Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. SKSSF ಕರ್ನಾಟಕ ಅಬುಧಾಬಿ, ಬ್ಲಡ್ ಹೆಲ್ಪ್...

SKSSF ಕರ್ನಾಟಕ ಅಬುಧಾಬಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಆಶ್ರಯದಲ್ಲಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ2 Sept 2023 11:06 PM IST
share
SKSSF ಕರ್ನಾಟಕ ಅಬುಧಾಬಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಆಶ್ರಯದಲ್ಲಿ ರಕ್ತದಾನ ಶಿಬಿರ

ಅಬುಧಾಬಿ : SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಸೆ.1ರಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ಖಾಲಿದಿಯ್ಯಾ ಬ್ಲಡ್ ಬ್ಯಾಂಕ್ ಅಬುಧಾಬಿಯಲ್ಲಿ ನಡೆಯಿತು.

ರಕ್ತ ದಾನ ಶಿಬಿರದಲ್ಲಿ ಒಟ್ಟು 67 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಖಾಲಿದಿಯ್ಯಾ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.

ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಹೀರ್ ಹುದವಿಯವರು "ಇಸ್ಲಾಂ ಎಂಬುದು ಕೇವಲ ನಮಾಝ್ ,ಕುರ್ ಆನ್ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತ ಗೊಳಿಸದೆ ಜನಪರ ಸೇವೆಗಳಿಗೂ ಕೈಜೋಡಿಸಿದರೆ ಮಾತ್ರ ಇಸ್ಲಾಂ ಎಂಬುದಕ್ಕೆ ಸರಿಯಾದ ಅರ್ಥ ಕಲ್ಪಿಸಿದಂತಾಗುತ್ತದೆ" ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ವೆಲ್ಫೇರ್ ಆಶೋಸಿಯೇಸನ್ ಅಬುಧಾಬಿ ಇದರ ಅಧ್ಯಕ್ಷರಾದ ಮುಹಮ್ಮದ್ ಅಲಿಯವರು ಸಂಸ್ಥೆಯು ಹಮ್ಮಿಕೊಂಡತಹ ಸಮಾಜ ಸೇವೆಯನ್ನು ಪ್ರಶಂಸಿಸಿದರು ಮತ್ತು ಎಸ್ ಕೆ ಎಸ್ ಎಸ್ ಎಫ್ ನಂತಹ ಸಂಘಟನೆಯು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ ಜನಪರ ಕಾರ್ಯಕ್ರಮಗಳಲ್ಲೂ ತೊಡಗಿಸಬೇಕೆಂದು ಕರೆ ನೀಡಿದರು.

ಅಬುಧಾಬಿ ಸುನ್ನಿ ಸೆಂಟರ್ ಇದರ ಅಧ್ಯಕ್ಷರಾದ ಅಸ್ಸಯ್ಯದ್ ಅಬ್ದಲ್ ರಹ್ಮಾನ್ ತಂಙಳ್ ಪ್ರಾಸ್ತವಿಕ ಮಾತುಗಳನ್ನಾಡಿ ರಕ್ತದಾನ ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಯು ಎ ಇ ಇದರ ಅಧ್ಯಕ್ಷರಾದ ಅಬ್ದುಲ್ಲಾ ಮಾದುಮೂಲೆ ಮಾತನಾಡಿ ಸಂಸ್ಥೆಯು ಹಮ್ಮಿಕೊಂಡಂತಹ ರಕ್ತದಾನ ಶಿಬಿರದ ಬಗ್ಗೆ ಹರ್ಷ ವ್ಯಕ್ತಪಡಿಸಿ ರಕ್ತದಾನಕ್ಕಿಂತ ಉತ್ತಮವಾದ ದಾನ ಮತ್ತೊಂದಿಲ್ಲ ಎಂದು ಹೇಳುತ್ತಾ ಪ್ರತೀ ಎರಡು ತಿಂಗಳಿಗೊಮ್ಮೆ ಯಾದರೂ ರಕ್ತದಾನ ಮಾಡುತ್ತಾ ಇತರರಿಗೂ ರಕ್ತದಾನದ ಮಹತ್ವದ ಬಗ್ಗೆ ತಿಳುವಳಿಕೆ ನೀಡಬೇಕೆಂದು ತಿಳಿಸಿದರು.

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ವ್ಯವಸ್ಥಾಪಕರಾದ ಸಿರಾಜುದ್ದೀನ್ ಪರ್ಲಡ್ಕ ರಕ್ತದಾನದ ಮಹತ್ವದ ಬಗ್ಗೆ ಹಾಗೂ ರಕ್ತದಾನ ಶಿಬಿರದ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು.

ಎಸ್ ಕೆ ಎಸ್ ಎಸ್ ಎಫ್ ಅಬುಧಾಬಿ ಕರ್ನಾಟಕದ ಗೌರವಾಧ್ಯಕ್ಷರಾದ ಹನೀಫ್ ಅರಿಯಮೂಲೆ ಮಾತನಾಡಿ ಸಂಸ್ಥೆಯು ಈವರೆಗೆ ನಡೆದುಬಂದ ಹಾದಿ ಹಾಗೂ ಅದರ ಕಾರ್ಯವೈಕರಿಗಳ ಬಗ್ಗೆ ವಿವರಣೆ ನೀಡಿದರು .

ಶಿಬಿರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕರಾದ ಶಾಫಿ ಮಾಣಿ, ಸಫ್ವಾನ್ ಕೂರತ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಅಬುಧಾಬಿ ಕರ್ನಾಟಕದ ಪ್ರಮುಖರಾದ ಶಾಫಿ ಪೆರುವಾಯಿ, ಅಬೂಬಕ್ಕರ್ ಸಕಲೇಶ್ ಪುರ ಮತ್ತು ಬಶೀರ್ ಚೇರಂಭಾಣೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯಹ್ಯ ಕೊಡ್ಲಿಪೇಟೆ ಸ್ವಾಗತಿಸಿದರು ಮತ್ತು SKSSF ಅಬುಧಾಬಿ ಕರ್ನಾಟಕ ಸಮಿತಿಯ ಉಪಾಧ್ಯಕ್ಷ ಹಾಫಿಳ್ ಝೈನ್ ಸಖಾಫಿ ಕಾರ್ಯಕ್ರಮವನ್ನು ನಿರೂಪಿಸಿದರು.


























share
ವಾರ್ತಾಭಾರತಿ
ವಾರ್ತಾಭಾರತಿ
Next Story
X