Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಳಿ ಅಂಕ ವಿಚಾರದಲ್ಲಿ ಬಿಜೆಪಿ ರಾಜಕೀಯ:...

ಕೋಳಿ ಅಂಕ ವಿಚಾರದಲ್ಲಿ ಬಿಜೆಪಿ ರಾಜಕೀಯ: ಹರೀಶ್ ಕುಮಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ3 Jan 2026 10:29 PM IST
share
ಕೋಳಿ ಅಂಕ ವಿಚಾರದಲ್ಲಿ ಬಿಜೆಪಿ ರಾಜಕೀಯ: ಹರೀಶ್ ಕುಮಾರ್ ಆರೋಪ

ಮಂಗಳೂರು, ಜ.3: ತುಳುನಾಡಿನಲ್ಲಿ ದೈವ-ದೇವಸ್ಥಾನ ಜಾತ್ರೋತ್ಸವ ಸಂದರ್ಭ ನಡೆಯುತ್ತಿರುವ ಕೋಳಿ ಅಂಕ ವಿಚಾರದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಚಿಲ್ಲರೆ ರಾಜಕೀಯ ಮಾಡಲು ಹೊರಟಿದ್ದಾರೆ. ಈ ನೆಲದ ಬಗ್ಗೆ ನಿಜವಾಗಿಯೂ ಬಿಜೆಪಿಗರಿಗೆ ಆಸಕ್ತಿ, ಕಾಳಜಿ ಇದ್ದಿದ್ದರೆ ಅಧಿವೇಶನ ಸಂದರ್ಭ ಯಾಕೆ ಚರ್ಚೆ ಮಾಡದೆ ಮೌನವಾಗಿದ್ದರು? ಅಧಿವೇಶನದಲ್ಲಿ ಸಮಗ್ರ ಚರ್ಚೆ ನಡೆಸಬಹುದಿತ್ತಲ್ವೇ? ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ತುಳುನಾಡಿನ ದೈವರಾಧನೆ, ಈ ನೆಲದ ಸಂಸ್ಕೃತಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ, ಮಾತ್ರವಲ್ಲದೆ ಸದಾ ಬೆಂಬಲ ನೀಡುತ್ತಿದೆ. ಈ ನೆಲದ ಜಾನಪದ ಕ್ರೀಡೆ ಕಂಬಳಕ್ಕೆ ಅನುದಾನ, ದೈವ-ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಸೇರಿದಂತೆ ಕರಾವಳಿ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿದೆ. ಜಾತ್ರೋತ್ಸವ ಸಂದರ್ಭ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಆದರೆ ಪೊಲೀಸ್ ಅಧಿಕಾರಿಗಳು ಕಾನೂನು ಕಾರಣದಿಂದ ಕೋಳಿ ಅಂಕಕ್ಕೆ ಅವಕಾಶ ನೀಡುತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಶೋಭೆಯಲ್ಲ. ಬಿಜೆಪಿಯವರ ಮೌನವೇ ಕೋಳಿ ಅಂಕ ವಿಚಾರ ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ ಎಂದಿದ್ದಾರೆ.

*ಕೆಂಪು ಕಲ್ಲು ಗಣಿಗಾರಿಕೆ ಕ್ರಮಬದ್ಧ: ಜಿಲ್ಲೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಕೆಂಪು ಕಲ್ಲು ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿದ್ದು, ಲಂಗು ಲಗಾಮಿಲ್ಲದೆ ವ್ಯವಹಾರ ನಡೆಯುತ್ತಿತ್ತು. ರಾಜ್ಯ ಸರಕಾರಕ್ಕೂ ಸಮರ್ಪಕವಾಗಿ ರಾಜಸ್ವ ಸಂದಾಯವಾಗದೆ ಅಕ್ರಮ ಚಟುವಟಿಕೆಗಳಿಗೆ ನೆರವಾಗುತ್ತಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಕ್ರಮಗಳಿಗೆ ಮೂಗುದಾರ ಹಾಕಿ ಕೆಂಪು ಕಲ್ಲು ಗಣಿಗಾರಿಕೆಯನ್ನು ಕ್ರಮಬದ್ಧಗೊಳಿಸಿ ಜನರಿಗೆ ಕೆಂಪು ಕಲ್ಲು ಸುಲಭವಾಗಿ, ಕಾನೂನು ರೀತಿಯಲ್ಲಿ ಸಿಗುವಂತಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಮರಳುಗಾರಿಕೆ ಪರವಾನಗಿ ವಿಚಾರದಲ್ಲೂ ನಾನ್ ಸಿಆರ್‌ಝೆಡ್ ಪರವಾನಗಿ ಸಮಸ್ಯೆ ಈಗಾಗಲೇ ಬಗೆಹರಿದಿದ್ದು, ಬೇಕಾದಷ್ಟು ಮರಳು ಸಿಗುತ್ತಿದೆ. ನಾನ್ ಸಿಆರ್‌ಝೆಡ್ ಮರಳುಗಾರಿಕೆ ಕೇಂದ್ರ ಸರಕಾರದ ಸುಪರ್ದಿಯಲ್ಲಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿ ಬಿಜೆಪಿ ಸಂಸದರು, ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಲಿ. ಸಿಆರ್‌ಝೆಡ್ ಮರಳು ಸಮಸ್ಯೆ ಬಗೆಹರಿದರೆ ಬಡವರಿಗೆ ನಿಜವಾಗಿಯೂ ಅನುಕೂಲವಾಗಲಿದೆ. ಬಿಜೆಪಿಗರು ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ ಜನರಿಗೆ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸುಲಭದಲ್ಲಿ ಮರಳು ಸಿಗುವಂತೆ ಮಾಡಲಿ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

Tags

politics
share
ವಾರ್ತಾಭಾರತಿ
ವಾರ್ತಾಭಾರತಿ
Next Story
X