Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಮ್ಮನಾಡ್ ಮಾಹಿಂಕಾ ತರವಾಡ್...

ಚಮ್ಮನಾಡ್ ಮಾಹಿಂಕಾ ತರವಾಡ್ ಪ್ರತಿಷ್ಠಾನದಿಂದ 16ನೇ ಸಾಮಾನ್ಯ ಸಭೆ ಮತ್ತು ಸ್ಥಾಪನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ31 Jan 2025 11:25 AM IST
share
ಚಮ್ಮನಾಡ್ ಮಾಹಿಂಕಾ ತರವಾಡ್ ಪ್ರತಿಷ್ಠಾನದಿಂದ 16ನೇ ಸಾಮಾನ್ಯ ಸಭೆ ಮತ್ತು ಸ್ಥಾಪನಾ ದಿನಾಚರಣೆ

ತಲಪ್ಪಾಡಿ : ಚಮ್ಮನಾಡ್ ಮಾಹಿಂಕಾ ತರವಾಡ್ ಪ್ರತಿಷ್ಠಾನದ 16ನೇ ಸಾಮಾನ್ಯ ಸಭೆ ಹಾಗೂ ಸ್ಥಾಪನಾ ದಿನಾಚರಣೆ ಜನವರಿ 26ರಂದು ತಲಪ್ಪಾಡಿಯ ಕಿಯಾಂಝಾ ಗಾರ್ಡನ್ ನಲ್ಲಿ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸುಮಾರು 600 ಟ್ರಸ್ಟಿಗಳು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

ಚಮ್ಮನಾಡ್ ಮಾಹಿಂಕಾ ತರವಾಡ್ ಕುಟುಂಬಕ್ಕೆ ಮೈಸೂರು ಆಡಳಿತಗಾರರ ಆಡಳಿತದ ಸಂದರ್ಭದಲ್ಲಿ ರಾಜ ಸಂಸ್ಥಾನದಿಂದ ವರ್ತಕರಾಗಿ ನೇಮಕಗೊಂಡಿದ್ದ ಚಮ್ಮನಾಡ್ ಮಾಹಿಂಕಾರ ಸುಮಾರು 250 ವರ್ಷಗಳ ಮೂಲವಿದೆ. 1750ರಲ್ಲಿ ಜನಿಸಿ, 1815ರಲ್ಲಿ ನಿಧನರಾದ ಚಮ್ಮನಾಡ್ ಮಾಹಿಂಕಾರ ಪರಂಪರೆಯು 14ನೇ ತಲೆಮಾರಿಗೂ ಮುಂದುವರಿದುಕೊಂಡು ಬಂದಿದೆ. ಶಿಕ್ಷಣಕ್ಕೆ ಆದ್ಯತೆ ನೀಡುವುದಕ್ಕೆ ಹೆಸರಾಗಿರುವ ಈ ಕುಟುಂಬವು, ಸದ್ಯ ತನ್ನ ಪ್ರತಿಷ್ಠಾನದ ಮೂಲಕ ಯುವ ಸದಸ್ಯರ ಶೈಕ್ಷಣಿಕ ಅಭಿವೃದ್ಧಿಯತ್ತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಕಾರ್ಯಕ್ರಮವನ್ನು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಿ.ಪಿ.ಹಬೀಬ್ ರಹಮಾನ್ ಉದ್ಘಾಟಿಸಿದರು. ಅವರು ತಮ್ಮ ಭಾಷಣದಲ್ಲಿ ಕುಟುಂಬದ ಸದಸ್ಯರ ಹಣಕಾಸು ಸ್ಥಿರತೆಯ ಮಹತ್ವದ ಕುರಿತು ಒತ್ತಿ ಹೇಳಿದರು. ಇದರೊಂದಿಗೆ ಮಾಹಿಂಕಾ ಕ್ಯಾಪಿಟಲ್ ಪೂಲ್, ಮಾಹಿಂಕಾ ವರ್ಚುಯಲ್ ಸಿಟಿ ಹಾಗೂ ಮಹಿಂಕಾ ಬಿಸಿನೆಸ್ ಮತ್ತು ಡ್ವೆಲ್ಲಿಂಗ್ ಸೆಂಟರ್ ಒಳಗೊಂಡಂತೆ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡರು.

ಕಾರ್ಯದರ್ಶಿ ಬಿ.ಎಂ.ಸಾದಿಕ್ ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ನಂತರ, ಅಗಲಿದ ಕುಟುಂಬದ ಸದಸ್ಯರಿಗೆ ಕಾರ್ಯದರ್ಶಿ ಎಸ್.ಪಿ.ಎಂ. ಶರಫುದ್ದೀನ್ ಸಂತಾಪ ವ್ಯಕ್ತಪಡಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಎ.ಸಲಾಹುದ್ದೀನ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಖಜಾಂಚಿ ಪಿ.ಸಿ.ಹಾಶಿರ್ ಪ್ರತಿಷ್ಠಾನದ ಹಣಕಾಸು ಖಾತೆಗಳ ಕುರಿತು ವಿವರಿಸಿದರು. ಸಭೆಯನ್ನುದ್ದೇಶಿಸಿ ಉಪಾಧ್ಯಕ್ಷ ಟಿ.ಸಿ.ಎಂ.ಶರೀಫ್ ಹಾಗೂ ಕಾರ್ಯದರ್ಶಿ ಜಲೀಲ್ ಮುಹಮ್ಮದ್ ಮಾತನಾಡಿದರು.

ಸೀಯಾಲ್ ಅಬ್ದುಲ್ ಕರೀಂ ಅವರು ಕೌಟುಂಬಿಕ ದಾಖಲೆಗಳ ಸುಧಾರಣೆಯ ಅಗತ್ಯ ಹಾಗೂ ಚಮ್ಮನಾಡ್ ಮಾಹಿಂಕಾ ತರವಾಡ್ ಸದಸ್ಯರ ದೊಡ್ಡ ಸಮಾವೇಶವನ್ನು ಆಯೋಜಿಸುವ ಸಾಧ್ಯತೆಯ ಕುರಿತು ಯೋಚಿಸಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ಆತಿಥ್ಯವನ್ನು ಮಂಗಳೂರಿನ ಪ್ರತಿಷ್ಠಿತ ಉದ್ಯಮಿ ಪಿ.ಬಿ.ಅಬ್ದುಲ್ ಹಮೀದ್ ವಹಿಸಿದ್ದರು. ನಂತರ ಇಹ್ತಿಶಾಮ್ ಅಹ್ಮದ್ ರಫಾಯಿ ಅವರು ವಂದಿಸಿದರು. ಸಂಗೀತ ಪ್ರದರ್ಶನ ಹಾಗೂ ಮಕ್ಕಳು, ವಯಸ್ಕರಿಗಾಗಿ ಆಯೋಜಿಸಲಾಗಿದ್ದ ಮನರಂಜನೆ ಆಟಗಳೊಂದಿಗೆ ಕಾರ್ಯಕ್ರಮವು ಸಮಾರೋಪಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X