Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಪೀಕರ್ ಬಗ್ಗೆ ಮಾತನಾಡುವ ಬಿಜೆಪಿ...

ಸ್ಪೀಕರ್ ಬಗ್ಗೆ ಮಾತನಾಡುವ ಬಿಜೆಪಿ ಜಿಲ್ಲಾಧ್ಯಕ್ಷರು ತಮ್ಮ ಹಿನ್ನೆಲೆ ಅರಿತಿರಲಿ : ಸದಾಶಿವ ಉಳ್ಳಾಲ್

ವಾರ್ತಾಭಾರತಿವಾರ್ತಾಭಾರತಿ7 May 2025 2:08 PM IST
share
Photo of Press meet

ಮಂಗಳೂರು : ಸ್ಪೀಕರ್ ಖಾದರ್ ಅವರು ಯಾವತ್ತೂ ಕ್ರಿಮಿನಲ್‌ಗಳು ಅಥವಾ ಅಪರಾಧಿಗಳ ಪರ ವಹಿಸುವುದಿಲ್ಲ. ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರು ತಮ್ಮ ಹಿನ್ನೆಲೆಯಲ್ಲಿ ಅರಿತಿರಲಿ ಎಂದು ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದ ಅವರು, ಸತೀಶ್ ಕುಂಪಲ ಖಾದರ್ ಕುರಿತು ಮಾತನಾಡುವಷ್ಟು ದೊಡ್ಡ ವ್ಯಕ್ತಿಯಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಖಾದರ್ ಅವರನ್ನು ಸೋಲಿಸಲು ಏನೆಲ್ಲ ಒಳ ಒಪ್ಪಂದ ಮಾಡಿದ್ದರು. ಸಹಕಾರ ಸಂಘ ಸ್ಥಾಪಿಸಿ ಏನು ಮಾಡಿದರೂ, ಭೂ ವ್ಯವಹಾರದಲ್ಲಿನ ಹಗರಣ ಹೀಗೆ ಎಲ್ಲರಿಗೂ ಸತೀಶ್ ಕುಂಪಲ ಅವರು ಮಾಡಿರುವ ಅವ್ಯವಹಾರಗಳ ಬಗ್ಗೆ ತಿಳಿದಿದೆ ಎಂದು ಆರೋಪಿಸಿದರು.

ವಿಧಾನ ಸಭಾಧ್ಯಕ್ಷ, ಮಂಗಳೂರು ಕ್ಷೇತ್ರದ ಶಾಸಕರಾಗಿರುವ ಯು.ಟಿ.ಖಾದರ್ ಅವರ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಅಪ ಪ್ರಚಾರದ ಸುಳ್ಳು ಹೇಳಿಕೆಗಳನ್ನು ನೀಡಿ, ಅವರ ರಾಜೀನಾಮೆಗೆ ಆಗ್ರಹಿಸಿರುವುದು ಖಂಡನೀಯ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಸ್ಪೀಕರ್ ಖಾದರ್‌ರವರು ಯಾವುದೇ ಜಾತಿ, ಮತ ನೋಡದೆ ಜಾತ್ಯತೀತ ನಿಲುವಿನಲ್ಲಿ ಜನರಿಗೆ ಸಹಾಯ ಮಾಡುವ ನಾಯಕ. ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರಿಗೆ ಸಹಾಯ ಮಾಡುವವರೂ ಅವರಲ್ಲ. ಅವರ ಕುರಿತು ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

ಜಿಲ್ಲಾ ವಕ್ತಾರ ದಿನೇಶ್ ಕುಂಪಲ ಅವರು ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯು.ಟಿ.ಖಾದರ್ ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರೇ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್‌ನಲ್ಲಿ ಸೇರಿಸಿ ಈಗ ಹೇಳಬಾರದು ಎಂದು ಹೇಳುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

ಮುಖಂಡರಾದ ರಮೇಶ್ ಶೆಟ್ಟಿ, ನೀರಜ್ ಪಾಲ್, ದೀಪಕ್ ಪಿಲಾರ್, ರಕ್ಷಿತ್ ಪೂಜಾರಿ, ನಝೀರ್ ಬಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X