Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೇಂದ್ರ ಸರಕಾರವನ್ನು ಪ್ರಶ್ನಿಸುವ...

ಕೇಂದ್ರ ಸರಕಾರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: ಮಂಜುನಾಥ ಭಂಡಾರಿ ಲೇವಡಿ

ವಾರ್ತಾಭಾರತಿವಾರ್ತಾಭಾರತಿ9 April 2025 3:53 PM IST
share
ಕೇಂದ್ರ ಸರಕಾರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: ಮಂಜುನಾಥ ಭಂಡಾರಿ ಲೇವಡಿ

ಮಂಗಳೂರು: ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ, ಕೇಂದ್ರ ನಾಯಕರ ವಿರುದ್ಧ ಉಸಿರೆತ್ತುವ ತಾಕತ್ತು ಇಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಲೇವಡಿ ಮಾಡಿದ್ದಾರೆ.

ಕೇಂದ್ರ ಸರಕಾರ ಅಡುಗೆ ಸಿಲಿಂಡರ್ ದರವನ್ನು 50 ರೂ. ಏರಿಕೆ ಮಾಡಿದೆ. ಭರವಸೆಗಳ ಸುರಿಮಳೆಯನ್ನೇ ಸುರಿಸಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲವನ್ನೂ ಮರೆತುಬಿಟ್ಟು, ಬೆಲೆ ಏರಿಕೆಯ ಬರೆಯನ್ನು ಮತದಾರನಿಗೆ ನೀಡುತ್ತಿದೆ. ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಡಿಮೆಯಿದ್ದರೂ ದೇಶದಲ್ಲಿ ಕಚ್ಚಾತೈಲ ದರ ಕಡಿಮೆ ಮಾಡದೆ ಜನರನ್ನು ವಂಚಿಸಿದೆ. ಜಿಎಸ್ ಟಿ ಹೊರೆಯನ್ನು ಜನರಿಗೆ ಹಾಕಿ ಸುಲಿಗೆ ಮಾಡಿದ್ದಲ್ಲದೆ ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲನ್ನು ಸಮರ್ಪಕವಾಗಿ ನೀಡುತ್ತಿಲ್ಲ. ರಾಜ್ಯದ ಅಭಿವೃದ್ಧಿಗೆ ಬರಬೇಕಾದ ಹಣವನ್ನು ಕೇಂದ್ರ ನೀಡಿಲ್ಲ. ರಾಜ್ಯ ಬಿಜೆಪಿರಿಗೆ ರಾಜ್ಯದ ಜನರ ಬಗ್ಗೆ ಹಾಗೂ ಅಭಿವೃದ್ಧಿಯ ಬಗ್ಗೆ ಕಾಳಜಿಯಿದ್ದರೆ ಹೊಸದಿಲ್ಲಿಗೆ ತೆರಳಿ ಜನಾಕ್ರೋಶ ಯಾತ್ರೆ ಮಾಡಲಿ ಎಂದು ಸವಾಲೆಸೆದಿದ್ದಾರೆ.

ರಾಜ್ಯದಲ್ಲಿ ಗ್ರಾರಂಟಿ ಯೋಜನೆ ಅನುಷ್ಠಾನವಾದ ಬಳಿಕ ಜನಸಾಮಾನ್ಯರ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತಿದೆ. ಸವದತ್ತಿ ಚಿಕ್ಕೊಪ್ಪ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ಗೃಹಲಕ್ಷ್ಮಿ ಹಣದಿಂದ ಶಿಕ್ಷಣ ಕಲಿತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿರುವುದು ಇದಕ್ಕೆ ನಿದರ್ಶನ. ಇದೇ ರೀತಿ ಕೋಟ್ಯಂತರ ಕುಟುಂಬಗಳಿಗೆ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಅನುಕೂಲ ಮಾಡಿಕೊಟ್ಟಿದೆ. ಇದರಿಂದ ಗ್ರಾಮ ಗ್ರಾಮಗಳಲ್ಲಿ ಆರ್ಥಿಕ ಚೈತನ್ಯ ಸೃಷ್ಟಿಯಾಗಿದೆ, ಅಭಿವೃದ್ಧಿ ಕಾಣುತ್ತಿದೆ. ಗ್ಯಾರಂಟಿ ಯೋಜನೆಯಿಂದ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿ ಕಾಣುತ್ತಿದೆ. ಗ್ಯಾರಂಟಿ ಯೋಜನೆಗೆ ಜನಸಾಮಾನ್ಯರ ಸ್ಪಂದನ ಹಾಗೂ ರಾಜ್ಯ ಸರಕಾರದ ಪರ ಜನರ ಒಲವನ್ನು ಕಂಡು ಬಿಜೆಪಿ ನಾಯಕರು ತಲ್ಲಣಗೊಂಡಿದ್ದು, ಜನಾಕ್ರೋಶ ಮೂಲಕ ಜನರನ್ನು ಹಾದಿತಪ್ಪಿಸುವ ಹುನ್ನಾರ ನಡೆಸುತ್ತಿದ್ದಾರೆ. ರಾಜ್ಯದ ಜನತೆ ಬುದ್ಧಿವಂತರು, ಬಿಜೆಪಿಯ ಟೀಮ್ ನ ಯಾವ ನಾಟಕನೂ ಫಲ ಕೊಡಲ್ಲ ಎಂದು ಮಂಜುನಾಥ ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಟಕ ಕಂಪನಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ನಾನಾ ಬಂಡಾಯ ಬಣಗಳಿದ್ದು, ಒಂದೊಂದು ನಾಟಕ ಕಂಪನಿಗಳಂತಾಗಿದೆ. ಬಿಜೆಪಿಯಲ್ಲಿ ನೇರಾ-ನೇರ ಮಾತನಾಡುವವರನ್ನು ಪಕ್ಷದಿಂದ ದೂರವಿಡುತ್ತಾರೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಬಂಡಾಯ ನಾಯಕರು ಹುಟ್ಟಿಕೊಳ್ಳಲಿದ್ದಾರೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X