Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಸರ್ಕಾರದ ಭ್ರಷ್ಟಾಚಾರ ಮುಚ್ಚಿ...

ರಾಜ್ಯ ಸರ್ಕಾರದ ಭ್ರಷ್ಟಾಚಾರ ಮುಚ್ಚಿ ಹಾಕಲು ದಬ್ಬಾಳಿಕೆ: ನಳಿನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ14 Sept 2023 7:48 PM IST
share
ರಾಜ್ಯ ಸರ್ಕಾರದ ಭ್ರಷ್ಟಾಚಾರ ಮುಚ್ಚಿ ಹಾಕಲು ದಬ್ಬಾಳಿಕೆ: ನಳಿನ್ ಕುಮಾರ್

ಪುತ್ತೂರು: ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನವಾಗಿ ದ್ದಾರೆ. ಇದೊಂದು ಭ್ರಷ್ಟಾಚಾರದ ಸರ್ಕಾರ. ಭ್ರಷ್ಟಾಚಾರಿಗಳ ಕೂಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರೆ ಅವರ ಮೇಲೆಯೇ ಕೇಸು ದಾಖಲು ಮಾಡಿ ತನ್ನ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಗುರುವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಅವರು ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಸಚಿವ ಸುಧಾಕರ್ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಜಾಗವನ್ನು ಅಕ್ರಮ ಮಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಗ್ಗೆ ಎಫೈಆರ್ ಆಗಿದೆ. ಇನ್ನೊಂದೆಡೆ ಚೆಲುವರಾಯಸ್ವಾಮಿ ಮೇಲೆ ಅಧಿಕಾರಿಗಳೇ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಆದರೂ ಮುಖ್ಯ ಮಂತ್ರಿ ಮೌನವಾಗಿದ್ದಾರೆ. ಇದೊಂದು ಭ್ರಷ್ಟಾಚಾರದ ಸರ್ಕಾರ ಎಂದರು.

ಸರ್ಕಾರದ ವಿರುದ್ದ ಆರೋಪ ಮಾಡಿದರೆ ಅಂತಹ ಮಾಧ್ಯಮಗಳ ಮೇಲೆ, ಸೋಶಿಯಲ್ ಮೀಡಿಯಾಗಳ ಮೇಲೆಯೇ ಕೇಸು ದಾಖಲಿಸುತ್ತಾರೆ. ಭ್ರಷ್ಟಾಚಾರದ ಮುಚ್ಚಿ ಹಾಕಲು ಇಂತಹ ದಬ್ಬಾಳಿಕೆ ನಡೆಸಲಾಗುತ್ತಿದೆ. ರೈತರ ವಿದ್ಯಾನಿಧಿ ಮೂಲಕ ಕಿಸಾನ್ ಸಮ್ಮಾನ್ 4ಸಾವಿರ ನೀಡಲಾಗುತ್ತಿದ್ದ ಯೋಜನೆಯನ್ನು ರದ್ದು ಪಡಿಸಲಾಗಿದೆ. 3 ತಿಂಗಳಲ್ಲಿ 275 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ರೈತರು ಬರದಿಂದ ತತ್ತರಿಸುತ್ತಿದ್ದಾಗ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇದೊಂದು ರೈತ ವಿರೋಧಿ ಸರ್ಕಾರ, ಭ್ರಷ್ಟಾಚಾರ ಪರವಾದ ಸರ್ಕಾರ ಎಂದು ಅವರು ಆರೋಪಿಸಿದರು.

ಈಗಾಗಲೇ ಪುತ್ತೂರಿನ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ರಸ್ತೆ ಕಾಮಗಾರಿ ಮುಗಿದಿದೆ. ವಿವೇಕಾನಂದ ಕಾಲೇಜು ಸಂಪರ್ಕದ ರೈಲ್ವೇ ಮೇಲ್ಸೇತುವೆ ಅಗಲೀಕರಣಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಈ ರಸ್ತೆಗೆ ಕಲ್ಲಡ್ಕದಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯ ನಡೆಯಲಿರುವುದರಿಂದ ಕಾಮಗಾರಿ ಸ್ಪಲ್ಪ ನಿಧಾನವಾಗಿದೆ. ಉಳಿದಂತೆ ಉಪ್ಪಿನಂಗಡಿಯಿಂದ ಗುಂಡ್ಯ ತನಕ ಕಾಮಗಾರಿ ನಡೆಯುತ್ತಿದೆ. ಉಪ್ಪಿನಂಗಡಿಯಿಂದ ಮಾಣಿಯ ತನಕ ಕಾಮಗಾರಿ ಮುಂದೆ ನಡೆಯಲಿದೆ. ಎಲ್ಲಾ ಕಾಮಗಾರಿಗಳಿಗೆ ವೇಗ ನೀಡುವ ಕೆಲಸ ಕಾರ್ಯ ಮಾಡಲಾಗುವುದು ಎಂದರು.

ಬೆಂಗಳೂರಿನಿಂದ ಮೈಸೂರು ಹಾಗೂ ಮೈಸೂರಿನಿಂದ ಕೊಡಗು ತನಕ ಚತುಷ್ಪಥ ರಸ್ತೆ ಕಾಮಗಾರಿಗೆ ಆದೇಶ ಬಂದಿದೆ. ಮಡಿಕೇರಿಯಿಂದ ಮಾಣಿಯ ತನಕದ ರಸ್ತೆಯನ್ನು ಈ ಹಿಂದೆ ಕೆಆರ್‍ಡಿಸಿಎಲ್ ಅಭಿವೃದ್ಧಿ ಪಡಿಸಿತ್ತು. ಆದರೆ ಕೆಆರ್‍ಡಿಸಿಎಲ್‍ ನಿಂದ ಹಸ್ತಾಂತರ ಪ್ರಕ್ರಿಯೆ ತಡವಾಗಿರುವುದರಿಂದ ಸ್ಪಲ್ವ ತಡವಾಗಿದೆ. ಇದೀಗ ರಸ್ತೆಯ ಸರ್ವೇ ಕಾರ್ಯಗಳು ಮುಗಿದಿದೆ. ಮುಂದಿನ ದಿನಗಳಲ್ಲಿ ನಿತಿನ್ ಗಡ್ಕರಿ ಅವರು ಮುಂದಿನ ಫೇಸ್‍ನಲ್ಲಿ ಅದನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತನೆ ಮಾಡಲು ಒಪ್ಪಿಗೆ ನೀಡಿದ್ದಾರೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ, ಮುಖಂಡರಾದ ಚಂದ್ರಶೇಖರ ರಾವ್ ಬಪ್ಪಳಿಗೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X