ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 'ಸುವರ್ಣ ಸಂಭ್ರಮ' ಸಮಾರೋಪ ಸಮಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ಸಂಜೆ ನಡೆಯಿತು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸುವರ್ಣ ಮಹೋತ್ಸವದ ಅಂಗವಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಾದ ಆನಂದ ಶೆಟ್ಟಿ,ರವೀಂದ್ರ ಶೆಟ್ಟಿ, ಹರ್ಷ, ಪಿ.ಬಿ.ಹರೀಶ್ ರೈ,ಜಗನ್ನಾಥ ಶೆಟ್ಟಿ ಬಾಳ ಹಾಗೂ ಹಾಲಿ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಯವರ ಸನ್ಮಾನ ಕಾರ್ಯಕ್ರಮ ವನ್ನು ಶಾಸಕ ಉಮಾನಾಥ ಕೋಟ್ಯಾನ್,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ,ಮಾಜಿ ಸಚಿವ ರಾದ ಅಭಯ ಚಂದ್ರ ಜೈನ್, ನಾಗ ರಾಜ ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು. ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ,ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ದ.ಕ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿಯ ಪ್ರಧಾನ ಸಂಚಾಲಕ ಪಿ.ಬಿ. ಹರೀಶ್ ರೈ ,ಮಂಗಳೂರು ಪ್ರೆಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ಅನ್ನು ಮಂಗ ಳೂರು,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮತ್ತು ವಿವಿಧ ತಾಲೂಕು ಸಂಘಗಳ ಅಧ್ಯಕ್ಷ ರುಗಳಾದ ನಾಗರಾಜ್ ಎನ್ ಕೆ ಕಡಬ, ಸಿದ್ಧಿಕ್ ನೀರಾಜೆ ಪುತ್ತೂರು,ಲೋಕೇಶ್ ಪೆರ್ಲಂಪಾಡಿ ಸುಳ್ಯ,ಸೀತಾರಾಮ ಆಚಾರ್ಯ ಮೂಡುಬಿದಿರೆ, ನಿಶಾಂತ್ ಶೆಟ್ಟಿ ಮೂಲ್ಕಿ, ವಸಂತ ಕೊಣಾಜೆ ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನ ಕಾರ್ಯದರ್ಶಿ ಮೌನೇಶ್ ವಿಶ್ವ ಕರ್ಮ ರಿಗೆ ಸುವರ್ಣ ಸಂಭ್ರಮದ ಗೌರವ ಸಲ್ಲಿಸಲಾಯಿತು.
ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕಾರಿ ಸಮಿತಿ ಸದಸ್ಯ ಆರಿಫ್ ಪಡುಬಿದ್ರೆ ಸ್ವಾಗತಿಸಿದರು, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.
ಸಮಾರಂಭದಲ್ಲಿ ಸತೀಶ್ ಇರಾ ಅಪುಲ್ ಇರಾ, ಮತ್ತು ದಯ ಕುಕ್ಕಾಜೆ ನೇತೃತ್ವದಲ್ಲಿ ಛಾಯಾಚಿತ್ರ ಪ್ರದರ್ಶನ ರವೀಂದ್ರ ಪ್ರಭು,ಮಲ್ಲಿಕಾ ಶೆಟ್ಟಿ, ಸಂತೋಷ್ ಬೇಂಕ್ಯ,ಅಶೋಕ್ ಸಾಮಂತ್, ಜಿತೇಂದ್ರ ಕುಂದೇಶ್ವರ ,ಸತೀಶ್ ಇರಾ, ಚೇತನ್ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.







