Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯುತ್, ರೈಲ್ವೇ ಖಾಸಗೀಕರಣದ ಮೂಲಕ...

ವಿದ್ಯುತ್, ರೈಲ್ವೇ ಖಾಸಗೀಕರಣದ ಮೂಲಕ ದೇಶದ ಸಂಪತ್ತು ಕಾರ್ಪೊರೇಟ್‌ಗಳ ಸುಪರ್ದಿಗೆ: ಮೀನಾಕ್ಷಿ ಸುಂದರಂ

ವಾರ್ತಾಭಾರತಿವಾರ್ತಾಭಾರತಿ29 Oct 2023 11:17 PM IST
share
ವಿದ್ಯುತ್, ರೈಲ್ವೇ ಖಾಸಗೀಕರಣದ ಮೂಲಕ ದೇಶದ ಸಂಪತ್ತು ಕಾರ್ಪೊರೇಟ್‌ಗಳ ಸುಪರ್ದಿಗೆ: ಮೀನಾಕ್ಷಿ ಸುಂದರಂ

ಮಂಗಳೂರು: ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಹಾಗೂ ರೈತ ಕಾರ್ಮಿಕ ಜನವಿರೋಧಿ ನೀತಿಗಳನ್ನು ಜಾರಿಗೊಳಿ ಸುವ ಮೂಲಕ ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ ಎಂದು ಸಿಐಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಲು ವಿದ್ಯುತ್, ರೈಲ್ವೇ ಖಾಸಗೀಕರಣದ ವಿರುದ್ದ, ಜನಪರ ಪರ್ಯಾಯ ನೀತಿಗಳಿಗಾಗಿ ಆಗ್ರಹಿಸಿ ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ಜರುಗಿದ ರೈತ ಕಾರ್ಮಿಕ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ದ.ಕ.ಜಿಲ್ಲಾ ಮಟ್ಟದ ಜಂಟಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

ಎಲ್ಲಾ ಕೈಗಾರಿಕೆಗಳ ತಾಯಿ ಹಾಗೂ ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಹುನ್ನಾರ ನಡೆಸುತ್ತಿದೆ. ಮತ್ತೊಂದು ಕಡೆ ಜನರ ಜೀವ ನಾಡಿಯಾದ ದೇಶದ ಆರ್ಥಿಕತೆಯ ಜೀವಾಳವಾದ ರೈಲ್ವೇಯನ್ನೂ ಕೂಡ ಕಾರ್ಪೊರೇಟ್‌ಗಳ ಸುಪರ್ದಿಗೆ ನೀಡಿ ದೇಶದ ಆರ್ಥಿಕತೆಯನ್ನು ವಿನಾಶದ ಅಂಚಿಗೆ ತಳ್ಳುತ್ತಿರುವ ಕೇಂದ್ರ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೇರ ದಂತೆ ತಡೆಯುವ ಮಹತ್ತರ ಜವಾಬ್ದಾರಿ ದೇಶದ ರೈತ ಕಾರ್ಮಿಕರ ಮೇಲಿದೆ ಎಂದರು.

ಎಐಟಿಯುಸಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಬಿ.ಅಮ್ಜದ್ ರವರು ಮಾತನಾಡುತ್ತಾ, ಕೋಮುವಾದಿ ಕಾರ್ಪೊರೇಟ್ ಗಳ ಕೂಟ ದೇಶವನ್ನು ಆಳುತ್ತಿದ್ದು,ತಮ್ಮ ಹಿತಾಸಕ್ತಿಗಳನ್ನು ಕಾಪಾಡಲು ನವ ಉದಾರೀಕರಣ ನೀತಿಗಳನ್ನು ಅತ್ಯಂತ ವೇಗದಲ್ಲಿ ಜಾರಿಗೊಳಿಸುತ್ತಿದೆ. ದುಡಿಯುವ ವರ್ಗವನ್ನು ಹಾಗೂ ಜನತೆಯನ್ನು ಕೋಮು ಆಧಾರದಲ್ಲಿ ವಿಂಗಡಿಸಿ ನೈಜ ಸಮಸ್ಯೆಗಳಿಂದ ಜನತೆಯ ಗಮನವನ್ನು ಬೇರೆಡೆಗೆ ತಿರುಗಿಸಿ ತಮ್ಮ ರಾಜಕೀಯ ಲಾಭವನ್ನು ಪಡೆಯಲು ಸ್ವತಃ ಕೇಂದ್ರ ಸರಕಾರವೇ ಪ್ರಚೋದಿಸುತ್ತಿದೆ ಎಂದು ಹೇಳಿದರು.

ಬ್ಯಾಂಕ್ ನೌಕರರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಫಣೀಂದ್ರ, ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುರೇಶ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಶಾಂತಲಾ ಗಟ್ಟಿ, ಅಧ್ಯಕ್ಷೀಯ ಮಂಡಳಿಯಲ್ಲಿ ಕಾರ್ಯ ನಿರ್ವಹಿಸಿದ ಇಂಟಕ್ ಜಿಲ್ಲಾ ನಾಯಕ ಸುರೇಶ್ ಬಾಬು, ಎಐಕೆಎಸ್ ಜಿಲ್ಲಾ ನಾಯಕರಾದ ಕೆ.ಯಾದವ , ಎಐಟಿಯುಸಿ ಜಿಲ್ಲಾ ಮುಖಂಡ ಬಿ.ಶೇಖರ್, ಸಿಐಟಿಯು ಜಿಲ್ಲಾ ನಾಯಕ ಜೆ.ಬಾಲಕ್ರಷ್ಣ ಮಾತನಾಡಿ, ಕೇಂದ್ರ ಸರಕಾರ ತಪ್ಪು ಆರ್ಥಿಕ ನೀತಿಗಳಿಂದ ಜನತೆ ಅನುಭವಿಸುತ್ತಿರುವ ಯಾತನೆಗಳ ಬಗ್ಗೆ ಸವಿವರವಾಗಿ ಹೇಳಿದರು.

ಜಂಟಿ ವೇದಿಕೆಯ ಪ್ರಧಾನ ಸಂಚಾಲಕರಾದ ಸುನಿಲ್ ಕುಮಾರ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ವಿಮಾ ನೌಕರರ ಸಂಘದ ಅಲ್ಬನ್ ಮಸ್ಕರೇನಸ್, ಆದಿವಾಸಿ ಹಕ್ಕುಗಳ ಸಮಿತಿಯ ಕರಿಯ.ಕೆ, ಪ್ರಗತಿಪರ ಅಧ್ಯಾಪಕರ ವೇದಿಕೆಯ ಡಾ.ವಸಂತ ಕುಮಾರ್, ವಿಮಾ ಪ್ರತಿನಿಧಿಗಳ ಸಂಘಟನೆಯ ಸೋಮಶೇಖರ್, ಸಿಐಟಿಯುನ ವಸಂತ ಆಚಾರಿ, ಎಐಟಿಯುಸಿ ಮುಖಂಡ ಸೀತಾರಾಮ ಬೇರಿಂಜ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಮಹಿಳಾ ಸಂಘಟನೆಗಳ ಜಯಂತಿ ಶೆಟ್ಟಿ, ಚಂದ್ರಕಲಾ ಜೋಗಿ, ಸುಲೋಚನಾ ಕವತ್ತಾರು, ದಲಿತ ಹಕ್ಕುಗಳ ಸಮಿತಿಯ ಕ್ರಷ್ಣಪ್ಪ ಕೋಣಾಜೆ, ದಲಿತ ಸಂಘರ್ಷ ಸಮಿತಿಯ ಎಂ.ದೇವದಾಸ್, ಡಿವೈಎಫ್‌ಐನ ಬಿ.ಕೆ.ಇಮ್ತಿಯಾಜ್, ಎಐವೈಎಫ್‌ನ ಪ್ರೇಮನಾಥ್, ಇಪ್ಟಾದ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನಾಯಕ ಯೋಗೀಶ್ ಜಪ್ಪಿನಮೊಗರು, ರಾಘವ ಕೆ, ಕರುಣಾಕರ್, ಬಿ.ಎನ್ ದೇವಾಡಿಗ, ವಸಂತ ಕುಮಾರ್, ವಿನಿತ್ ದೇವಾಡಿಗ, ನವೀನ್ ಕೊಂಚಾಡಿ, ತಯ್ಯುಬ್ ಬೆಂಗರೆ, ಪುಷ್ಪಾರಾಜ್ ಬೋಳೂರು, ಜಗತ್ಪಾಲ್, ಭಾರತಿ ಬೋಳಾರ,ರಾಧಾ ಮೂಡಬಿದ್ರೆ, ಪದ್ಮಾವತಿ ಶೆಟ್ಟಿ, ಜಯಂತ ನಾಯಕ್, ಸದಾಶಿವ ದಾಸ್, ಕ್ರಷ್ಣಪ್ಪ ಸಾಲ್ಯಾನ್, ಚರಣ್ ಶೆಟ್ಟಿ, ಮರ್ಲಿನ್ ರೇಗೋ, ಫ್ಲೇವಿ ಕ್ರಾಸ್ತಾ, ಶಾಂತಿ ಡಾಯಸ್, ಡಯಾನ ಡಿಸೋಜ, ಮಹೇಶ್ ನಾಯಕ್, ಸಮರ್ಥ್ ಭಟ್, ನಿತಿನ್ ಬಂಗೇರ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X