Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಚ್ಛತೆ ನಿಜವಾದ ದೇವರ ಸೇವೆ: ಎನ್....

ಸ್ವಚ್ಛತೆ ನಿಜವಾದ ದೇವರ ಸೇವೆ: ಎನ್. ವಿನಯ ಹೆಗ್ಡೆ

ಸ್ವಚ್ಛ ಮಂಗಳೂರು 2.0 ಅಭಿಯಾನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2023 9:56 PM IST
share
ಸ್ವಚ್ಛತೆ ನಿಜವಾದ ದೇವರ ಸೇವೆ: ಎನ್. ವಿನಯ ಹೆಗ್ಡೆ

ಮಂಗಳೂರು, ಅ.1: ಸ್ವಚ್ಛತೆ ನಿಜವಾದದೇವರ ಸೇವೆ. ಸ್ವಚ್ಛಾಂಜಲಿ ಕಾರ್ಯಕ್ರಮದ ಮುಖಾಂತರ ಮಂಗಳೂರು ಜನತೆಗೆ ತನ್ಮೂಲಕ ಸಮಾಜಕ್ಕೆ ಈ ಸೇವೆ ಅರ್ಪಣೆಯಾಗಲಿ. ರಾಮಕೃಷ್ಣ್ಣ ಮಠದ ಸೇವೆ ಮಂಗಳೂರಿಗೆ ನಿರಂತರ ವಾಗಿರಲಿ. ರಾಮಕೃಷ್ಣ ಮಠ ಮತ್ತು ಮಂಗಳೂರಿನ ಜನತೆಯ ನಡುವೆಉತ್ತಮ ಸಂಬಂಧ ಮುಂದುವರಿಯಲಿ ಇದನ್ನು ಉಳಿಸುವ ಪ್ರಯತ್ನ ನಮ್ಮಿಂದಾಗಲಿ ಎಂದು ನಿಟ್ಟೆ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಹೇಳಿದ್ದಾರೆ.

ಪ್ರಧಾನ ಮಂತ್ರಿಗಳ ಕರೆಯಂತೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ನಡೆದ ಸ್ವಚ್ಛಾಂಜಲಿ - ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ದಲ್ಲಿಎರಡನೇ ಹಂತದ ಸ್ವಚ್ಛ ಮಂಗಳೂರು ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ರಾಮಕೃಷ್ಣ ಮಠದಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಚ್ಛಾಂಜಲಿಯ ಮೂಲಕ ಸ್ವಚ್ಛತೆಯ ಈ ಸೇವೆ, ಭಾರತ ಮಾತೆಗೆ ಹಾಗೂ ಸ್ವಚ್ಛತೆಯ ಕನಸು ಕಂಡ ಮಹಾತ್ಮಾ ಗಾಂಧೀಜಿಯವರಿಗೆಅರ್ಪಣೆಯಾಗಲಿ. ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸು ವುದೇ ನಮ್ಮ ಮುಖ್ಯಉದ್ದೇಶ. ಎರಡನೇಆವೃತ್ತಿಯ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ಜನಜಾಗೃತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ಸ್ವಚ್ಛತೆಯ ಈ ಕಾರ್ಯ ನಿರಂತರವಾಗಿ ಮುಂದುವರೆಯಬೇಕು. ನಮಗೆರಾಮಕೃಷ್ಣ ಮಠದ ಮಾರ್ಗದರ್ಶನಅಗತ್ಯ. ಮಹಾನಗರ ಪಾಲಿಕೆಯ ವತಿಯಿಂದ ಈ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ದಕ್ಷಿಣಕನ್ನಡ ಲೋಕಸಭಾ ಸಂಸದರಾದ ನಳಿನ್ ಕುಮಾರ್‌ಕಟೀಲ್ ಭಾಗವಹಿಸಿದರು. ಗೌರವ ಅತಿಥಿಗಳಾಗಿ ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸಕಾಮತ್ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪಾಲ್ಗೊಂಡರು.

ವಿಶೇಷ ಆಹ್ವಾನಿತರಾಗಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆನಂದ್ ಹಾಗೂ ಕೆನರಾ ಬ್ಯಾಂಕ್ ಮಂಗಳೂರು ವೃತ್ತಕಚೇರಿಯ ಉಪಪ್ರಧಾನ ವ್ಯವಸ್ಥಾಪಕರಾದ ಸುಧಾಕರ ಕೊಟ್ಟಾರಿ ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಮೊದಲ ಬಾರಿಗೆ ಬೃಹತ್ ಪ್ಲಾಗ್ಗಿಂಗ್ ಸಂಪನ್ನ

ಈ ಸಂದರ್ಭದಲ್ಲಿ ನಡೆದ ಬೃಹತ್ ಪ್ಲಾಗಿಂಗ್‌ಅಭಿಯಾನವನ್ನು ಎಂ. ಆರ್. ಪಿ. ಎಲ್. ಸಂಸ್ಥೆಯ ಎಚ್.ಅರ್. ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಕೃಷ್ಣ ಹೆಗ್ಡೆ ಉದ್ಘಾಟಿಸಿದರು. ಪ್ಲಾಗಿಂಗ್ ಎಂಬ ವಿನೂತನ ಪ್ರಯೋಗವು ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಯಶಸ್ವಿಯಾಗಿ ನಡೆಯಿತು. ಜಾಗಿಂಗ್ ನಡೆಸುತ್ತಾ ಕಸವನ್ನು ಹೆಕ್ಕುವ ಮೂಲಕ ಸ್ವಯಂ ಸೇವಕರು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.

ಪ್ರಮುಖ ಸಂಘ ಸಂಸ್ಥೆಗಳು ಭಾಗಿ

ಎಂ. ಆರ್. ಪಿ. ಎಲ್., ಕೆನರಾ ಬ್ಯಾಂಕ್, ಶ್ರೀರಾಮ್ ಟ್ರಾನ್ಸ್‌ಪೋರ್ಟ್ಸ್, ಶ್ರೀನಿವಾಸ ಫೈನಾನ್ಸ್, ಮಂಗಳೂರು ಮಹಾ ನಗರ ಪಾಲಿಕೆ ಸೇರಿದಂತೆ ಹಲವಾರು ಸಂಸ್ಥೆಯ ಉದ್ಯೋಗಿಗಳು ನಿಟ್ಟೆ ವಿಶ್ವವಿದ್ಯಾಲಯ, ಶ್ರೀನಿವಾಸ ವಿಶ್ವವಿದ್ಯಾಲಯ, ಸಹ್ಯಾದ್ರಿ ವಿದ್ಯಾಸಂಸ್ಥೆ, ಕೆನರಾ ಕಾಲೇಜು, ಎಸ್. ಡಿ. ಎಂ. ವ್ಯವಹಾರಅಧ್ಯಯನಕಾಲೇಜು, ಎಸ್. ಡಿ. ಎಂ. ಸ್ನಾತಕೋತ್ತರ ಅಧ್ಯಯನ ಕಾಲೇಜು, ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 800 ಕ್ಕೂ ಹೆಚ್ಚು ಸ್ವಯಂಸೇವಕರು ಈ ಶ್ರಮದಾನದಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X