Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜುಲೈನಲ್ಲಿ ಉದ್ಯಮ ಕಾರ್ಯಾಗಾರ: ಕ್ಯಾ....

ಜುಲೈನಲ್ಲಿ ಉದ್ಯಮ ಕಾರ್ಯಾಗಾರ: ಕ್ಯಾ. ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ20 Jun 2025 2:45 PM IST
share
ಜುಲೈನಲ್ಲಿ ಉದ್ಯಮ ಕಾರ್ಯಾಗಾರ: ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು, ಜೂ.20: ಪ್ರಧಾನಮಂತ್ರಿ ಜನಧನ್ ಯೋಜನೆ(ಪಿಎಂಜೆಡಿವೈ), ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನ ಮಂತ್ರಿ ಸುರಕ್ಷ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಹಾಗೂ ಅಂಟಲ್ ಪಿಂಚಣಿ ಯೋಜನೆ (ಎಪಿವೈ) ಅಡಿಯಲ್ಲಿ ಎಸ್‌ಸಿ ಎಸ್‌ಟಿ ಮಹಿಳಾ ಫಲಾನುಭವಿಗಳು ಹಾಗೂ ಮಧ್ಯಮ, ಸಣ್ಣ, ಅತೀ ಸಣ್ಣ ಉದ್ದಿಮೆದಾರರ (ಎಂಎಸ್‌ಎಂಇ) ಸೌಲ ಸೌಲಭ್ಯಕ್ಕೆ ಸಂಬಂಧಿಸಿ ಜುಲೈ ತಿಂಗಳಲ್ಲಿ ಮಂಗಳೂರಿನಲ್ಲಿ ಉದ್ಯಮ ತರಬೇತಿ ಕಾರ್ಯಾಗಾರ ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.

ಮಂಗಳೂರಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಜಿ.ಪಂ. ಸಿಇಒ ಡಾ.ಆನಂದ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಸಣ್ಣ ಹಾಗೂ ಕಿರು ಉದ್ದಿಮೆದಾರರಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ಆದ್ಯತೆಯನ್ನು ನೀಡಬೇಕು. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಫಲಾನುಭವಿಗಳ ನೋಂದಣಿ ಆಗಿರುತ್ತದೆ. ಅಲ್ಲಿಗಿಂತ ತುಸು ಹೆಚ್ಚು ದ.ಕ.ದಲ್ಲಿ ಫಲಾನುಭವಿಗಳ ನೋಂದಣಿ ಆದಾಗ, ಇದುವೇ ಹೆಚ್ಚಳ ಎಂದು ಭಾವಿಸದೆ ಗುರಿ ಸಾಧಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳು ಕಾರ್ಯೋನ್ಮುಖವಾಗಬೇಕು. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಸಮರೋಪಾದಿಯಲ್ಲಿ ಬ್ಯಾಂಕ್‌ಗಳು ಕೆಲಸ ಮಾಡಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚಿಸಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸಾಮಾಜಿಕ ಭದ್ರತಾ ಸ್ಕೀಮ್‌ಗಳ ಗುರಿ ಸಾಧಿಸುವಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ಹಿನ್ನಡೆ ಕಂಡಿರುವ ಕುರಿತಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಯೋಜನೆ ಹಾಗೂ ಸಾಮಾಜಿಕ ಭದ್ರತಾ ಸ್ಕೀಮ್‌ಗಳ ಅನುಷ್ಠಾನಕ್ಕೆ ಸಂಬಂಧಿಸಿ ತ್ರೈಮಾಸಿಕ ಅವಧಿಯ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲೆಯ ಬ್ಯಾಂಕ್ ಮುಖ್ಯಸ್ಥರಿಗೆೆ ಸಂಸದರು ಸೂಚಿಸಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಿದ ಜಿ.ಪಂ.ಸಿಇಒ ಡಾ.ಆನಂದ್, ಬ್ಯಾಂಕ್‌ಗಳು ನಿಗದಿತ ಗುರಿ ಸಾಧನೆಗೆ ತೀವ್ರ ಪ್ರಯತ್ನ ನಡೆಸಬೇಕು. ಲೀಡ್ ಬ್ಯಾಂಕ್ ಸಭೆಯಲ್ಲಿ ಸೂಚಿಸಿದ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಶಾಖಾ ಮಟ್ಟದಲ್ಲಿ ಮಾಹಿತಿ ರವಾನೆಯಾಗಬೇಕು. ಇಲ್ಲದಿದ್ದರೆ ಯೋಜನೆಗಳ ಗುರಿ ಸಾಧಿಸಲು ಸಾಧ್ಯವಾಗದು ಎಂದು ಹೇಳಿದರು.

ಸ್ವಸಹಾಯ ಸಂಘಗಳ ಸದಸ್ಯರಿಗೆ ವೈಯಕ್ತಿಕ ಸ್ವಉದ್ಯೋಗಕ್ಕೆ ಸಾಲ ನೀಡುವಾಗ ಬ್ಯಾಂಕ್‌ಗಳು 2 ಲಕ್ಷ ರು. ವರೆಗೆ ಯಾವುದೇ ಗ್ಯಾರಂಟಿಗೆ ಷರತ್ತು ಹಾಕುವಂತಿಲ್ಲ ಎಂದು ಆರ್‌ಬಿಐ ಸೂಚನೆ ನೀಡಿದೆ. ಹೀಗಿದ್ದೂ ಕೆಲವು ಬ್ಯಾಂಕ್‌ಗಳು ಕೊಟೇಷನ್ ಸಹಿತ ಗ್ಯಾರಂಟಿ ನೀಡುವಂತೆ ಷರತ್ತು ವಿಧಿಸಿ ಸಾಲ ನೀಡಿಕೆಯಲ್ಲಿ ವಿಳಂಬಕ್ಕೆ ಕಾರಣವಾಗಿದ್ದಾರೆ. ಈ ಕುರಿತು ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಸಿಇಒ ಡಾ.ಆನಂದ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ನಿಷ್ಕ್ರಿಯ ಇರುವ ಖಾತೆಗಳನ್ನು ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು. ಬ್ಯಾಂಕ್ ಖಾತೆಗಳ ವಂಚನೆ ಬಗ್ಗೆ ನಿಗಾ ವಹಿಸಿ ಅದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಇಒ ಡಾ.ಆನಂದ್ ನಿರ್ದೇಶಿಸಿದರು.

ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸುವ ಸ್ವಸಹಾಯ ಗುಂಪುಗಳಿಗೆ 10 ಲಕ್ಷ ರು. ವರೆಗೆ ಸಾಲ ನೀಡಲು ಅವಕಾಶ ಇದೆ ಎಂದು ನಬಾರ್ಡ್ ಡಿಜಿಎಂ ಸಂಗೀತಾ ತಿಳಿಸಿದರು.

ಕೆನರಾ ಬ್ಯಾಂಕ್ ಡಿಜಿಎಂ ಶೈಲೇಂದ್ರ, ಆರ್‌ಬಿಐ ಎಜಿಎಂ ಅರುಣ್ ಇದ್ದರು.

ಮಾರ್ಚ್ ಅಂತ್ಯಕ್ಕೆ ದ.ಕ. ಜಿಲ್ಲೆಯ ಬ್ಯಾಂಕ್‌ಗಳ ಒಟ್ಟು ವ್ಯವಹಾರ 1,31,943.04 ಕೋಟಿ ರೂ.ಆಗಿದ್ದು, ವಾರ್ಷಿಕ ಶೇ. 8.48ರ ಬೆಳವಣಿಗೆ ದಾಖಲಿಸಿದೆ. ಮಾರ್ಚ್ ಅಂತ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು ಬ್ಯಾಂಕ್ ಶಾಖೆಗಳ ಸಂಖ್ಯೆ 663 ಆಗಿದೆ. ಜಿಲ್ಲೆಯ ಬ್ಯಾಂಕ್‌ಗಳ ಒಟ್ಟು ಠೇವಣಿ 76,344.19 ಕೋಟಿ ರು. ಆಗಿದ್ದು, ಶೇ. 7.54 ಬೆಳವಣಿಗೆ ಕಂಡಿದೆ. ಒಟ್ಟು ಸಾಲ 55,595.5 ಕೋಟಿ ರು. ಆಗಿದ್ದು, ಶೇ.9.80ರ ಬೆಳವಣಿಗೆ ದಾಖಲಿಸಿದೆ. ಸಾಲದ ಠೇವಣಿ ಅನುಪಾತ ಶೇ.71.33 ಆಗಿದೆ. ಆದ್ಯತಾ ಮತ್ತು ಆದ್ಯತೇತರ ವಲಯಗಳಲ್ಲಿ ಒಟ್ಟು 58,849.62 ಕೋಟಿ ರು. ಸಾಲ ವಿತರಿಸಿದ್ದು, ತ್ರೈಮಾಸಿಕ ಗುರಿಯಾದ 55,532.13 ಕೋಟಿ ರು. ಗುರಿ ಮೀರಿ ಶೇ. 109.93 ನಿರ್ವಹಣೆ ಸಾಧಿಸಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಶೆಟ್ಟಿ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X