Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.18ರಿಂದ 21ರವರೆಗೆ ಸಂತ ಅಲೋಶಿಯಸ್...

ಅ.18ರಿಂದ 21ರವರೆಗೆ ಸಂತ ಅಲೋಶಿಯಸ್ ವಿವಿಯಲ್ಲಿ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ17 Oct 2025 3:07 PM IST
share
ಅ.18ರಿಂದ 21ರವರೆಗೆ ಸಂತ ಅಲೋಶಿಯಸ್ ವಿವಿಯಲ್ಲಿ ಸಮ್ಮೇಳನ

ಮಂಗಳೂರು, ಅ.17: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಿಂದ ಕ್ಸೇವಿಯರ್ ಬೋರ್ಡ್ ಆಫ್ ಹೈಯರ್ ಎಜುಕೇಶನ್ ನ 25ನೇ ತ್ರೈಮಾಸಿಕ ಸಮ್ಮೇಳನ ಅ.18ರಿಂದ 21ರವರೆಗೆ ಆಯೋಜಿಸಲಾಗಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂತ ಅಲೋಶಿಯಸ್ ವಿವಿಯ ಕುಲಪತಿ ರೆ.ಫಾ.ಡಾ.ಪ್ರವೀಣ್ ಮಾರ್ಟಿಸ್, ‘ಮನಸ್ಸುಗಳನ್ನು ಸದೃಢಗೊಳಿಸಿ, ಬದಲಾವಣೆಯನ್ನು ಸ್ವೀಕರಿಸಿ: ಜಾಗತಿಕ ಭವಿಷ್ಯದ ಸಾಧನವಾಗಿ ಉನ್ನತ ಶಿಕ್ಷಣದ ಪುನರ್ ಕಲ್ಪನೆ ಮಾಡೋಣ’ ಎಂಬ ವಿಷಯದಲ್ಲಿ ಅಲೋಶಿಯಸ್ ವಿವಿ ಕ್ಯಾಂಪಸ್ ನ ಎಲ್ಸಿಆರ್ಐ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ ಎಂದರು.

ಸಮ್ಮೇಳನವು ದೇಶದೆಲ್ಲೆಡೆಯ ಕ್ರೈಸ್ತ ಉನ್ನತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶೈಕ್ಷಣಿಕ ನಾಯಕು ಮತ್ತು ಪ್ರತಿನಿಧಿಗಳನ್ನು ಒಟ್ಟುಗೂಡಿಸಿ ಉನ್ನತ ಶಿಕ್ಷಣದ ಬದಲಾದ ಪ್ರಪಂಚದ ಬಗ್ಗೆ ಚಿಂತನೆ ಮತ್ತು ವೇದಿಕೆಯನ್ನು ಒದಗಿಸಲಿದೆ.

ಅ.18ರಂದು ಸಂಜೆ 4 ಗಂಟೆಗೆ ಬಲಿಪೂಜೆಯೊಂದಿಗೆ ಸಮ್ಮೇಳನ ಆರಂಭವಾಗಲಿದೆ. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಉದ್ಘಾಟನೆ ನೆರವೇರಿಸಲಿದ್ದು, ಭಾರತ ಸರಕಾರದ ಶಿಕ್ಷಣ ಸಚಿವಾಲಯದ ಸಂಯುಕ್ತ ಕಾರ್ಯದರ್ಶಿ ಆರ್ಮ್ಸ್ಟ್ರಾಂಗ್ ಪಾಮೇ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ನಾಗ್ಪುರದ ಆರ್ಚ್ ಬಿಷಪ್ ಹಾಗೂ ಸಿಬಿಸಿಐ ಶಿಕ್ಷಣ ಮತ್ತು ಸಂಸ್ಕೃತಿ ಆಯೋಗದ ಅಧ್ಯಕ್ಷ ರೆ.ಫಾ. ಡಾ.ಎಲಿಯಾಸ್ ಗೋನ್ಸಾಲ್ವಿಸ್ ದಿವ್ಯ ಬಲಿಪೂಜೆ ನೆರವೇರಿಸಲಿದ್ದಾರೆ. ಅ.19ರಂದು ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತದ ಬಿಷಪ್ ರೆ.ಫಾ.ಡಾ.ಅಲೋಶಿಯಸ್ ಪೌಲ್ ಡಿಸೋಜ ನೆರವೇರಿಸಲಿದ್ದಾರೆ. ಸಮ್ಮೇಳನದ ಪ್ರಾಯೋಜಕತ್ವವನ್ನು ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ವಹಿಸಿದ್ದಾರೆ. ಸಮ್ಮೇಳನದಲ್ಲಿ ದೇಶ ವಿದೇಶಗಳ ತಜ್ಞರು ಭಾಗವಹಿಸಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕ್ಸೇವಿಯರ್ ಬೋರ್ಡ್ ಆಫ್ ಹಯರ್ ಎಜಕೇಶನ್ನ ಅಧ್ಯಕ್ಷ ರೆ.ಫಾ.ಡಾ.ಜೋಜಿ ರೆಡ್ಡಿ, ಉಪಾಧ್ಯಕ್ಷ ರೆ.ಫಾ.ಗಿಲ್ಬರ್ಟ್ ಮಸ್ಕರೇನಸ್, ಪ್ರಧಾನ ಕಾರ್ಯದರ್ಶಿ ಭಗಿನಿ ಡಾ.ದೀಪ್ತಿ ಯುಎಫ್ಎಸ್ ಹಾಗೂ ಸಂತ ಅಲೋಶಿಯಸ್ ವಿವಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಕಲಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X