Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘವು...

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘವು ಸಮಾಜಮುಖಿ ಚಿಂತನೆಯೊಂದಿಗೆ ಸಮಾಜಕ್ಕೆ ಕೊಡುಗೆ ನೀಡಿದೆ : ಕೆ.ಟಿ.ಸುವರ್ಣ

ವಾರ್ತಾಭಾರತಿವಾರ್ತಾಭಾರತಿ3 Nov 2025 6:28 PM IST
share
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘವು ಸಮಾಜಮುಖಿ ಚಿಂತನೆಯೊಂದಿಗೆ ಸಮಾಜಕ್ಕೆ ಕೊಡುಗೆ ನೀಡಿದೆ : ಕೆ.ಟಿ.ಸುವರ್ಣ

ಕೊಣಾಜೆ : ಕೊಣಾಜೆಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘವು ಕಳೆದ ನಲ್ವತ್ತಕ್ಕೂ ಹೆಚ್ಚು ವರ್ಷದಿಂದ ಸಮಾಜಮುಖಿ ಚಿಂತನೆಯೊಂದಿಗೆ ಮುನ್ನಡೆದು ಸಮಾಜಕ್ಕೆ ಕೊಡುಗೆ ನೀಡಿದೆ. ಸಂಘದ ಸೇವಾ ಮನೋಭಾವ, ಸಂಘದಲ್ಲಿ ದುಡಿದ ಹಿರಿಯರ ಪರಿಶ್ರಮ ಮತ್ತು ಸೇವಾ ನಿಷ್ಠೆಯಿಂದ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಹ್ಯಾದ್ರಿ ಕೋ ಅಪರೇಟಿವ್ ಸೊಸೈಟಿ, ತೊಕ್ಕೊಟ್ಟು ಇದರ ಅಧ್ಯಕ್ಷರಾದ ಕೆ.ಟಿ.ಸುವರ್ಣ ಅವರು ಹೇಳಿದರು.

ಗ್ರಾಮಚಾವಡಿಯಲ್ಲಿ ರವಿವಾರ ನಡೆದ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆಯಾದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ)ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್ ಅವರು ಮಾತನಾಡಿ, ಒಂದು ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯಬೇಕಾದರೆ ಸಂಘದ ಹಿರಿಯರ ಆಶೀರ್ವಾದ ಹಾಗೂ ಒಗ್ಗಟ್ಡು ಬಹಳ ಮುಖ್ಯ ಪಾತ್ರವಹಿಸುತ್ತದೆ. ಮುಂದೆ ಈ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿಯೂ ಒಲಿದು ಬರುವಂತಾಗಲಿ ಎಂದರು.

ಕಾಪಿಕಾಡು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎ.ಜೆ‌.ಶೇಖರ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ಅಚ್ಯುತಗಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವತ್ತೆಬೈಲ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಮೋನು, ಮುಖಂಡರಾದ ಅಬ್ದುಲ್ ರಹಿಮಾನ್ ಕೊಣಾಜೆ, ಮಂಗಳಾ ಯುವಕ ಮಂಡಲ ಅಧ್ಯಕ್ಷರಾದ ಎ.ಕೆ.ಅಬ್ದುಲ್ ರಹಿಮಾನ್, ನಾಟಿ ವೈದ್ಯರಾದ ಶಂಕರಾನಂದ ಇನ್ನವಳ್ಳಿ, ಸಮಾಜ ಸೇವಕರಾದ ಉಗ್ಗಪ್ಪ ಪೂಜಾರಿ ಪಾವೂರು, ಕೊಣಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ ದಾಮೋದರ್ ಕುಂದರ್, ಯಶವಂತ ದೇರಾಜೆ, ಪಜೀರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಲತಾ ಹರಿಪ್ರಸಾದ್, ಪಜೀರು ಪಂಚಾಯತ್ ಮಾಜಿ ಅಧ್ಯಕ್ಷರಾದ ಇಂತಿಯಾಝ್ ಪಜೀರು, ಮುಖಂಡರಾದ ರಾಜೀವ ಪೂಜಾರಿ, ನಿವೃತ್ತ ಶಿಕ್ಷಕ ಆನಂದ, ಶಿವಪ್ಪ ಪೂಜಾರಿ ಬೆಳರಿಂಗೆ, ಯುವವಾಹಿನಿ ಘಟಕದ ಅಧ್ಯಕ್ಷರಾದ ಬಾಬು ಬಂಗೇರ, ನಾರಾಯಣ ಗುರು ಸೇವಾ ಸಂಘದ ಮಹಿಳಾ ಸಮಿತಿಯ ಅಧ್ಯಕ್ಷರಾದ ಬಬಿತಾ ಬಾನಬೆಟ್ಡು ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಪ್ರಾಸ್ತಾವಿಕವಾಗಿ ಮಾತನಾಡಿದರು‌.

ಸಂಘದ ಮಾಜಿ ಅಧ್ಯಕ್ಷರಾದ ರವೀಂದ್ರ ಬಂಗೇರ ಅವರು ಸ್ವಾಗತಿಸಿದರು. ಅಜಿತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.


ಧಾರ್ಮಿಕವಾಗಿ, ಶೈಕ್ಷಣಿಕವಾಗಿ,‌ ಸಾಮಾಜಿಕವಾಗಿ ಸೇವೆ ಮಾಡುವುದಕ್ಕೆ ಪ್ರೇರಣೆ ನೀಡಿದ ಸಂಘಕ್ಕೆ ಬೆನ್ನೆಲುಬಾಗಿ ನಿಂತು ನಿಷ್ಢೆ,‌ ಪರಿಶ್ರಮದಿಂದ ಬೆವರು ಸುರಿಸಿ ದುಡಿದ ಬ್ರಹ್ಮಶ್ರೀ ಸೇವಾ ಸಂಘದ ಹಿರಿಯರಿಗೆ ಹಾಗೂ ಪ್ರಾಮಾಣಿಕವಾಗಿ ದುಡಿದ ಎಲ್ಲಾ ಸದಸ್ಯರು, ಪದಾಧಿಕಾರಿಗಳಿಗೆ ಈ ಪುರಸ್ಕಾರದ ಗೌರವ ಸಲ್ಲುತ್ತದೆ.

ವಿಜೇತ್ ಪಜೀರು, ಅಧ್ಯಕ್ಷರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಗ್ರಾಮಚಾವಡಿ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X