Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭರತ್ ಶೆಟ್ಟಿ ಶಾಸಕರಾಗಲು ಅಯೋಗ್ಯರು,...

ಭರತ್ ಶೆಟ್ಟಿ ಶಾಸಕರಾಗಲು ಅಯೋಗ್ಯರು, ಕ್ಷೇತ್ರದ ಜನತೆಯ ಕ್ಷಮೆ ಯಾಚಿಸಲೇಬೇಕು: ಇನಾಯತ್ ಅಲಿ

"ಭರತ್ ಶೆಟ್ಟಿ ಅವರಿಗೆ ಅಡ್ಡೂರು ಗ್ರಾಮದಲ್ಲಿ 826 ಮತಗಳು ನೀಡಿದ್ದು ಪಾಕಿಸ್ತಾನಿಯರೇ?"

ವಾರ್ತಾಭಾರತಿವಾರ್ತಾಭಾರತಿ24 Aug 2024 3:04 PM IST
share
ಭರತ್ ಶೆಟ್ಟಿ ಶಾಸಕರಾಗಲು ಅಯೋಗ್ಯರು, ಕ್ಷೇತ್ರದ ಜನತೆಯ ಕ್ಷಮೆ ಯಾಚಿಸಲೇಬೇಕು: ಇನಾಯತ್ ಅಲಿ

ಮಂಗಳೂರು: ಅಡ್ಡೂರು ಮಿನಿ ಪಾಕಿಸ್ತಾನ ಎಂಬ ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪತ್ರಕಾ ಹೇಳಿಕೆ ನೀಡಿರುವ ಅವರು, ಕರಡಿಗೆ ಗೊತ್ತಿರೋದು ನಾಲ್ಕೇ ಹಾಡು ಎಲ್ಲ ಜೇನುತುಪ್ಪದ ಬಗ್ಗೆ ಅ‌ನ್ನುವಂತೆ ಬಿಜೆಪಿಯವರಿಗೆ ಪಾಕಿಸ್ತಾನ ಜಪ‌ ಮಾಡುವುದನ್ನು ಬಿಟ್ಟು ಬೇರೆ ಏನೂ ಮಾಡಲ್ಲ. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಭರತ್ ಶೆಟ್ಟಿ, ಅಡ್ಡೂರನ್ನು ಮಿನಿ ಪಾಕಿಸ್ತಾನ ಎಂದಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಇಲ್ಲಸಲ್ಲದ ಆರೋಪ ಹೊರಿಸಿ, ಜೆರೋಸಾ ಶಾಲೆಯ ಓರ್ವ ಶಿಕ್ಷಕಿಯನ್ನು ಬೀದಿಗೆ ತಂದ ಕ್ಷುದ್ರ ಮನಸ್ಥಿತಿಯ ವ್ಯಕ್ತಿಯಿಂದ ಇನ್ನೆಂತ ಜವಾಬ್ದಾರಿಯುತ ಹೇಳಿಕೆ ನಿರೀಕ್ಷಿಸಲು ಸಾಧ್ಯವಿಲ್ಲ. ಜನರ ಭಾವನೆಗಳನ್ನೇ ಕೆರಳಿಸುತ್ತ ಅಭಿವೃದ್ಧಿಯ ಕೆಲಸ ಕಿಂಚಿತ್ತೂ ಮಾಡದ ಭರತ್ ಶೆಟ್ಟಿ ಬಗ್ಗೆ ಜನತೆ ಜಿಗುಪ್ಸೆ ಪಡುವಂತಾಗಿದೆ ಎಂದು ವಾಗಾದಳಿ ನಡೆಸಿದ್ದಾರೆ.

ಭರತ್ ಶೆಟ್ಟಿ ಅವರೇ, ನೀವು ಶಾಸಕರಾಗಲು ಅಯೋಗ್ಯರು ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದೀರಿ. ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ವಿಫಲರಾಗಿರುವ ಭರತ್ ಶೆಟ್ಟಿ ಅವರು ಸುಲಭದಲ್ಲಿ ಪ್ರಚಾರ ಪಡೆದುಕೊಳ್ಳಲು ಕೀಳು ಮಟ್ಟದ ಮನಸ್ಥಿತಿಯ ಮೊರೆ ಹೋಗಿರುವುದು ದುರಂತ. ನಿತ್ಯ ನಿರಂತರವಾಗಿ ಕೋಮುಪ್ರಚೋದಕ ಭಾವನಾತ್ಮಕ ವಿಷಯಗಳನ್ನು ಮಾತನಾಡುವುದು, ನಿಂದಿಸಿ ಕೆಣಕಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣ ಮಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವುದೇ ಭರತ್ ಶೆಟ್ಟಿಯವರ ಚಾಳಿಯಾಗಿದೆ. ಅವರ ಪಕ್ಷದೊಳಗಿನ ಭಿನ್ನಮತದ ಕೋಪವನ್ನು ಸಾರ್ವಜನಿಕವಾಗಿ ತೋರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಒಂದು ಆರೋಗ್ಯ ಕೇಂದ್ರ ಮಾಡಲ‍ಾಗದ ಇವರೆಂತಹ ವೈದ್ಯರು, ಒಂದು ಮಾರುಕಟ್ಟೆ ಕಟ್ಟಡ ಮುಗಿಸಲಾಗದ ಇವರೆಂತಹ ಶಾಸಕರು ಎಂಬ ಪ್ರಶ್ನೆಗಳನ್ನು ಎದುರಿಸಲು ಸಾಧ್ಯವಾಗದೇ ಜನರ ಮನಸ್ಸನ್ನು ಪದೇ ಪದೇ ಬೇರೆ ಕಡೆ ಸೆಳೆಯಲು ಕೋಮುವಾದ ಕೆರಳಿಸುತ್ತಿರುವುದು ಖಂಡನೀಯ. ಅಡ್ಡೂರು ಗ್ರಾಮದಲ್ಲಿ 826 ಮತಗಳು ಭರತ್ ಶೆಟ್ಟಿ ಅವರಿಗೆ ಸಿಕ್ಕಿದೆ. ಹಾಗಾದ್ರೆ ಭರತ್ ಶೆಟ್ರೇ ನಿಮಗೆ ಮತ ಹಾಕಿ ಗೆಲ್ಲಿಸಿದವರು ಪಾಕಿಸ್ತಾನಿಯರೇ? ಎಂದು ಪ್ರಶ್ನಿಸಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ, ಅಕ್ರಮ ಕಲ್ಲು ಗಣಿಗಾರಿಕೆಯನ್ನು ಮೊದಲು ನಿಮ್ಮ ಪರಮಾಪ್ತರು ನಡೆಸುವುದನ್ನು ನಿಲ್ಲಿಸಿ ನಿಮ್ಮ ಧಮ್ಮು, ತಾಕತ್ತು ನಿರೂಪಿಸಿ. ಕಳೆದ ಬಿಜೆಪಿ ಅಧಿಕಾರ ಅವಧಿಯಲ್ಲಿ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ರಾಷ್ಟ್ರೀಯ ಹಸಿರು ಪೀಠ ದಂಡ ಹಾಕಿದ ಪ್ರಕರಣ ಮರೆತು ಹೋಯಿತೇ? ಕ್ಷೇತ್ರದಲ್ಲಿ ಅಭಿವೃದ್ಧಿಯನ್ನೂ ಮಾಡದೆ ಹೊಸ ಕೈಗಾರಿಕೆಯನ್ನು ತರಲು, ಉದ್ಯೋಗ ಸೃಷ್ಟಿಸಲು ತಾಕತ್ತು ಇಲ್ಲದ ನಿಮಗೆ ಜನರೇ ಮುಂದಿನ ಚುನಾವಣೆಯಲ್ಲಿ ಉತ್ತರಿಸಲಿದ್ದಾರೆ ಎಂದಿದ್ದಾರೆ.

ಭರತ್ ಶೆಟ್ಟಿ ಅವರೇ, ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆಯೇ ನೀವು ಈ ರೀತಿಯ ಕೀಳು ಮಟ್ಟದ ಹೇಳಿಕೆ ನೀಡಿ ಕ್ಷೇತ್ರದ ಸಮಸ್ತ ಜನತೆಗೆ ಅಪಮಾನ ಮಾಡಿರುವಿರಿ, ನೀವು ಕ್ಷೇತ್ರದ ಜನತೆಯ ಕ್ಷಮೆ ಯಾಚಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X