Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿಯಲ್ಲಿ ಕೋಮುವಾದ ನಿರ್ನಾಮಕ್ಕೆ...

ಕರಾವಳಿಯಲ್ಲಿ ಕೋಮುವಾದ ನಿರ್ನಾಮಕ್ಕೆ ಬದ್ಧ: ಜಯಶ್ರೀಕೃಷ್ಣ ಸಮಿತಿ

ವಾರ್ತಾಭಾರತಿವಾರ್ತಾಭಾರತಿ30 July 2025 2:32 PM IST
share

ಮಂಗಳೂರು, ಜು. 20: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮಾರಕವಾಗಿರುವ ಕೋಮುವಾದವನ್ನು ನಿರ್ನಾಮ ಮಾಡಲು ಬದ್ಧವಾಗಿರುವುದಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಘೋಷಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಕೋಮುವಾದದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಹಲವು ಜೀವಗಳು ಬಲಿಯಾಗಿವೆ. ಮುಂದೆ ಅಂತಹ ಘಟನೆಗಳು ಮರುಕಳಿಸದಿರುವ ನಿಟ್ಟಿನಲ್ಲಿ ಸಮಿತಿಯ ಮುಂಬೈಯಲ್ಲಿರುವ ಎಲ್ಲಾ ಸದಸ್ಯರು ಒಂದಾಗಿದ್ದೇವೆ ಎಂದು ಅವರು ಹೇಳಿದರು.

ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ ಮಾತನಾಡಿ, ಸಮಿತಿಯನ್ನು ದ.ಕ. ಮತ್ತು ಉಡುಪಿಯ ಉದ್ದಗಲಕ್ಕೂ ವಿಸ್ತರಿಸಲಾಗಿದೆ. ಉಭಯ ಜಿಲ್ಲೆಗಳ ಪ್ರತಿ ತಾಲೂಕಿನಿಂದ ಸಂಪನ್ಮೂಲ ಭರಿತ ಐದು ಮಂದಿಯ ಸದಸ್ಯರನ್ನು ಮಾಡಿ ಇಲ್ಲಿನ ಸುರಕ್ಷತೆ, ಹಾಗೂ ಸೌಹಾರ್ದತೆಯ ದೃಷ್ಟಿಯಿಂದ ಕಾರ್ಯ ನಿರ್ವಹಿಸಲು ಕ್ರಮ ವಹಿಸಲಾಗಿದೆ ಎಂದರು.

ಪ್ರವಾಸೋದ್ಯಮಕ್ಕೆ ಆದಯತೆ ನೀಡುವ ನಿಟ್ಟಿನಲ್ಲಿ ಇಲ್ಲಿನ ದೇವಾಲಯಗಳ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದು ಹಾಗೂ ಕಡಲ್ಕೊರೆತ ಸಮಸ್ಯೆಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿಯೂ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಹೇಳಿದರು.

ಸಮಿತಿಯ ಹೈದರ್ ಪರ್ತಿಪ್ಪಾಡಿ ಮಾತನಾಡಿ, ಜಿಲ್ಲೆಯ ಸೌಹಾರ್ದತೆಗೆ ಮುಂಬೈಯಲ್ಲಿ ನೆಲೆಸಿರುವ ಕರಾವಳಿಗರು ಕೈಜೋಡಿಸಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು.

ವಿಲ್ಸನ್ ಅವರು ಮಾತನಾಡಿ, ಮಾನವೀಯತೆಯೇ ಶ್ರೇಷ್ಠ ಧರ್ಮ ಎಂಬುದು ಯುವಕರಿಗೆ ಮನದಟ್ಟಾಗುವ ನಿಟ್ಟಿನಲ್ಲಿ ಸಮಿತಿ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.

ಸಮಿತಿಯ ರಾಜ್ಯ ಸಂಯೋಜಕ ಜಗದೀಶ್ ಅಧಿಕಾರಿ ಕೆ.ಪಿ. ಮಾತನಾಡಿ, ಎಲ್ಲಾ ವಿಚಾರದಲ್ಲೂ ಮುಂಚೂಣಿಯಲ್ಲಿರುವ ಕರಾವಳಿಯಲ್ಲಿ ಮತೀಯ ವಿಚಾರಕ್ಕೆ ನಡೆಯುವ ಸಂಘರ್ಷಗಳಿಗೆ ಸಂಬಂಧಿಸಿ ಸರಕಾರ ಗಂಭೀರವಾಗಿ ಪರಿಗಣಿಸಿ, ನಮ್ಮ ಬೇಡಿಕೆಗೆ ಪೂರಕವಾಗಿ ಉತ್ತಮ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಎಂದರು.

80 ವರ್ಷ ಪ್ರಾಯದವರು 18 ವರ್ಷದ ಯುವಕರನ್ನು ಮತೀಯವಾಗಿ ಪ್ರಚೋದನೆಗೊಳಿಸಿ ಸಂಘರ್ಷಕ್ಕೆ ಕಾರಣವಾಗುವ ಕೃತ್ಯಗಳು ಕೊನೆಯಾಗಬೇಕು. ನಮ್ಮ ಯುವಕರು ಇಂತಹ ಮತೀಯ ಸಂಘರ್ಷಗಳ ಕಾರಣಕ್ಕೆ ಜೈಲು ಪಾಲಾಗುವುದನ್ನು ತಡೆಯಬೇಕು. ಇಲ್ಲಿನ ಯುವ ಪೀಳಿಗೆಯನ್ನು ಹಾದಿತಪ್ಪಿಸುತ್ತಿರುವ ಮಾದಕ ದ್ರವ್ಯಗಳ ವ್ಯಸನಗಳಿಂದ ಮುಕ್ತಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಮಂಗಳೂರನಿಂದ ಉತ್ತಮ ಸಂದೇಶವನ್ನು ನೀಡುವುದಕ್ಕೆ ಬದ್ಧವಾಗಿ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಅಧ್ಯಕ್ಷ ನಿತ್ಯಾನಂದ ಕೋಟ್ಯಾನ್, ಜಿಲ್ಲಾ ಕಾಯದರ್ಶಿ ಸುರೇಂದ್ರ ಮೆಂಡನ್, ಜಿಲ್ಲಾ ಕಾರ್ಯದರ್ಶಿ ಜಿ.ಟಿ. ಆಚಾರ್ಯ, ಉಪ ಕಾರ್ಯಾಧ್ಯಕ್ಷ ಅರುಣ್ ಪ್ರಕಾಶ್ ಶೆಟ್ಟಿ, ಮಾಜಿ ಅಧ್ಯಕ್ಷ ಧರ್ಮಪಾಲ ದೇವಾಡಿಗ, ವಕ್ತಾರ ದಯಾಸಾಗರ್ ಚೌಟ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X