ಮೇ 16ರಂದು ಮಂಗಳೂರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ

ಸಿಎಂ ಸಿದ್ದರಾಮಯ್ಯ
ಮಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೇ 16ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ, ವೀಕ್ಷಣೆ ನಡೆಸಲಿದ್ದಾರೆ. ಮಾತ್ರವಲ್ಲದೆ ಉಳ್ಳಾಲ ಉರೂಸ್ಗೆ ಭೇಟಿ ನೀಡಲಿದ್ದಾರೆ.
ಸಂಜೆ 3.15ಕ್ಕೆ ಬಜ್ಪೆಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿರುವ ಅವರು, 3.35ಕ್ಕೆ ಉರ್ವಾಮಾರುಕಟ್ಟೆ ಬಳಿಯ ಮಂಗಳೂರು ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ನೆರವೇರಿಸಲಿದ್ದಾರೆ. 4.15ಕ್ಕೆ ಪಡೀಲ್ನ ದ.ಕ. ಜಿಲ್ಲಾಧಿಕಾರಿ ನೂತನ ಕಚೇರಿ ‘ಪ್ರಜಾಸೌಧ’ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರಕಾರಿ ಸವಲತ್ತುಗಳ ವಿತರಣೆ ನೆರವೇರಿಸಲಿದ್ದಾರೆ. ಸಂಜೆ 6.30ಕ್ಕೆ ಉಳ್ಳಾಲದ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾದ ಉರೂಸ್ಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





