ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛ ಮಂಗಳೂರು ಅಭಿಯಾನ

ಮಂಗಳೂರು,ಡಿ.7 : ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಮಂಗಳೂರು ಅಭಿಯಾನದಡಿ ಸ್ವಚ್ಛತಾ ಶ್ರಮದಾನವು ನಗರದ ಹಂಪನಕಟ್ಟೆ ಮಿನಿ ವಿಧಾನಸೌಧದ ಆವರಣದಲ್ಲಿ ನೆರವೇರಿತು.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮತ್ತು ನಿಟ್ಟೆ (ಪರಿಗಣಿತ) ವಿವಿ ಉಪಕುಲಪತಿ ಪ್ರೊ.ಡಾ.ಎಂ.ಎಸ್.ಮೂಡಿತ್ತಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಿಟ್ಟೆ ಫಿಸಿಯೋಥೆರಪಿ ಸಂಸ್ಥೆಯ ಪ್ರಾಂಶುಪಾಲ ಡಾ.ಧನೇಶ್ ಕುಮಾರ್, ಬಿ.ಗೋಪಿನಾಥ್ರಾವ್, ನಿಟ್ಟೆ ಫಿಸಿಯೋಥೆರಪಿ ಸಂಸ್ಥೆಯ ಪ್ರೊ.ಪುರುಷೋತ್ತಮ ಚಿಪ್ಪಳ, ಡಾ.ರಾಕೇಶ್, ಡಾ.ಜಯೇಶ್, ಡಾ.ನಿತ್ಯಲ್, ಡಾ. ರುಚಿತಾ, ದಿಲ್ರಾಜ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
Next Story





