Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಸ್ರೇಲ್ ನಲ್ಲಿರುವ ಕರಾವಳಿಗರನ್ನು...

ಇಸ್ರೇಲ್ ನಲ್ಲಿರುವ ಕರಾವಳಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರ ಸರಕಾರ ಮಾಡಲಿದೆ: ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ10 Oct 2023 3:34 PM IST
share
ಇಸ್ರೇಲ್ ನಲ್ಲಿರುವ ಕರಾವಳಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರ ಸರಕಾರ ಮಾಡಲಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್ ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ.ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ. ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ. ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸುತ್ತೇನೆ ಎಂದರು.

ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ. ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ. ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು. ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು. ಈಗಲೂ ನಾನು ರಾಯಭಾರ ಕಚೇರಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Tags

coastalIsraelNalin Kumar Kateel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X