Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಂಪುಕಲ್ಲು, ಮರಳಿಲ್ಲದೆ ನಿರ್ಮಾಣ...

ಕೆಂಪುಕಲ್ಲು, ಮರಳಿಲ್ಲದೆ ನಿರ್ಮಾಣ ಕ್ಷೇತ್ರ ಸ್ಥಗಿತ: ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್

"ಭರವಸೆ ಈಡೇರದಿದ್ದರೆ ಪ್ರತಿಭಟನೆ ಅನಿವಾರ್ಯ"

ವಾರ್ತಾಭಾರತಿವಾರ್ತಾಭಾರತಿ15 July 2025 1:08 PM IST
share
ಕೆಂಪುಕಲ್ಲು, ಮರಳಿಲ್ಲದೆ ನಿರ್ಮಾಣ ಕ್ಷೇತ್ರ ಸ್ಥಗಿತ: ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್

ಮಂಗಳೂರು, ಜು. 15: ದ.ಕ. ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಕೆಂಪು ಕಲ್ಲು ಹಾಗೂ ಮರಳು ಲಭ್ಯವಾಗದೆ ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದರಿಂದಾಗಿ ನಿರ್ಮಾಣ ಕಾರ್ಮಿಕರ ಜತೆಗೆ ಈ ಉದ್ಯಮವನ್ನು ನಂಬಿರುವ ಇತರ ಕ್ಷೇತ್ರದ ಕಾರ್ಮಿಕರು, ಉದ್ಯಮಿಗಳು ಆರ್ಥಿಕವಾಗಿ ತೊಂದರೆಗೀಡಾಗಿದ್ದಾರೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ನೀಡಿರುವ ಭರವಸೆಯಂತೆ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಅನಿವಾರ್ಯ ಎಂದು ದ.ಕ. ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘ ಹೇಳಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ, ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬೇಕಾದ ನೈಸರ್ಗಿಕ ಸಂಪತ್ತಾದ ಉತ್ಕೃಷ್ಟ ಗುಣಮಟ್ಟದ ಮರಳು ಹಲವು ವರ್ಷಗಳಿಂದ ಲಭ್ಯವಾಗದೆ ಗುತ್ತಿಗೆದಾರರು ಈಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಇದೀಗ ಒಂದೂವರೆ ತಿಂಗಳಿನಿಂದ ಕಾನೂನಿನ ನೆಪವೊಡ್ಡಿ ಕೆಂಪು ಮುರಕಲ್ಲಿನ ಗಣಿಗಾರಿಕೆ ನಿರ್ಬಂಧಿಸಿರುವ ಕಾರಣ ಮತ್ತಷ್ಟು ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವ ಬಗ್ಗೆ ಹಲವು ವರ್ಷಗಳಿಂದ ಸರಕಾರ ಪ್ರತಿನಿಧಿಗಳು ಹೇಳುತ್ತಾ ಬಂದಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಕೆಂಪ ಕಲ್ಲು ಕೂಡಾ ಇದೀಗ ಅಲಭ್ಯವಾಗಿದ್ದು, ನಿರ್ಮಾಣ ಕ್ಷೇತ್ರದಲ್ಲಿ ತಲ್ಲಣವಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಒಂದು ಅಥವಾ ಎರಡು ಮಹಡಿ ಮನೆಗಳನ್ನು ಕಾಂಕ್ರಿಟ್ ಪಿಲ್ಲರ್ ಇಲ್ಲದೆ ಕೆಂಪು ಕಲ್ಲು ಬಳಸಿ ನಿರ್ಮಿಸುತ್ತಿರುವುದರಿಂದ ಮಧ್ಯಮ ಹಾಗೂ ಬಡ ವರ್ಗದ ಜನರ ಮನೆಯ ಕನಸಿಗೆ ತೊಂದರೆಯಾಗಿದೆ. ಗುತ್ತಿಗೆದಾರರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ರಾಜ್ಯದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ದುಡಿಮೆಯ ಪಾಲನ್ನು ಭರಿಸುತ್ತಿದ್ದೇವೆ. ಇದೀಗ ನಮ್ಮ ಜಿಲ್ಲೆಯ ಕಾರ್ಮಿಕ ವರ್ಗವಲ್ಲದೆ, ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಕೂಡಾ ಕೆಲಸವಿಲಲದೆ ಉಪವಾಸ ಬೀಳುವ ಪರಿಸ್ಥಿತಿ ಬಿಂದಿದೆ. ಇದು ಹೀಗೇ ಮುಂದುವರಿದರೆ ಜಿಲ್ಲೆಯ ಆರ್ಥಿಕತೆಗೆ ಪರಿಣಾಮ ಬೀರಲಿದೆ. ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಹಾಗೂ ಸರಕಾರದ ಗಮನ ಸೆಳೆಯಲಾಗಿದ್ದು, ಸಚಿವ ಸಂಪುಟ ಸಭೆ ನಡೆಸಿ ಈ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅದಕ್ಕಾಗಿ ನಾವು ಎದುರು ನೋಡುತ್ತಿದ್ದು, ಸಮಸ್ಯೆ ಶೀಘ್ರ ಬಗೆಹರಿಸದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ಹೇಳಿದರು.

ಸ್ಯಾಂಡ್ ಬಝಾರ್ ಆ್ಯಪ್ ನಲ್ಲೂ ಮರಳು ಸಿಗುತ್ತಿಲ್ಲ!

ಜಿಲ್ಲಾಡಳಿತ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಪಡೆಯಲು ಹೇಳುತ್ತಿದೆ. ಆದರೆ ಆ್ಯಪ್ ನಲ್ಲಿ ಮರಳು ಲಭ್ಯವಾಗುತ್ತಿಲ್ಲ. ಗಣಿ ಇಲಾಖೆಯವರು ಈ ಬಗ್ಗೆ ಸ್ಪಂದಿಸುತ್ತಿಲ್ಲ. ಆ್ಯಪ್ ಮೂಲಕ ಸಿಗುವ ಮರಳಿನ ದರ ದುಬಾರಿಯಾಗಿದ್ದು, ಮರಳಿನ ಗುಣಮಟ್ಟ ಮನೆ ನಿರ್ಮಾಣಕ್ಕೆ ಪೂರಕವಾಗಿಲ್ಲ. ಈ ದರದಲ್ಲಿ ಗುತ್ತಿಗೆದಾರರಾದ ನಾವು ನಮ್ಮ ಗ್ರಾಹಕರಿಗೆ ನಿಗದಿಪಡಿಸಿದ ದರದಲ್ಲಿ ಮನೆ ನಿರ್ಮಾಣ ಮಾಡಲು ಸಾಧ್ಯವಾಗದು ಎಂದು ಉಪಾಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜೊತೆ ಕಾರ್ಯದರ್ಶಿ ಲಕ್ಷ್ಮಿ ಪ್ರಸಾದ್, ಕೋಶಾಧಿಕಾರಿ ಸುರೇಶ್ ಜೆ., ಸದಸ್ಯರಾದ ಚಂದನ್, ಕೇಶವ ಚನ್ನಪ್ಪ ಮೊದಲಾದವರು ಉಪಸ್ಥಿತರಿದ್ದರು.

ಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಕಾನೂನು ಬದ್ಧವಾಗಿ ನೀತಿಗಳನ್ನು ಸರಳಗೊಳಿಸಿ

ಕೆಂಪು ಕಲ್ಲು ಗಣಿಗಾರಿಕೆ ಈ ಹಿಂದೆ ಅಕ್ರಮವಾಗಿ ನಡೆಯುತ್ತಿದ್ದರೆ ಆ ಸಂದರ್ಭದಲ್ಲಿ ಅದನ್ನು ತಡೆದು ಕ್ರಮ ಕೈಗೊಳ್ಳದಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕಾರಣ. ಆದರೆ ಇದೀಗ ಏಕಾಏಕಿಯಾಗಿ ಸಂಪೂರ್ಣವಾಗಿ ಕಲ್ಲು ಕೋರೆಗಳನ್ನು ಬಂದ್ ಮಾಡಿಸಿದರೆ ನಿರ್ಮಾಣ ಕಾಮಗಾರಿಯ ಕಾರ್ಮಿಕರ ಜೊತೆಗೆ ಕಲ್ಲು ಕೋರೆಯಲ್ಲಿ ಕಾರ್ಮಿಕರಾಗಿ ದುಡಿಯುವವರ ಪರಿಸ್ಥಿತಿ ಏನು ಎಂದು ಕಾರ್ಯದರ್ಶಿ ಅಶೋಕ್ ಕುಲಾಲ್, ಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಕಾನೂನು ಬದ್ಧವಾಗಿ ನೀತಿಗಳನ್ನು ಸರಳೀಕರಿಸಿಕೊಂಡು ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X