Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಡದಿಯಲ್ಲಿ ಸಾಮೂಹಿಕ ಅತ್ಯಾಚಾರ, ಹತ್ಯೆ...

ಬಿಡದಿಯಲ್ಲಿ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ಸಂತ್ರಸ್ತ ದಲಿತ ಬಾಲಕಿಗೆ ನ್ಯಾಯ ದೊರಕಲಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 May 2025 10:00 AM IST
share
ಬಿಡದಿಯಲ್ಲಿ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ಸಂತ್ರಸ್ತ ದಲಿತ ಬಾಲಕಿಗೆ ನ್ಯಾಯ ದೊರಕಲಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

ಮಂಗಳೂರು: ಬಿಡದಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಪೋಲೀಸರ ನಿರ್ಲಕ್ಷ್ಯದ ನಡೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ .

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ , ಇತ್ತೀಚಿಗೆ ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಮತ್ತು ಹೆಚ್ಚಾಗಿ ಮಹಿಳೆಯರ ಮೇಲೆ ಭೀಕರವಾಗಿ ನಡೆಯುತ್ತಿರುವ ಹಿಂಸಾತ್ಮಕ ಪ್ರಕರಣಗಳನ್ನು ನೋಡುವಾಗ ಸುಸಂಸ್ಕೃತಿ, ನೈತಿಕ ಮೌಲ್ಯಗಳ ತಳಹದಿಯ ಮೇಲೆ ನೆಲೆಗೊಂಡು, ಸುಸಭ್ಯ ಸಮಾಜವಾಗಿ ಗುರಿತಿಸಲ್ಪಡುತ್ತಿದ್ದ ಕರ್ನಾಟಕದ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದು, ಒಂದು ಅನಾಗರಿಕರ ತಾಣದಂತಾಗಿದೆ ಎಂದು ಹೇಳಿದ್ದಾರೆ .

ಜನರು ಸದಾ ಭಯ ಭೀತಿಯಲ್ಲಿ ಬದುಕುವಂತಾಗಿದೆ. ಅತ್ಯಾಚಾರ ನಡೆದರೂ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ ಪೋಲೀಸರ ನಡೆ ಪ್ರಶ್ನಿಸಿದರೆ ಪೊಲೀಸರು ಹಲ್ಲೆ ಮಾಡುತ್ತಾರೆ ಎನ್ನುವುದಾದರೆ ಈ ವ್ಯವಸ್ಥೆ ಅತ್ಯಾಚಾರಿಗಳ ರಕ್ಷಣೆಗೆ ನಿಂತಿರುವ ಹಾಗೆ ಭಾಸವಾಗುತ್ತಿದೆ. ಸಮಾಜದಲ್ಲಿ ನ್ಯಾಯ ,ನೀತಿ, ನೈತಿಕತೆ ಸ್ಥಾಪಿಸಲು ಪಣತೊಡಬೇಕಾದ ಆರಕ್ಷಕರು ಭಕ್ಷಕರಾಗಿ ವರ್ತಿಸುತ್ತಿದ್ದಾರೆ. ಅತ್ಯಂತ ದಾರುಣವಾಗಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ ಬಿಡದಿಯ ಈ 14 ವರ್ಷದ ಮೂಗಿ ಬಾಲಕಿಗಾಗಿ ಧ್ವನಿಯೆತ್ತಲು ಮಾಧ್ಯಮಗಳಿಗೆ ಸಮಯವೇ ಸಿಕ್ಕಿಲ್ಲ. ಟಿ.ಆರ್.ಪಿ ಗಾಗಿ ಒಂದು ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ತಾಸುಗಟ್ಟಲೆ ಕುಳಿತು ಡಿಬೆಟ್ ನಡೆಸುವ ಮಾಧ್ಯಮಗಳು ಈ ಪ್ರಕರಣದ ಕುರಿತು ಚರ್ಚಿಸುವ ಗೋಜಿಗೆ ಹೋಗುವುದಿಲ್ಲ. ಸ್ವಘೋಷಿತ ಧರ್ಮ ರಕ್ಷಕರಿಗೆ ಬೀದಿಗಿಳಿದು ಹೋರಾಡಲು ಈ ಮುಗ್ಧ ಹೆಣ್ಣಿನ ಆರ್ತನಾದ ಕೇಳಿಸಲೇ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಅತ್ಯಂತ ಬರ್ಬರವೆನಿಸಿದ ಈ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಅಧಿಕಾರಿಗಳ ಅಧೀನತೆಯಲ್ಲಿ ಈ ಪ್ರಕರಣದ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿದ ಪೋಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಿ ರಾಜ್ಯದಲ್ಲಿ ಇಂತಹ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಾತಾರಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X