ಬೆಂಗರೆ: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

ಮಂಗಳೂರು, ಎ.14: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಬೆಂಗರೆ ವಾರ್ಡ್ ಸಮಿತಿಯ ಆಶ್ರಯದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡಿಯಲು ಆಗ್ರಹಿಸಿ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಬೆಂಗರೆ ಕಡವಿನ ಬಳಿಯಿಂದ ಪಕ್ದದ ಧ್ವಜವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಿದ್ದೀಕ್ ಬೆಂಗರೆ ವಾರ್ಡ್ ಅಧ್ಯಕ್ಷ ಮುಝೈನ್ ಐ.ಬಿ.ಎಂ. ಹಸ್ತಾಂತರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಾಯಿತು.
ಬೆಂಗರೆ ಮುಖ್ಯ ರಸ್ತೆಯ ಬದ್ರಿಯಾ ಕಟ್ಟೆಯ ಮುಂದೆ ನಡೆದ ಪ್ರತಿಭಟನಾ ಸಭೆಯಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು..
ಈ ಸಂದರ್ಭ ಎಸ್.ಡಿ.ಪಿ.ಐ. ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ., ಕಾರ್ಯದರ್ಶಿ ಇಕ್ಬಾಲ್, ಕಾರ್ಪೊರೇಟರ್ ಮುನೀಬ್ ಬೆಂಗರೆ, ಕ್ಷೇತ್ರ ಸಮಿತಿಯ ಸದಸ್ಯ ಇಮ್ತಿಯಾಝ್, 11ನೇ ವಾರ್ಡ್ ಅಧ್ಯಕ್ಷ ಅಝರ್, ವಾರ್ಡ್ ಕಾರ್ಯದರ್ಶಿಗಳಾದ ಶಾದಾಬ್ ಬೆಂಗರೆ, ಕರೀಮ್ ಮತ್ತಿತರರು ಉಪಸ್ಥಿತರಿದ್ದರು.







