ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ, ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಸಾರ್ವಜನಿಕ ಸಭೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದವಾಗಿ, ಅವರ ಕುಟುಂಬ, ಸಂಸ್ಥೆಗಳ ಬಗ್ಗೆ ಅಪಪ್ರಚಾರ ಹಾಗೂ ಮಾನಹಾನಿಕರವಾಗಿ ಮಾತನಾಡಬಾರದು ಎಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾಷಣ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಫೆ.8 ರಂದು ಬೆಳ್ತಂಗಡಿ ತಾಲೂಕಿನ ಬೆದ್ರ ಬೆಟ್ಟುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನೀಡಿರುವ ಹೇಳಿಕೆಗಳು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಹಾಗೂ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವುದಾಗಿದೆ ಎಂದು ಪ್ರಕರಣ ದಾಖಲಿಸಲಾಗಿದೆ.
Next Story





