ಚೇಳಾಯರು | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಆರೋಪಿ ವೃದ್ಧನ ಬಂಧನ

ಸುರತ್ಕಲ್, ಡಿ.13: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಪೊಕ್ಸೊ ಕಾಯ್ದೆಯಡಿ ಆರೋಪಿಯನ್ನು ಚೇಳಾಯರು ಎಂಬಲ್ಲಿ ಬಂಧಿಸಿದ್ದಾರೆ.
ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆ ರಸ್ತೆಯಾಗಿ ಬಂದ ಆರೋಪಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ದೂರಿನಲ್ಲಿ ಸಂತ್ರಸ್ತೆ ತಿಳಿಸಿದ್ದಾಳೆ.
ಈ ಘಟನೆ 2025ರ ಅಕ್ಟೋಬರ್‌ನಲ್ಲಿ ನಡೆದಿದ್ದು, ಆ ಬಳಿಕ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಹಾಗಾಗಿ ಆಕೆಯ ತಾಯಿ ವೈದ್ಯರ ಬಳಿ ಕರೆದೊಯ್ದು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಬಾಲಕಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ತಿಳಿಸಿದ್ದಾಗಿ ಪೊಲೀಸರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿಂತೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.





