Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ...

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಆಯೋಗ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Oct 2023 9:52 PM IST
share
ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಆಯೋಗ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿದ್ದು, ಈ ಬಗ್ಗೆ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಶಿಕ್ಷಕರಿಗೆ ತರಬೇತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೆಸ್ವಾಮಿ ಕೆ.ಟಿ. ಸೂಚಿಸಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಶಾಲೆ, ಪಂಚಾಯತ್ ಕಟ್ಟಡ ಹಾಗೂ ಬಸ್‌ಸ್ಟ್ಯಾಂಡ್‌ಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಮತ್ತು 112ನ್ನು ಕಡ್ಡಾಯವಾಗಿ ಬರೆಯಬೇಕು. ಜಿಲ್ಲೆಯಲ್ಲಿ ಶಾಲೆ, ವಸತಿ ನಿಲಯಗಳ ಕಟ್ಟಡದ ಮೇಲೆ ವಿದ್ಯುತ್ ತಂತಿ ಹಾದು ಹೋಗು ವುದು ಅಥವಾ ಶಾಲಾ ಮೈದಾನದಲ್ಲಿ ಟ್ರಾನ್ಸ್‌ಫಾರ್ಮರ್ ಕಂಬಗಳಿದ್ದರೆ ಅಂತಹ ಶಾಲೆಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು. ಪ್ರತಿ ಗ್ರಾಮದಲ್ಲಿ ಅತೀ ಹೆಚ್ಚು ಮಕ್ಕಳು ಇರುವ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ ನಡೆಸಿ ವಿದ್ಯಾರ್ಥಿಗಳು ಸ್ವತಂತ್ರ್ಯವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳುವಂತೆ ಪ್ರೇರೆಪಿಸಬೇಕು ಎಂದು ಡಾ. ತಿಪ್ಪೆಸ್ವಾಮಿ ಕೆ.ಟಿ. ತಿಳಿಸಿದರು.

ಮೈತ್ರಿ ಮುಟ್ಟಿನ ಕಪ್ ಯೋಜನೆಯಲ್ಲಿ 11,556 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇಂದ್ರಧನುಷ್ ಕಾರ್ಯಕ್ರಮದಡಿ 0-6 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಸಭೆಗೆ ಮಾಹಿತಿ ನೀಡಿದರು.

*ಟ್ಯೂಷನ್ ಸೆಂಟರ್ ನೋಂದಣಿ ಕಡ್ಡಾಯ: 1ರಿಂದ 10ನೇ ತರಗತಿವರೆಗೆ ಟ್ಯೂಷನ್ ಕೇಂದ್ರಗಳು ಶಾಲಾ ಶಿಕ್ಷಣ ಇಲಾಖೆ ಯಲ್ಲಿ ಹಾಗೂ ಪಿಯುಸಿ ಟ್ಯೂಷನ್ ಕೇಂದ್ರಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ನೋಂದಣಿ ಮಾಡಬೇಕು. ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸುವಂತೆ ಅವರು ಸೂಚಿಸಿದರು.

*ಭಿಕ್ಷಾಟಣೆ: ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟಣೆ ಮಾಡುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ದ.ಕ. ಜಿಲ್ಲೆಯಿಂದ ವರದಿಯಾಗುತ್ತಿವೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು. ಪೊಲೀಸರು, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಸಹಾಯವಾಣಿ ಜಂಟಿಯಾಗಿ ಕಾರ್ಯನಿರ್ವಹಿಸಿ ಭಿಕ್ಷಾಟಣೆಯಿಂದ ಮಕ್ಕಳನ್ನು ರಕ್ಷಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಎಂ.ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X