ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಮಂಗಳೂರು ದಕ್ಷಿಣ ವಿಧಾನಸಭಾ ಸಮಿತಿ ನೇತೃತ್ವದಲ್ಲಿ ರಕ್ತದಾನ
ಮಂಗಳೂರು: ಅಪರೇಷನ್ ಸಿಂಧೂರದಲ್ಲಿ ಕಾರ್ಯಾಚರಣೆ ಮಾಡಿದ ಸೈನಿಕರಿಗೆ ಶಕ್ತಿ ತುಂಬುವ ಸಲುವಾಗಿ ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಮಂಗಳೂರು ದಕ್ಷಿಣ ವಿಧಾನಸಭಾ ಸಮಿತಿಯ ನೇತೃತ್ವದಲ್ಲಿ ಯನಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ಆದಿತ್ಯವಾರ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಇಬ್ರಾಹೀಂ ನವಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರು ಆಸ್ಪತ್ರೆಗಳಲ್ಲಿ ರಕ್ತ ಕೊರತೆ ಇರುವ ಈ ಸಂದರ್ಭದಲ್ಲಿ ರಕ್ತದಾನ ಶಿಬಿರ ಬಹಳ ಉಪಯುಕ್ತ ಕಾರ್ಯಕ್ರಮ ಇದನ್ನು ಪ್ರತೀ ತಾಲೂಕು ಮಟ್ಟದಲ್ಲಿ ಮುಂದುವರಿಸುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹಮದ್ ಅವರು ಮಾತನಾಡಿ ತಮ್ಮ ಜೀವನವನ್ನೆ ತ್ಯಾಗ ಮಾಡಿ ದೇಶಕಾಯುವ ಸೈನಿಕರಿಗೆ ಶಕ್ತಿ ತುಂಬುವ ಉದ್ದೇಶಕ್ಕಾಗಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಡಿದ ಈ ಕಾರ್ಯ ಶ್ವಾಘನೀಯ ಹಾಗೂ ಮಾದರಿ ಕಾರ್ಯಕ್ರಮ ಎಂದು ಅಭಿನಂದಿಸಿದರು.
ಒಟ್ಟು 52 ಮಂದಿ ಯುವ ಕಾಂಗ್ರೆಸ್ ಸದಸ್ಯರು ರಕ್ತದಾನ ಮಾಡಿದರು.
ಇದೇ ಸಂದರ್ಭದಲ್ಲಿ ಸಲೀಮ್ ಅಹ್ಮದ್ ಅವರನ್ನು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮುಡಾ ಮಾಜಿ ಅಧ್ಯಕ್ಷರಾದ ಸುರೇಶ್ ಬಳ್ಳಾಲ್, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು, ದ.ಕ ಜಿಲ್ಲೆ ಉಸ್ತುವಾರಿ ಮಂಜುನಾಥ ಮಣಿ ಚೆಟ್ಟಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಶಿವಪ್ರಸಾದ್ ಪಾಣಾಜೆ, ಜಿಲ್ಲಾ ಅಲ್ಪಸಂಖಾತ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ ಮತ್ತು ಕೆ ಆಶ್ರಫ್, ಮನಪಾ ಮಾಜಿ ಸದಸ್ಯ ನವೀನ್ ಡಿ ಸೋಜ, ಮಂಗಳೂರು ಸಿಟಿ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ವಿಕಾಶ್ ಶೆಟ್ಟಿ, ಅಬ್ಬಾಸ್ ಅಲಿ, ಗಿರೀಶ್ ಆಳ್ವ, ಶಬೀರ್ ಸಿದ್ದಕಟ್ಟೆ , ನಝೀರ್ ಬಜಾಲ್, ಅಶೋಕ್ ಪೂಜಾರ್ ಮುಲ್ಕಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಸುನೀತ್ ಡೇಸಾ, ಬಶೀರ್ ಕಣ್ಣೂರು, ದೀಕ್ಷಿತ್ ಅತ್ತಾವರ, ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷರು ಹಕೀಂ ಕೊಕ್ಕಡ, ಜಾಕ್ಸನ್ ಮೂಡಬಿದ್ರೆ, ಫೈಝಲ್ ಕಡಬ, ಬ್ಲಾಕ್ ಅಧ್ಯಕ್ಷರುಗಳಾದ ವೆಲ್ವಿನ್, ಪೃಥ್ವಿರಾಜ್ ಪೂಜಾರಿ, ಉಪಸ್ಥಿತರಿದ್ದರು
ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಆಸಿಫ್ ಬಜಾಲ್ ಸ್ವಾಗತಿಸಿ, ಶ್ರುತಿ ಪ್ರವೀನ್ ನಿರೂಪಿಸಿದರು.









