Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂದಿರಾ ಹೆಗ್ಗಡೆ ಕ್ಷೇತ್ರ ಕಾರ್ಯ...

ಇಂದಿರಾ ಹೆಗ್ಗಡೆ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ. ಆಶಾಲತಾ ಸುವರ್ಣ

ವಾರ್ತಾಭಾರತಿವಾರ್ತಾಭಾರತಿ5 Nov 2025 10:55 PM IST
share
ಇಂದಿರಾ ಹೆಗ್ಗಡೆ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ. ಆಶಾಲತಾ ಸುವರ್ಣ
‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಪುಸ್ತಕ ಬಿಡುಗಡೆ

ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಆಶಾಲತಾ ಸುವರ್ಣ ಅವರು ಹೇಳಿದ್ದಾರೆ.

ಅವರು ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಾನಪದೀಯ ಅಧ್ಯಯನ ಕ್ಷೇತ್ರ ಕಾರ್ಯಗಳ ಸಂದರ್ಭದಲ್ಲಿ ಮಹಿಳೆಯರು ಸಾಕಷ್ಟು ಎಡರು ತೊಡಕುಗಳನ್ನು ಎದುರಿಸುವ ಸಂದರ್ಭ ಉಂಟಾಗುತ್ತಿತ್ತು. ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದು ಡಾ.ಇಂದಿರಾ ಹೆಗ್ಗಡೆ ಅವರು ಹಲವು ಮಹತ್ವದ ಕೃತಿಗಳನ್ನು ನೀಡಿರುವುದು ಪ್ರಶಂಸನೀಯ ಎಂದು ಡಾ.ಆಶಾಲತಾ ಸುವರ್ಣ ಅಭಿಪ್ರಾಯಪಟ್ಟರು.

ಲೇಖಕಿ ಡಾ.ಇಂದಿರಾ ಹೆಗ್ಗಡೆ ಅವರು ಮಾತನಾಡಿ, ತಾನು ಕನ್ನಡದಲ್ಲಿ ಹಲವು ಕೃತಿಗಳನ್ನು ಬರೆದರೂ ತುಳುವಿನಲ್ಲಿ ಬರೆದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿ ನನಗೆ ಹೃದಯಕ್ಕೆ ಹಾಗೂ ಮನಸ್ಸಿಗೆ ತುಂಬಾ ಆಪ್ತವಾಯಿತು, ತುಳುವಿನಲ್ಲಿ ಬರೆಯುವುದು ತುಂಬಾ ಆಪ್ತವಾದ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಾ.ಸಮೀರ್ ಮಾಡ , ಹಿರಿಯ ಲೇಖಕಿ ಪ್ರೇಮಾ ಅಜ್ರಿ ಕಾರ್ಕಳ, ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಜ್ಯೋತಿ ಚೇಳೈರು, ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಪಿ. ಅವರು ಕೃತಿಯ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳುವಿನಲ್ಲಿ ಹೊಸದಾಗಿ ಸಂಶೋಧನೆ ಮಾಡಲು ಹೊರಟವರಲ್ಲಿ ಕ್ಷೇತ್ರ ಕಾರ್ಯದ ಅನುಭವದ ಕೊರತೆ ಇದೆ, ತಳಸ್ಪರ್ಶಿಯಾದ ಕ್ಷೇತ್ರ ಅಧ್ಯಯನದ ಮೂಲಕ ಸಂಶೋಧನೆ ನಡೆಸುವುದಕ್ಕೆ ಇಂದಿರಾ ಹೆಗ್ಗಡೆಯವರು ನಿದರ್ಶನವಾಗಿದ್ದಾರೆ ಎಂದರು.

ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X