Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲಾ ಕಾಂಗ್ರೆಸ್-ಪಂಚಾಯತ್ ರಾಜ್...

ದ.ಕ.ಜಿಲ್ಲಾ ಕಾಂಗ್ರೆಸ್-ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Sept 2023 7:35 PM IST
share
ದ.ಕ.ಜಿಲ್ಲಾ ಕಾಂಗ್ರೆಸ್-ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು, ಸೆ.9: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಜಿಲ್ಲೆಯ ವಿವಿಧ ಗ್ರಾಪಂಗಳ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮವು ಶನಿವಾರ ಮಲ್ಲಿಕಟ್ಟೆಯ ನಗರದ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಗ್ರಾಪಂ ಸದಸ್ಯರು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಗ್ರಾಪಂನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಜವಾಬ್ದಾರಿಯಿದೆ. ತಮ್ಮ ಅವಧಿಯಲ್ಲಿ ರಜಾದಿನ ಹೊರತಾಗಿ ಪ್ರತಿ ದಿನ ಗ್ರಾಪಂಗೆ ಭೇಟಿ ನೀಡುತ್ತಿರಬೇಕು. ಜನರ ಪ್ರೀತಿ, ವಿಶ್ವಾಸ ಗಳಿಸಿದರೆ ಮಾತ್ರ ಗ್ರಾಪಂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ಗ್ರಾಪಂ ಸದಸ್ಯರ ಗೌರವಧನ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶ್ರಮಿಸಿದ್ದಾರೆ. ಮುಂದಿನ ಅಧಿವೇಶನಲ್ಲಿ ಗ್ರಾಪಂ ಸದಸ್ಯರ ಬೇಡಿಕೆ, ಕುಂದುಕೊರತೆಗಳ ಬಗ್ಗೆ ಚರ್ಚಿಸುತ್ತಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಗ್ರಾಪಂನಲ್ಲಿ ಅಧ್ಯಕ್ಷರೇ ಮುಖ್ಯಮಂತ್ರಿಗಳು. ತಮ್ಮ ಅಧಿಕಾರ ವ್ಯಾಪ್ತಿಯನ್ನು ತಿಳಿದುಕೊಂಡರೆ ಮಾತ್ರ ಅಧಿಕಾರ ಚಲಾವಣೆ ಮಾಡಲು ಸಾಧ್ಯ. ಚುನಾಯಿತ ಪ್ರತಿನಿಧಿಗಳು ಪಂಚಾಯತ್‌ನಲ್ಲಿ ನಾಯಕತ್ವನ್ನು ವಹಿಸಿಕೊಂಡು ಜನರಿಗೆ ಸ್ಪಂದಿಸಬೇಕು. ನೀವು ನಾಯಕರಾದರೆ ಪಕ್ಷ ಕಟ್ಟಲು ಸಾಧ್ಯ. ಮುಂದಿನ ದಿನಗಳಲ್ಲಿ ಗ್ರಾಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ಪರ್ಧಿಸಿದವರನ್ನು ಆಹ್ವಾನಿಸಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಜಿಲ್ಲಾ ಮಟ್ಟದ ಸಂವಾದವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಎಂ.ಎಸ್.ಮುಹಮ್ಮದ್, ಮಮತಾ ಗಟ್ಟಿ, ಪದ್ಮರಾಜ್ ಆರ್, ಲಾರೆನ್ಸ್ ಡಿಸೋಜ, ಶಾಹುಲ್ ಹಮೀದ್, ಜೋಕ್ಕಿಂ ಡಿಸೋಜ, ಸುರೇಂದ್ರ ಕಾಂಬ್ಳಿ, ನಾಗೇಶ್ ಕುಮಾರ್, ಸತೀಶ್ ಕಾಶಿಪಟ್ಣ, ಸುದೀಪ್ ಕುಮಾರ್ ಶೆಟ್ಟಿ, ಶುಭೋದಯ ಆಳ್ವ, ಅಶ್ವಿನ್ ರಾಜ್, ಸಂದೇಶ್ ಶೆಟ್ಟಿ, ವಿಶ್ವಾಸ್ ಶೆಟ್ಟಿ, ಸಂದೇಶ್ ಶೆಟ್ಟಿ, ಯಶವಂತ ಗುರುಪುರ, ರೇಖಾ ಶೆಟ್ಟಿ ಮುಲ್ಕಿ, ಲೀಲಾ ಮನಮೋಹನ್ ಸುಳ್ಯ, ಜಯಪ್ರಕಾಶ್ ಸುಳ್ಯ, ಗಂಗಾಧರ್ ಶೆಟ್ಟಿ ಕಡಬ, ಪದ್ಮನಾಭ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ನೀಜ್‌ಚಂದ್ರ ಪಾಲ್, ನಝೀರ್ ಬಜಾಲ್, ಗಣೇಶ್ ಪೂಜಾರಿ, ವಿಕಾಶ್ ಶೆಟ್ಟಿ, ಮಲ್ಲಿಕಾ ಪಕ್ಕಳ, ಶಾಂತಳಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ರಾಜ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಲ್ಯ ಸ್ವಾಗತಿಸಿದರು. ಸಂತೋಷ್ ಕುಮಾರ್ ಭಂಡಾರಿ ಪುತ್ತೂರು ವಂದಿಸಿದರು. ಅಬ್ದುರ‌್ರಝಾಕ್ ಇರಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X