Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ...

ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವಾರ್ಷಿಕ ಮಹಾಸಭೆ

ರಾತ್ರಿ 11 ರ ಬಳಿಕ ಕಬಡ್ಡಿ ಪಂದ್ಯಾಟ ನಡೆಸುವಂತಿಲ್ಲ, ಮಹತ್ವದ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ3 Feb 2025 2:48 PM IST
share
ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವಾರ್ಷಿಕ ಮಹಾಸಭೆ

ಬಂಟ್ವಾಳ : ಕಬಡ್ಡಿ ಪಂದ್ಯಾಟಗಳು ರಾತ್ರಿ 11 ರ ಬಳಿಕ ನಡೆಸುವಂತಿಲ್ಲ ಎಂದು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಬಂಟ್ವಾಳ ರೋಟರಿ ಭವನದಲ್ಲಿ ಭಾನುವಾರದಂದು ನಡೆದ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ವಾರ್ಷಿಕ ಮಹಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಂಸ್ಥೆಯ ಅಧ್ಯಕ್ಷ ರಾಕೇಶ್ ಮಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಬಡ್ಡಿಯನ್ನು ಉಳಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಂದ್ಯಾಟಗಳು ಸಂಜೆ ವೇಳೆಗೆ ಆರಂಭಗೊಂಡು ರಾತ್ರಿ 11 ರ ವೇಳೆಗೆ ಮುಗಿಸಬೇಕು. ಈ ಬಗ್ಗೆ ಸಹಕರಿಸುವಂತೆ ಪೊಲೀಸ್ ಇಲಾಖೆ, ಜಿಲ್ಲೆಯ ಎಲ್ಲಾ ಶಾಸಕರಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುವುದು ಎಂದು ನಿರ್ಣಯ ಕೈಗೊಳ್ಳಲಾಯಿತು.

ಉಳಿದಂತೆ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬಗ್ಗೆ ಇಲ್ಲ ಸಲ್ಲದ ಕಾರಣಗಳನ್ನು ನೀಡಿ ವೃಥಾ ಆರೋಪ ಮಾಡಿರುವುದನ್ನು ಖಂಡಿಸಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಸಂಸ್ಥೆಯ ಜಿಲ್ಲಾ ಸದಸ್ಯರಾಗಿದ್ದುಕೊಂಡು ಅಶಿಸ್ತು ತೋರ್ಪಡಿಸಿದ ಇಬ್ಬರು ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಲೆಕ್ಕ ಪರಿಶೋಧಕರಾಗಿ ಬಸರಿ ಎನ್.ರಾವ್ ಅವರನ್ನು ಮುಂದುವರಿಸುವುದು ಎಂಬ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಂಸ್ಥೆಯ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ಉಪ್ಪಿನಂಗಡಿ, ಉಪಾಧ್ಯಕ್ಷ ಕೆ.ಟಿ.ಸುವರ್ಣ, ತೀರ್ಪುಗಾರರ ಮಂಡಳಿ ಜಿಲ್ಲಾಧ್ಯಕ್ಷ ಶಿವರಾಮ ಏನೆಕಲ್ಲು, ಬಂಟ್ವಾಳ ತಾಲೂಕು ಅಧ್ಯಕ್ಷ ಪುಷ್ಪರಾಜ್ ಚೌಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಉಪಾಧ್ಯಕ್ಷ ಬೇಬಿ ಕುಂದರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಚಂದ್ರಶೇಖರ ಕರ್ಣ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ಅನಿಲ್ ಕೆಂಬಾರ್ ಲೆಕ್ಕ ಪತ್ರ ಮಂಡಿಸಿದರು ಮತ್ತು ಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು.

ಅಸೋಸಿಯೇಷನ್ ಗೌರವ ಸಲಹೆಗಾರರಾದ ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ, ಪ್ರಮುಖರಾದ ಕೃಷ್ಣಾನಂದ, ನಾಮ್ ದೇವ್ ರಾವ್, ಲೋಕನಾಥ್ ಶೆಟ್ಟಿ ಬಿ.ಸಿ.ರೋಡ್, ಮುಹಮ್ಮದ್ ವಳವೂರು, ಮೊದಲಾದವರು ಸಲಹೆ ನೀಡಿದರು.

ಬಂಟ್ವಾಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಶಿವರಾಜ್ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಕಾರ್ಯಾಧ್ಯಕ್ಷ ಝಕರಿಯಾ ಕಲ್ಲಡ್ಕ, ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ತೀರ್ಪುಗಾರರ ಮಂಡಳಿ ಅಧ್ಯಕ್ಷ ಸುರೇಶ್ ಮೈರಡ್ಕ ಮತ್ತು ಪ್ರಸಾದ್ ಶೆಟ್ಟಿ ಸಹಕರಿಸಿದರು.


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X