ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪರಾಧ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ ಯಾಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ರೀತಿಯಲ್ಲಿ ಮಾತನಾಡಿ ವೀಡಿಯೋ ಹಾಕಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರು ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 57, 296, ಜೊತೆಗೆ 190 ಬಿಎನ್.ಎಸ್ 2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು
ಮಹೇಶ್ ಶೆಟ್ಟಿ ತಿಮರೋಡಿ ಅವರು ಯೂಟ್ಯೂಬ್ ನಲ್ಲಿ ಜನರ ನಡುವೆ ವೈಮನಸ್ಸು ಉಂಟು ಮಾಡುವ ಹಾಗೂ ಸಾರ್ವಜನಿಕರಲ್ಲಿ ಅಪಾಯದ ಭೀತಿಯನ್ನುಂಟು ಮಾಡುವ ಹೇಳಿಕೆಗಳನ್ನು ಪ್ರಚಾರ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ 353(2), ಬಿಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





