ಮಂಗಳೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿಯಿಂದ ‘ಚಾರ್ಜ್‌ಶೀಟ್’ ಕಿರುಪುಸ್ತಕ ಬಿಡುಗಡೆ

ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ವಿಪಕ್ಷ ಬಿಜೆಪಿಯು ಸರಕಾರದ ವೈಫಲ್ಯಗಳ ಬಗ್ಗೆ ‘ಚಾರ್ಜ್‌ಶೀಟ್’ ಬಿಡುಗಡೆ ಮಾಡಿದೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದ ಕೋಟ ಶ್ರೀ ನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಬುಧವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಈ ‘ಚಾರ್ಜ್‌ಶೀಟ್’ ಎಂಬ ಕಿರು ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಸರಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ. ರಾಜ್ಯ ಸರಕಾರದ ದುರಾಡಳಿತದಿಂದ ಕನ್ನಡಿಗರಿಗೆ ಬೆಲೆ ಏರಿಕೆ ಭಾಗ್ಯ ದೊರೆತಿದೆ ಎಂದು ಸಂಸದರು ಟೀಕಿಸಿದರು.
ಕೇಂದ್ರ ಸರಕಾರದ ಶೇ.೫೦ ನೆರವಿನ ಕುಡಿಯುವ ನೀರಿನ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುವಲ್ಲಿ ಸರಕಾರ ವಿಫಲವಾಗಿದೆ. ಕಿಸಾನ್ ಸಂಮಾನ್ ಯೋಜನೆಗೆ ರಾಜ್ಯ ಸರಕಾರ ಅನುದಾನ ಸ್ಥಗಿತಗೊಳಿಸಿದೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬಿ,ಪ್ರತಾಪ್ ಸಿಂಹ,ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ವಕ್ತಾರ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.





