Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಹಕಾರಿ ವ್ಯವಸಾಯಿಕ ಸಂಘ ನಿ....

ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿಯ ಕೃಷಿ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಪ್ರಕಾಶ್ ರೈ ಬೆಳ್ಳಿಪ್ಪಾಡಿ ಅವಿರೋಧ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 Oct 2025 9:38 PM IST
share
ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿಯ ಕೃಷಿ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಪ್ರಕಾಶ್ ರೈ ಬೆಳ್ಳಿಪ್ಪಾಡಿ ಅವಿರೋಧ ಆಯ್ಕೆ

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯಲ್ಲಿ ತೆರವಾದ ಕೃಷಿ ಕ್ಷೇತ್ರದ ಒಂದು ಸಾಮಾನ್ಯ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಮತ್ತು ಸಹಕಾರ ಭಾರತಿಯ ಬೆಂಬಲಿತ ಅಭ್ಯರ್ಥಿ ಪ್ರಕಾಶ್ ರೈ ಬೆಳ್ಳಿಪ್ಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸ್ಥಾನಕ್ಕೆ ಬಿಜೆಪಿ ಮತ್ತು ಸಹಕಾರ ಭಾರತಿಯ ಬೆಂಬಲಿತರಾಗಿ ಪ್ರಕಾಶ್ ರೈ ಬೆಳ್ಳಿಪ್ಪಾಡಿ, ಸದಾನಂದ ಶೆಟ್ಟಿ, ಪುತ್ತಿಲ ಪರಿವಾರದಿಂದ ಹರಿಪ್ರಸಾದ್ ಶೆಟ್ಟಿ, ಧರ್ನಪ್ಪ ನಾಯ್ಕ ಹಾಗೂ ಪಕ್ಷೇತರವಾಗಿ ಬಾಲಚಂದ್ರ ಜಿ. ನಾಮಪತ್ರ ಸಲ್ಲಿಸಿದರು. ನಾಮಪತ್ರ ಹಿಂಪಡೆಯುವ ದಿನವಾದ ಅ.13ರಂದು ಪ್ರಕಾಶ್ ರೈ ಬೆಳ್ಳಿಪ್ಪಾಡಿ ಅವರನ್ನು ಬಿಟ್ಟು ಉಳಿದೆಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಂಡಿದ್ದು, ಪ್ರಕಾಶ್ ರೈ ಬೆಳ್ಳಿಪ್ಪಾಡಿ ಅವಿರೋಧವಾಗಿ ಆಯ್ಕೆಯಾದರು. ಕೃಷಿ ಕ್ಷೇತ್ರದ ಸಾಮಾನ್ಯ ಸ್ಥಾನದಿಂದ ಚುನಾಯಿತರಾಗಿದ್ದ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿ ಸದಾನಂದ ಶೆಟ್ಟಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆಯಿತು.

ದಿ. ನರಸಿಂಗ ರೈಯವರ ಪುತ್ರನಾದ ಪ್ರಕಾಶ್ ರೈ ಬೆಳ್ಳಿಪ್ಪಾಡಿಯವರು ಉಪ್ಪಿನಂಗಡಿಯ ಅಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, 10 ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು. ಸತತ ಏಳು ಬಾರಿ ಹಿರೇಬಂಡಾಡಿ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದ ಇವರು, ಮೊದಲ ಬಾರಿ ಪಕ್ಷೇತರರಾಗಿ ಚುನಾವಣೆ ನಿಂತು ಜಯ ಗಳಿಸಿದ್ದರು. ಆ ಬಳಿಕ ರಾಮಕೃಷ್ಣ ಹೆಗ್ಡೆಯವರ ಜನತಾದಳವನ್ನು ಸೇರಿದ ಇವರು ಒಂದು ಬಾರಿ ಜನತಾದಳದಿಂದ ಸ್ಪರ್ಧಿಸಿ ಗ್ರಾ.ಪಂ. ಸದಸ್ಯರಾಗಿದ್ದರು. ಬಳಿಕ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧಿಸಿ ಗ್ರಾ.ಪಂ. ಸದಸ್ಯರಾಗಿದ್ದರು. ಅಲ್ಲದೇ, ಕಾಂಗ್ರೆಸ್‍ನಿಂದಲೂ ಮೂರು ಬಾರಿ ಸ್ಪರ್ಧಿಸಿ ಹಿರೇಬಂಡಾಡಿ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದರು. ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಕೃಷ್ಣ ಹೆಗ್ಡೆಯವರ ಕಾಲಘಟ್ಟದಲ್ಲಿ ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಹೀಗೆ ಮೂರು ಗ್ರಾಮಗಳನ್ನೊಳಗೊಂಡ ಜನತಾದಳದ ಉಪ್ಪಿನಂಗಡಿ ಮಂಡಲ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸಹಕಾರಿ ವ್ಯವಸಾಯಿಕ ಸಂಘ ಉಪ್ಪಿನಂಗಡಿ ಇದರ ನಿರ್ದೇಶಕ ಸ್ಥಾನಕ್ಕೆ ಇವರು ಈ ಮೊದಲು ಮೂರು ಬಾರಿ ಚುನಾಯಿತರಾಗಿದ್ದು, ಎರಡು ಬಾರಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೇ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿಯೂ ಒಂದು ಅವಧಿಗೆ ಕಾರ್ಯನಿರ್ವಹಿಸಿದ್ದರು. ಹಿರೇಬಂಡಾಡಿ ಗ್ರಾಮ ದೈವವಾದ ಶ್ರೀ ಶಿರಾಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ, ಅಡೆಕ್ಕಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಅಭಿನಂದನೆ :

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪ್ರಕಾಶ್ ರೈ ಬೆಳ್ಳಿಪ್ಪಾಡಿ ಅವರನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಉಪಾಧ್ಯಕ್ಷ ದಯಾನಂದ ಸರೋಳಿ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ವಿದ್ಯಾಧರ ಜೈನ್, ಹಿರೇಬಂಡಾಡಿ ಗ್ರಾ.ಪಂ. ಅಧ್ಯಕ್ಷ ಸದಾನಂದ ಶೆಟ್ಟಿ, ಬಜತ್ತೂರು ಗ್ರಾ.ಪಂ. ಅಧ್ಯಕ್ಷ ಗಂಗಾಧರ ಎನ್., ಬಿಜೆಪಿ ಪ್ರಮುಖರಾದ ಜಯಂತ ಪೊರೋಳಿ, ಸುರೇಶ್ ಅತ್ರೆಮಜಲು, ಹರಿರಾಮಚಂದ್ರ, ಸಂತೋಷ್ ಕುಮಾರ್ ಪಂರ್ದಾಜೆ, ಹಮ್ಮಬ್ಬ ಶೌಕತ್ ಅಲಿ, ಆದೇಶ್ ಶೆಟ್ಟಿ, ಲಕ್ಷ್ಮಣ ಗೌಡ ನೆಡ್ಚಿಲು, ಪ್ರಸಾದ್ ಬಂಡಾರಿ, ಸದಾನಂದ ನೆಕ್ಕಿಲಾಡಿ, ಸಿಎ ಬ್ಯಾಂಕ್ ನಿರ್ದೇಶಕರಾದ ರಾಜೇಶ್ ಶಾಂತಿನಗರ, ವಸಂತ ಪಿ., ಶ್ರೀಮತಿ ಉಷಾ ಮುಳಿಯ, ಶ್ರೀಮತಿ ಗೀತಾ, ಶ್ರೀಮತಿ ಸಂಧ್ಯಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X