ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಹಾಕಿದ ಆರೋಪ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಜ.16: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಪೋಸ್ಟ್ ಮಾಡಿದ ಖಾತೆದಾರ ಅರ್ಮಾನ್ ಹಸನ್ ಎಂಬಾತನ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಠಾಣಾ ಸಿಬ್ಬಂದಿ ಮಂಜುನಾಥ ಜ.15ರಂದು ಠಾಣೆಯಲ್ಲಿ ಸಾಮಾಜಿಕ ಜಾಲತಾಣ ಪರಿಶೀಲಿಸುತ್ತಿರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಖಾತೆ ಹೊಂದಿರುವ ಅರ್ಮಾನ್ ಹಸನ್ ಎಂಬಾತ ಕೈಯಲ್ಲಿ ತಲವಾರು ಮತ್ತು ಕೊಡಲಿ ಹಿಡಿದುಕೊಂಡು ಮ್ಯೂಸಿಕ್‌ಗೆ ರೀಲ್ಸ್ ಮಾಡಿ ಇನ್ ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ. ಆ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





