Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ...

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನವಾಗಲಿದೆ: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ5 Sept 2023 8:36 PM IST
share
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನವಾಗಲಿದೆ: ಸಚಿವ ಝಮೀರ್ ಅಹ್ಮದ್

ಮಂಗಳೂರು, ಸೆ.5: ಪ್ರಧಾನಿ ಮೋದಿಯವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಮಂಗಳೂರು ಪ್ರವಾಸದ ನಿಮಿತ್ತ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕರ್ತರ ದುಡಿಮೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿ ದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. ಬಿಜೆಪಿ ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಆದರೆ, ಕಾಂಗ್ರೆಸ್ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.

ಚುನಾವಣೆ ದೃಷ್ಟಿಯಿಂದ ಗ್ಯಾಸ್ ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದವರು, ಮುಂದಿನ ಲೋಕಸಭಾ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಕಾಂಗ್ರೆಸ್ ಮುಖಂಡರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಜಿಲ್ಲೆಯ ಪ್ರಮುಖ ಸಮಸ್ಯೆ ಗಳನ್ನು ಸಚಿವರ ಗಮನಕ್ಕೆ ತಂದರು.

ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್.ಕೆ, ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಸುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್.ಎಸ್ ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X