Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ...

ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ವಾರ್ತಾಭಾರತಿವಾರ್ತಾಭಾರತಿ13 Nov 2025 11:56 PM IST
share
ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ
ಕೃತಿಗಳ ಬಿಡುಗಡೆ

ಮಂಗಳೂರು: ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರು ತುಳು ರಂಗಭೂಮಿಗೆ ನೀಡಿದ ಕೊಡುಗೆ ಅಪೂರ್ವದದು ಎಂದು ಹಿರಿಯ ಪತ್ರಕರ್ತ ಯು. ಕೆ .ಕುಮಾರನಾಥ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಕಾಡೆಮಿ ಪ್ರಕಟಿಸಿರುವ ಮನು ಇಡ್ಯಾರ ‘ಗಂಧದ ಕೊರಡ್ ’ಮತು‘ತಾಂಗ್ ನಿರೆಲ್ ’ ನಾಟಕ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾರಿಗೆ ಚಾವಡಿ ತಮ್ಮನ ಸಮಾರಂಭದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತುಳು ರಂಗಭೂಮಿಗೆ ಹೊಸ ಅಲೆಯ ನಾಟಕಗಳನ್ನು ನೀಡಿದ ಮನು ಇಡ್ಯಾರ ನಾಟಕಗಳ ಅಧ್ಯಯನ ಮತ್ತು ಪ್ರದರ್ಶನಗಳು ನಡೆಯುವ ಅಗತ್ಯವಿದೆ ಎಂದು ಯು. ಕೆ. ಕುಮಾರನಾಥ ಹೇಳಿದರು.

ಚಾವಡಿ ತಮ್ಮನದ ಅಭಿನಂದನಾ ನುಡಿಗಳನ್ನು ಆಡಿದ ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಅವರು, ಮನು ಇಡ್ಯಾರ ನಾಟಕಗಳ ವಸ್ತು ದೇಸಿಯತನದಿಂದ ಕೂಡಿದ್ದು ಭಾಷೆಯ ಪ್ರೌಡಿಮೆ, ವಿಶಿಷ್ಟ ರಂಗ ನಡೆಯನ್ನು ಹೊಂದಿದೆ, ಇಡ್ಯಾ ಅವರ ಎಲ್ಲಾ ನಾಟಕಗಳು ಪ್ರಕಟವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಆಧುನಿಕ ತುಳು ನಾಟಕ ರಂಗದಲ್ಲಿ ಅಮೃತ ಸೋಮೇಶ್ವರ ಅವರ ಬಳಿಕ ಮನು ಇಡ್ಯಾರು ಶ್ರೇಷ್ಠ ನಾಟಕಗಳನ್ನು ಕೊಟ್ಟವರು, ಮನು ಇಡ್ಯಾ ಅವರ ಒಂದೆರಡು ನಾಟಕಗಳನ್ನು ಇಂಗ್ಲಿಷ್‌ಗೆ ಅನುವಾದಿಸಿ ಪ್ರಕಟಿಸುವ ಬಗ್ಗೆ ಪ್ರಯತ್ನಿಸಲಾಗುವುದು ಎಂದರು.

ಸಿಂಗಾರ ಸುರತ್ಕಲ್ ಕಲಾ ಸಂಸ್ಥೆಯ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ, ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷೆ ಯಮುನಾ ಶೇಖರ್ ಶುಭ ಹಾರೈಸಿದರು.

ಸುಶೀಲ ಮನು ಇಡ್ಯಾ ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಸಂಚಾಲಕ ಮತ್ತು ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ನಾರಾಯಣ ಗುರು ಮಂದಿರ ಮತ್ತು ವಿಠೋಭ ರುಕುಮಾಯಿ ದೇಗುಲದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ನಾನಿಲ್ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್ ಅಭಿನಂದನಾ ಪತ್ರ ವಾಚಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಮಧುಸೂದನ ಇಡ್ಯಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X