ಅನಧಿಕೃತ ಅಂಗಡಿಗಳ ತೆರವು : ಮನಪಾ ಆಯುಕ್ತ

ಮಂಗಳೂರು : ನಗರದಲ್ಲಿ ಅನಧಿಕೃತ ಅಂಗಡಿಗಳನ್ನು ಟೈಗರ್ ಕಾರ್ಯಾಚರಣೆಯ ಮೂಲಕ ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ಉದ್ದಿಮೆ ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ರಸ್ತೆ ಬದಿ ಹಾಗೂ ಕಾಲು ದಾರಿಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ರಸ್ತೆತಡೆ ಉಂಟಾಗುತ್ತಿರುವ ದೂರುಗಳು ಬಂದಿವೆ.
ಹಾಗಾಗಿ ಟೈಗರ್ ಕಾರ್ಯಾಚರಣೆ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
Next Story





