ಶಾಸಕಿ ಭಾಗಿರಥಿ ಮುರುಳ್ಯರಿಗೆ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು, ಜ.9: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಕಾರಿ ಪೋಸ್ಟ್ ಮಾಡಿದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ರಾಜ್ಯ ಸರಕಾರದಲ್ಲಿ ಶಾಸಕರಿಗೇ ಭದ್ರತೆ ಇಲ್ಲ. ಇನ್ನು ಜನ ಸಾಮಾನ್ಯರ ಗತಿ ಏನು? ಕೇವಲ ಬಿಜೆಪಿ ಶಾಸಕರ ಮೇಲೆ, ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗುತ್ತಿದೆ, ಸುಳ್ಯ ಶಾಸಕಿಯ ಅವಹೇಳನಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಸಬೇಕು ಎಂದು ಆಗ್ರಹಿಸಿದರು.
ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಪಕ್ಷದ ನಾಯಕಿ ಸುಲೋಚನಾ ಭಟ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಮೋನಪ್ಪ ಭಂಡಾರಿ, ಸಂಜೀವ ಮಠಂದೂರು, ಬಾಲಕೃಷ್ಣ ಭಟ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್ ಮತ್ತಿತರರು ಪಾಲ್ಗೊಂಡಿದ್ದರು.
Next Story





