Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆಬ್ರವರಿಯೊಳಗೆ ನಗರೋತ್ಥಾನ ಯೋಜನೆಗಳು...

ಫೆಬ್ರವರಿಯೊಳಗೆ ನಗರೋತ್ಥಾನ ಯೋಜನೆಗಳು ಪೂರ್ಣಗೊಳಿಸಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ20 Sept 2023 6:52 PM IST
share
ಫೆಬ್ರವರಿಯೊಳಗೆ ನಗರೋತ್ಥಾನ ಯೋಜನೆಗಳು ಪೂರ್ಣಗೊಳಿಸಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಫೆಬ್ರವರಿಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಅದರೊಳಗೆ ಈಗಾಗಲೇ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಗರೋತ್ಥಾನ ಕಾರ್ಯಕ್ರಮಗಳ ಯೋಜನೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಜತೆಗೆ, ಟೆಂಡರ್ ಪ್ರಕ್ರಿಯೆಗಳನ್ನು ಈ ಅವಧಿ ಯೊಳಗೆ ಪೂರ್ಣಗೊಳಿಸಬೇಕು. ಚುನಾವಣೆ ಘೋಷಣೆ ಆದರೆ, ಟೆಂಡರ್ ಆಗದಿದ್ದಲ್ಲಿ ಕಾಮಗಾರಿಗಳು ಬಾಕಿ ಆಗಲಿವೆ. ಹಾಗಾಗಿ ಎಲ್ಲ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಸಚಿವರು ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ನಗರಗಳ ಅಭಿವೃದ್ಧಿ ಯೋಜನೆ ನಾಲ್ಕನೆ ಹಂತ (ನಗರೋತ್ಥಾನ)ದ ಕಾರ್ಯ ಕ್ರಮದಡಿ ದ.ಕ. ಜಿಲ್ಲೆಯ 14 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 130 ಕೋಟಿ ರೂ.ಗಳ 302 ಕಾಮಗಾರಿಗಳು ಮಂಜೂರಾಗಿವೆ. ಅದರಲ್ಲಿ 68 ಕಾಮಗಾರಿಗಳು ಪೂರ್ಣಗೊಂಡಿವೆ. 213 ಕಾಮಗಾರಿಗಳು ಟೆಂಡರ್ ಆಗಿ ವಿವಿಧ ಹಂತದಲ್ಲಿ ಕೆಲಸ ಚಾಲ್ತಿಯಲ್ಲಿವೆ. 41 ಕಾಮಗಾರಿಗಳು ಟೆಂಡರ್ ಆಗಿಲ್ಲ ಅಥವಾ ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಭೆಯಲ್ಲಿ ಮಾಹಿತಿ ನೀಡಿದರು.

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ

ಈ ಬಾರಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಹಿನ್ನಲೆಯಲ್ಲಿ ಮುಂಚಿತ ವಾಗಿಯೇ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಜಿಲ್ಲೆಯ ವಿವಿಧ ಕಡೆಗಳಲ್ಲಿ ನಿರ್ಮಿಸಲಾಗಿರುವ ಚೆಕ್‌ಡ್ಯಾಂಗಳಲ್ಲಿ ನೀರು ಸಂಗ್ರಹಿಸುವ ಬಗ್ಗೆ ಗಮನ ಹರಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಲಹೆ ನೀಡಿದರೆ, ಅಡ್ಯಾರ್ ಅಣೆಕಟ್ಟಿನಿಂದ ತುಂಬೆ ಅಣೆಕಟ್ಟಿಗೆ ಪೈಪ್‌ಲೈನ್ ಮೂಲಕ ನೀರೆತ್ತುವ ಕಾರ್ಯಕ್ಕೆ ಕ್ರಮ ವಹಿಸಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯ ತ್ಯಾಜ್ಯ ನಿರ್ವಹಣಾ ಘಟಕದ ಪಾರಂಪರಿಕ ತ್ಯಾಜ್ಯ ವಿಲೇ ಹಾಗೂ ನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ವಸೂಲಾತಿಗೆ ಸೂಕ್ತ ಕ್ರಮ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ನೀರ್ದೇಶನ ನೀಡಿದರು.

ನಗರ ಪಾಲಿಕೆಗಳಲ್ಲಿ ಜೂನಿಯರ್ ಇಂಜಿನಿಯರ್‌ಗಳು, ಹಿರಿಯ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರು, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರ ಕೊರತೆ ಇರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಚಿವರ ಗಮನ ಸೆಳೆದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪಾಲಿಕೆ ಆಯುಕ್ತ ಆನಂದ್, ನಗರಾಭಿವೃದ್ಧಿ ಕೋಶದ ಜಿಲ್ಲಾ ಅಧಿಕಾರಿ ಅಭಿಷೇಕ್, ಕಾರ್ಯನಿರ್ವಾಹಕ ಅಭಿಯಂತರ ಪುರಂದರ ಮೊದಲಾದವರು ಉಪಸ್ಥಿತರಿದ್ದರು.

9 ಕಡೆ ಹೊಸ ಇಂದಿರಾ ಕ್ಯಾಂಟೀನ್‌ಗಳಿಗೆ ಪ್ರಸ್ತಾವನೆ

ದ.ಕ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ 9 ಇಂದಿರಾ ಕ್ಯಾಂಟೀನ್‌ಗಳ ಕಾರ್ಯ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದು ಕೊಂಡ ಸಚಿವರು, ಕ್ಯಾಂಟೀನ್‌ಗಳ ನಿರ್ವಹಣೆಯ ಜತೆಗೆ ಸ್ವಚ್ಛತೆಯನ್ನು ಕಾಪಾಡುವಲ್ಲಿ ಗುತ್ತಿಗೆ ನಿರ್ವಹಿಸುವವರು ಆದ್ಯತೆ ನೀಡುವುದನ್ನು ಖಾತರಿಪಡಿಸಬೇಕೆಂದು ಸೂಚಿಸಿದರು.

ಸೋಮೇಶ್ವರ, ಉಳ್ಳಾಲ, ವಿಟ್ಲ, ಮುಲ್ಕಿ, ಕಡಬ, ಮೂಡಬಿದ್ರೆ, ಕಿನ್ನಿಗೋಳಿ, ಕೋಟೆಕಾರ್, ಬಜ್ಪೆ ಸೇರಿದಂತೆ 9 ಕಡೆ ಹೊಸ ಇಂದಿರಾ ಕ್ಯಾಂಟೀನ್ ಆರಂಭ ಹಾಗೂ 2 ಅಡುಗೆ ತಯಾರಿ ಕೇಂದ್ರಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಯಾವ ಜಾಗದಲ್ಲಿ ಕ್ಯಾಂಟೀನ್ ಅಗತ್ಯವಿದೆ ಎಂಬ ಬಗ್ಗೆ ಅಧಿಕಾರಿಗಳು ಸಮರ್ಪಕವಾಗಿ ಮಾಹಿತಿ ನೀಡಬೇಕು. ಸೂಕ್ತ ವಾದ ಜಾಗ ಇಲ್ಲವಾದಲ್ಲಿ ಬಿಬಿಎಂಪಿಯಲ್ಲಿರುವಂತೆ ಮೊಬೈಲ್ ಕ್ಯಾಂಟೀನ್‌ಗೆ ಆದ್ಯತೆ ನೀಡಬಹುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X