Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.20ರಿಂದ ಕರಾವಳಿ ಉತ್ಸವ; ಪಿಲಿಕುಳ...

ಡಿ.20ರಿಂದ ಕರಾವಳಿ ಉತ್ಸವ; ಪಿಲಿಕುಳ ಪರ್ಬ ವಿಶೇಷ ಆಕರ್ಷಣೆ

ವಾರ್ತಾಭಾರತಿವಾರ್ತಾಭಾರತಿ18 Dec 2025 8:08 PM IST
share
ಡಿ.20ರಿಂದ ಕರಾವಳಿ ಉತ್ಸವ; ಪಿಲಿಕುಳ ಪರ್ಬ ವಿಶೇಷ ಆಕರ್ಷಣೆ

ಮಂಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ನೀಡುವುದರೊಂದಿಗೆ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಗಳನ್ನುಆಯೋಜಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ.

ಇದೇ ಸಂದರ್ಭದಲ್ಲಿ ಖ್ಯಾತ ಗಾಯಕರಾದ ಕೈಲಾಸ್ ಕೇರ್, ವಿಜಯ ಪ್ರಕಾಶ್ ರಿಂದ ಸಂಗೀತ ಸಂಜೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದ ಭಾರತೀಯ ಕಲಾವಿದರಿಂದ ವೈವಿಧ್ಯಮಯವಾದ ಸಾಂಸ್ಕೃತಿಕ ಮನರಂಜನಾ ಪ್ರದರ್ಶನವನ್ನು ಆಯೋಜಿಸಲಾಗಿದೆ ಹಾಗೂ ಜಿಲ್ಲೆಯ ಕಡಲ ತೀರಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು. ಜಿಲ್ಲೆಯ ಬೀಚ್‌ಗಳಲ್ಲಿ ಕರಾವಳಿ ಉತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಕಲಾ ಪರ್ಬ ಕಾರ್ಯಕ್ರಮ, ಫಲಪುಷ್ಪ ಪ್ರದರ್ಶನ, ಸ್ವೀಟ್ ಫುಡ್ ಫೆಸ್ಟಿವಲ್ ಹಾಗೂ ವಿವಿಧ ಜಾತಿಯ ಶ್ವಾನಗಳ ಪ್ರದರ್ಶನ ನಡೆಯಲಿದೆ.ಮಂಗಳೂರು ನಗರದಲ್ಲಿ ಚಲನಚಿತ್ರ ಉತ್ಸವ ನಡೆಯಲಿದೆ.ನೆಹರು ಮೈದಾನದ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಫುಟ್ಬಾಲ್ ಕ್ರೀಡಾ ಸ್ಪರ್ಧೆ ನಡೆಯಲಿದೆ.

ಪಿಳಿಕುಳ ಉದ್ಯಾನವನದಲ್ಲಿಯೂ ಗಾಲ್ಫ್ ಪಂದ್ಯಾವಳಿ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ನಗರದ ಹಾಗೂ ಕಡಲ ತೀರದ ಸೊಬಗನ್ನು ಆನಂದಿಸಲು ಅನುಕೂಲವಾಗುವಂತೆ ಸುಲ್ತಾನ್ ಬತ್ತೇರಿ ಹಾಗೂ ಪಣಂಬೂರಿನಲ್ಲಿ ಹೆಲಿಕಾಪ್ಟರ್ ಸಂಚಾರ ಕೂಡ ಆಯೋಜಿಸಲಾಗಿದೆ.

ತಣ್ಣೀರು ಬಾವಿ ಬೀಚ್‌ನಲ್ಲಿ ಮುಸ್ಸಂಜೆಯ ಸಮಯದಲ್ಲಿ ಕಡಲ ತೀರಕ್ಕೆ ವಾಯು ವಿಹಾರಕ್ಕೆಂದು ಹೋಗುವ ಜನತೆಗೆ ಕಡಲ ತೀರದಲ್ಲಿ ಮನಸ್ಸಿಗೆ ಮುದ ನೀಡುವಂತೆ ಮ್ಯೂಸಿಕ್ ಫೆಸ್ಟಿವಲ್ (ಸಂಗೀತ ಉತ್ಸವ) ನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಅತ್ಯಂತ ಉತ್ಸಾಹದಿಂದ ಕುಟುಂಬ ಸಮೇತರಾಗಿ ಹಾಗೂ ಸ್ನೇಹಿತರೊಂದಿಗೆ ಭಾಗವಹಿಸಿ, ಕರಾವಳಿ ಉತ್ಸವವನ್ನು ಯಶಸ್ವೀಗೊಳಿಸಲು ಜಿಲ್ಲಾಡಳಿತದ ಪರವಾಗಿ ವಿನಂತಿಸುತ್ತೇವೆ. ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕರಾವಳಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮನರಂಜನಾ ಕಾರ್ಯಕ್ರಮಗಳು ಕರಾವಳಿ ಜನತೆಯ ಒತ್ತಡದ ಜೀವನಕ್ಕೆ ವಿರಾಮ ನೀಡುವುದರೊಂದಿಗೆ ಖುಷಿ ಇಮ್ಮಡಿಗೊಳಿಸುವುದರಲ್ಲಿ ಅಚ್ಚರಿಯೇನಿಲ್ಲ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆಯನ್ನು ಸವಿಯಲು ಕರಾವಳಿ ಉತ್ಸವವು ಸ್ಥಳೀಯರಿಗೆ ಹಾಗೂ ಪ್ರವಾಸಿಗರಿಗೆ ಪ್ರಮುಖ ವೇದಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಡಿ‌20ರಂದು ಕರಾವಳಿ ಉತ್ಸವ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಗೊಳ್ಳಲಿದೆ.ಡಿ‌21ರಂದು ತಣ್ಣೀರು ಬಾವಿ ಬ್ಲೂ ಪ್ಲ್ಯಾಗ್ ಬೀಚ್ ನಲ್ಲಿ ಕೇಕ್ ಮತ್ತು ವೈನ್ ಉತ್ಸವ ನಡೆಯಲಿದೆ.ಡಿ.23ರಿಂದ ಜ.2ರವರೆಗೆ ಸುಲ್ತಾನ್ ಬತ್ತೇರಿ ಪಣಂಬೂರು ಬೀಚ್ ನಲ್ಲಿ ಹೆಲಿಕಾಪ್ಟರ್ ರೈಡ್ ನಡೆಯಲಿದೆ.

ಪಿಲಿಕುಳದ ಪುಟಾಣಿ ಹುಲಿ ಮರಿ ವಿಶೇಷ ಆಕರ್ಷಣೆಯಾಗಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನಾರ್ವಡೆ ವಿನಾಯಕ ಕರ್ಬಾರಿ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅ್ಯಂಟೊನಿ ಎಸ್ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ರಾಜು ಕೆ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X