುವ ಈ ಕುಟುಂಬಗಳಿಗೆ ಕನಿಷ್ಟ ಎರಡೂವರೆ ಎಕರೆ ಜಮೀನು ನೀಡಿ, ಅವರ ಆರೋಗ್ಯ, ಶಿಕ್ಷಣಕ್ಕೆ ಒತ್ತು ನೀಡಬೇಕೆಂಬುದನ್ನು ಸರಕಾರವೇ ನೇಮಕ ಮಾಡಿದ್ದ ಮುಹಮ್ಮದ್ ಪೀರ್ ವರದಿಯಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸರಕಾರ ಇನ್ನೂ ಗಮನ ಹರಿಸಿಲ್ಲ. ಇದರ ನಡುವೆ ಕುಡುಪು ಗ್ರಾಮದ ಮಂಗಳ ಜ್ಯೋತಿಯಲ್ಲಿ ವಾಸಿಸುತ್ತಿದ್ದ 14 ಕೊರಗ ಕುಟುಂಬಗಳಿಗೆ ಮನೆ ಮತ್ತು ಕೃಷಿ ಕಾರ್ಯ ನಡೆಸಲು ಕುದ್ಮುಲ್ ರಂಗರಾವ್ ಶಿಷ್ಯ ವೆಂಕೋಜಿ ರಾವ್ 1930ರಲ್ಲಿ ನೀಡಿದ್ದ 8.94 ಎಕರೆ ಭೂಮಿಯನ್ನು ದಾನ ನೀಡಿದ್ದರು. ಕೆಲ ವರ್ಷಗಳ ಬಳಿಕ ಆ ಭೂಮಿಯ ಜವಾಬ್ದಾರಿ ಹೊಂದಿದ್ದ ಡಿಸಿಎಂ ಟ್ರಸ್ಟ್ ಅನೂರ್ಜಿತಗೊಂಡ ಹಿನ್ನೆಲೆಯಲ್ಲಿ ಫಲಾನುಭವಿಗಳ ಭೂಮಿಯ ಆರ್‌ಟಿಸಿ ಪಾಲಿಕೆ ಹೆಸರಿಗೆ ಬದಲಾಗಿತ್ತು. ಆ ಭೂಮಿ ತಮಗೆ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸಿದ ಕುಟುಂಬಗಳಿಗೆ ಅಂತಿಮವಾಗಿ 2018ರಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಸ್ವಂತ ಮನೆ ನಿವೇಶನ ರಹಿತ ಕೊರಗ ಕುಟಂಬಗಳಿಗೆ ವಿತರಿಸಲು ಪರಿಷತ್ತಿನಲ್ಲಿ ನಿರ್ಣಯ ಕೈಗೊಂಡಿತ್ತು. ಆದರೆ ಪರಿಸರ ಇಲಾಖೆ, ಅರಣ್ಯ ಇಲಾಖೆ ಮತ್ತು ಡಂಪಿಂಗ್ ಯಾರ್ಡ್ ಕಾರಣ ನೀಡಿ ಭೂಮಿ ವಿತರಣೆ ಆಗಿಲ್ಲ. ಇದೀಗ ಈ ಫಲಾನುಭವಿಗಳು ಇದಕ್ಕಾಗಿ 13 ಪ್ರತಿಭಟನೆಗಳನ್ನು ನಡೆಸಿದ್ದಾರೆ. ಇನ್ನೂ ವಿತರಣೆ ಆಗದಿರುವುದು ದುರಂತ ಎಂದವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತಕ್ಷಣ ಕ್ರಮ ವಹಿಸಬೇಕು. ಮುಂದಿನ ಪ್ರತಿಭಟನೆಗೆ ಅವಕಾಶ ನೀಡದೆ ಭೂಮಿಯನ್ನು ಫಲಾನುಭವಿಗಳಿಗೆ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮುಖಂಡ ಯೋಗೀಶ್ ಜಪ್ಪಿನಮೊಗರು, 2022ರಿಂದ ಸಮಿತಿ ನೇತೃತವಲ್ಲಿ ಹಲವಾರು ರೂಪದ ಹೋರಟ ನಡೆಸಲಾಗಿದೆ. ಇದರ ಫಲವಾಗಿ ಮುಡಾದಿಂದ ಮೂಲ ಸೌಕರ್ಯಯುಕ್ತ ನಕ್ಷೆ ಅಂಗೀಕಾರ ಪಡೆಯಲಾಗಿದೆ. 2.75 ಕೋಟಿರೂ, ಗಳ ಟೆಂಡರ್ ಅಂಗೀಕೃತಗೊಂಡಿದ್ದರೂ ಆಮೆ ಗತಿಯಲ್ಲಿ ಕೆಲಸ ಸಾಗುತ್ತಿದೆ. ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿಭಟನೆ ನಡೆಸಿದ ವೇಳೆ ನಿವೇಶನ ವಿತರಣೆ ಭರವಸೆ ನೀಡಲಾಗಿತ್ತಾದರೂ ಈಡೇರದ ಕಾರಣ ಇದೀಗ ನಿರಂತರ ಹೋರಾಟಕ್ಕೆ ತೀರ್ಮಾನಿಸಲಾಗಿದೆ ಎಂದರು.

ಸಮಿತಿಯ ಮಂಗಳಜ್ಯೋತಿ ಘಟಕದ ಅಧ್ಯಕ್ಷಕರಿಯ ಕೆ., ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ಅಶೋಕ್ ಶ್ರೀಯಾನ್ ಹಾಗೂ ಫಲಾನುಭವಿಗಳು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

Tags

satyagrahaKoraga community
share
ವಾರ್ತಾಭಾರತಿ
ವಾರ್ತಾಭಾರತಿ
Next Story
X