Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಶ್ರಫ್, ರಹ್ಮಾನ್ ಹತ್ಯೆ ಹಿಂದಿರುವವರ...

ಅಶ್ರಫ್, ರಹ್ಮಾನ್ ಹತ್ಯೆ ಹಿಂದಿರುವವರ ಪತ್ತೆಗಾಗಿ ಸಮಗ್ರ ತನಿಖೆ: ಡಾ.ಜಿ.ಪರಮೇಶ್ವರ್

'ಎಎನ್ ಎಫ್ ವಿಸರ್ಜನೆ ಮಾಡುತ್ತಿಲ್ಲ'

ವಾರ್ತಾಭಾರತಿವಾರ್ತಾಭಾರತಿ13 Jun 2025 3:02 PM IST
share
ಅಶ್ರಫ್, ರಹ್ಮಾನ್ ಹತ್ಯೆ ಹಿಂದಿರುವವರ ಪತ್ತೆಗಾಗಿ ಸಮಗ್ರ ತನಿಖೆ: ಡಾ.ಜಿ.ಪರಮೇಶ್ವರ್

ಮಂಗಳೂರು, ಜೂ.13: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಮತ್ತು ಕುಡುಪುವಿನಲ್ಲಿ ಗುಂಪು ಹತ್ಯೆಗೊಳಗಾದ ಅಶ್ರಫ್ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಒಂದು ವಾರ, ತಿಂಗಳಲ್ಲಿ ಮುಗಿಯುವುದಿಲ್ಲ. ಅದರ ಬುಡಕ್ಕೆ ಹೋಗಬೇಕಾದರೆ ಸಮಗ್ರ ತನಿಖೆಯಾಗಬೇಕು. ಅದನ್ನು ಮಾಡುತ್ತಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಕೊಲೆಯಾಗಿದೆ, ವೈಯಕ್ತಿಕವೇ, ಕೋಮು ದ್ವೇಷವೇ ಎಂದು ಈಗ ಹೇಳಲಾಗದು. ತನಿಖೆಯ ವರದಿ ಬಂದ ಅನಂತರ ಗೊತ್ತಾಗಲಿದೆ ಎಂದರು.

ಸುಹಾಸ್ ಶೆಟ್ಟಿ ಪ್ರಕರಣವನ್ನು ಕೊಡಲೇಬೇಕಾಗಿದೆ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಕೇಂದ್ರ ಸರಕಾಕ್ಕೆ ಅದನ್ನು ಎನ್ಐಎಗೆ ಪಡೆಯುವ ಅಧಿಕಾರವಿದೆ. ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಅವರಿಗೆ ಕೊಡಲೇಬೇಕಾದ ಪರಿಸ್ಥಿತಿ ಬಂದಿದೆ. ಯಾಕೆ ನಿರ್ದಿಷ್ಟವಾಗಿ ಆ ಕೇಸು ಎನ್ಐಎಗೆ ಕೇಳಿದ್ದಾರೆಂದು ಗೊತ್ತಿಲ್ಲ ಎಂದರು.

ರಹ್ಮಾನ್ ಹತ್ಯೆ ಪ್ರಕರಣವನ್ನು ಎನ್ ಐಎಗೆ ನೀಡುತ್ತೀರಾ ಎಂದು ಕೇಳಿದಾಗ, ಅದನ್ನು ಎನ್ಐಎಗೆ ಕೇಳಿಲ್ಲ. ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ತನಿಖೆ ನಡೆಯುತ್ತಿದೆ ಎಂದರು.

ಎಎನ್ ಎಫ್ ವಿಸರ್ಜನೆ ಮಾಡುತ್ತಿಲ್ಲ

ರಾಜ್ಯದಲ್ಲಿ ನಕ್ಸಲರು ಶರಣಾಗತರಾಗಿದ್ದಾರೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಪ್ರಮಾಣ ಕಡಿಮೆ ಮಾಡಲಾಗಿದೆ. ಸದ್ಯಕ್ಕೆ ಅಗತ್ಯತೆ ಇಲ್ಲದಿದ್ದರೂ ಯಾವುದಾದರೂ ಸಂದರ್ಭದಲ್ಲಿ ಅಗತ್ಯ ಬಂದರೆ ಬೇಕಾಗುತ್ತದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಒಡಿಶಾ, ಅಸ್ಸಾಂ ಮೊದಲಾದೆಡೆ ನಕ್ಸಲ್ ಚಟುವಟಿಕೆ ಇದೆ. ಅಲ್ಲಿಂದ ಇಲ್ಲಿಗೆ ಬರುವ ಸಾಧ್ಯತೆಯೂ ಇದೆ. ಆ ಸಂದಭರ್ದಲ್ಲಿ ಇಲ್ಲಿ ತಯಾರಿರಬೇಕಾಗುತ್ತದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯ ಸ್ವಲ್ಪ ಭಾಗವನ್ನು ಹಾಗೆಯೇ ಇರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕರಾವಳಿ ಜಿಲ್ಲೆಗಳಲ್ಲಿ ಕೋಮು ಸಂಬಂಧಿ ಚಟುವಟಿಕೆಗಳಿಂದ ಶಾಂತಿ ಕಾಪಾಡುವುದು ವಿಶೇಷ ಕಾರ್ಯಪಡೆಯ ಉದ್ದೇಶ. ಜನ ಅರ್ಥ ಮಾಡಿಕೊಂಡರೆ ಈ ಪಡೆಯ ಅಗತ್ಯತೆ ಕಡಿಮೆಯಾಗುತ್ತದೆ. ಸದ್ಯ ಕಾರ್ಯಪಡೆಯನ್ನು ಸಾಂಕೇತಿಕವಾಗಿ ರಚಿಸಲಾಗಿದೆ ಎಂದವರು ಹೇಳಿದರು.

ಜಾತಿ ಗಣತಿಯ ಮರು ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿದ ಸಚಿವ ಜಿ.ಪರಮೇಶ್ವರ್, ಈಗ ನಡೆಸಲಾಗಿರುವ ಸಮೀಕ್ಷೆ ಬಗ್ಗೆ ಕೆಲವು ಸಮುದಾಯಗಳು ಸರಕಾರದ ವಿರುದ್ಧವಾಗಿ ಮಾತನಾಡಿದರು. ಹೈಕಮಾಂಡ್ ನವರು ಕೂಡ ಸರಿಯಾಗಿ ಮಾಡಲು ಸೂಚಿಸಿದ್ದಾರೆ. ಅಲ್ಲದೇ 10 ವರ್ಷದ ಹಿಂದಿನ ಜನಸಂಖ್ಯೆಯ ಮಾಹಿತಿಯನ್ನು ಅದು ಆಧರಿಸಲಾಗಿತ್ತು. ಅನಂತರ ಹೆಚ್ಚಾದ ಜನಸಂಖ್ಯೆಯ ಉಲ್ಲೇಖವಿರಲಿಲ್ಲ. ಹಾಗಾಗಿ ಮರು ಸಮೀಕ್ಷೆಗೆ ತೀರ್ಮಾನ ತೆಗೆದುಕೊಂಡಿದ್ದೇವೆ. ಯಾವ ಸಮುದಾಯಕ್ಕೆ ಅವರ ಜಾತಿಯನ್ನು ಪರಿಗಣಿಸಿಲ್ಲ ಎಂಬ ಆತಂಕವಿದೆಯೋ ಅದನ್ನು ಸರಿಪಡಿಸಲು ಈಗ ಅವಕಾಶ ಸಿಕ್ಕಿದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X