Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶತಮಾನೋತ್ಸವ ಸಂಭ್ರಮದಲ್ಲಿ ಸಿಪಿಐ |...

ಶತಮಾನೋತ್ಸವ ಸಂಭ್ರಮದಲ್ಲಿ ಸಿಪಿಐ | 24ರಿಂದ ವಿವಿಧ ಕಾರ್ಯಕ್ರಮ, ಬಹಿರಂಗ ಸಭೆ

ವಾರ್ತಾಭಾರತಿವಾರ್ತಾಭಾರತಿ24 Dec 2024 2:27 PM IST
share

ಮಂಗಳೂರು, ಡಿ.21: ಭಾರತ ಕಮ್ಯುನಿಸ್ಟ್ ಪಕ್ಷ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಡಿ 24ರಿಂದ 26ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಡಿ. 26ರಂದು ಬೆಳಗ್ಗೆ 11 ಗಂಟೆಗೆ ಬಹಿರಂಗ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಿಪಿಐ ಪ್ರ. ಕಾರ್ಯದರ್ಶಿ ಬಿ. ಶೇಖರ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಡಿ. 25ರಂದು ಬೆಳಗ್ಗೆ 11ಕ್ಕೆ ಕೇರಳದ ನೀಲೇಶ್ವರ ಸಮೀಪದ ಕಯ್ಯೂರಿನ ಹುತಾತ್ಮ ರೈತ ಹೋರಾಟಗಾರರ ಸ್ಮಾರಕದಲ್ಲಿ ಸಂಭ್ರಮಾಚರಣೆಗೆ ಚಾಲನೆ ದೊರೆಯಲಿದೆ ಎಂದರು.

ಸಂಜೆ 3.30ಕ್ಕೆ ತೊಕ್ಕೊಟ್ಟು ಉಳ್ಳಾಲ ನಗರದಲ್ಲಿ ಸ್ವಯಂ ಸೇವಕರ ಪ್ರಚಾರ ಜಾಥ ಆಯೋಜಿಸಲಾಗಿದೆ. ಸಂಜೆ 4.30ಕ್ಕೆ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತ ಬಳಿಯ ಕಡಲ ಕಿನಾರೆಯಲ್ಲಿ ಸಾಂಸ್ಕೃತಿಕ ಸಂಜೆ, ಭಾರತೀಯ ಜಲಕಲಾ ಸಮಿತಿಯಿಂದ ಹೋರಾಟ ಗೀತೆಗಳು ಕವಿ, ಕಲಾವಿದ ಹುಸೇನ್ ಕಾಟಿಪಳ್ಳ ಮತ್ತು ಬಳಗಿಂದ ಜನಪದೀಯ ಸೌಹಾರ್ದ ಗೀತೆಗಳನ್ನು ಒಳಗೊಂಡ ಸಂಗೀತ ರಸಮಂಜರಿ ಪ್ರೀತಿದ ಪೂ ಕಲಾತಂಡದಿಂದ ಸಿಂಹ ಕುಣಿತ ನಡೆಯಲಿದೆ.

ಡಿ. 26ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಮಿನಿ ವಿಧಾನ ಸೌಧದಿಂದ ವರ್ಣರಂಜಿತ ಮೆರವಣಿಗೆ ಬಳಿಕ ಬಹಿರಂಗ ಸಭೆ 11ಕ್ಕೆ ಡಾನ್‌ಬಾಸ್ಕೋ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಶತಮಾನೋತ್ಸವದ ಸಂಭ್ರಮಾಚರಣೆಯ ಕರ್ನಾಟಕ ಸಮಿತಿಯ ಗೌರವಾಧ್ಯಕ್ಷ, ಶಿಕ್ಷಣ ತಜ ಡಾ. ಜಿ. ರಾಮಕೃಷ್ಣ , ಸಮಿತಿಯ ಅಧ್ಯಕ್ಷ ಡಾ. ಸಿದ್ದನಗೌಡ ಪಾಟೀಲ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಹಲವು ಹೋರಾಟಗಳ ಮೂಲಕ ಮುಂಚೂಣಿಯಲ್ಲಿರುವ ಸಿಪಿಐ ಪಕ್ಷ ಶತಮಾನೋತ್ಸವದ ಹಾದಿಯಲ್ಲಿ ರಾಜಕೀಯವಾಗಿ ಹಿಂದೆ ಸರಿದಿರುವ ಕುರಿತಂತೆ ಅವಲೋಕನ ನಡೆಯಲಿದೆಯೇಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಚುನಾವಣಾ ಸುಧಾರಣೆ ಬಗ್ಗೆ ಜನರನ್ನು ಜಾಗೃತಗೊಳಿಸುವ ಕಾರ್ಯ ನಡೆಯಲಿದೆ ಎಂದರು.

ಗೋಷ್ಟಿಯಲ್ಲಿ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ. ಶೇಖರ್, ಕೋಶಾಧಿಕಾರಿ ಕರುಣಾಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X