Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ನಗರಕ್ಕೆ ಹೊಸ ಯುಜಿಡಿ ಪ್ಲಾನ್ :...

ಮಂಗಳೂರು ನಗರಕ್ಕೆ ಹೊಸ ಯುಜಿಡಿ ಪ್ಲಾನ್ : ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ವಾರ್ತಾಭಾರತಿವಾರ್ತಾಭಾರತಿ18 Dec 2025 3:34 PM IST
share
ಮಂಗಳೂರು ನಗರಕ್ಕೆ ಹೊಸ ಯುಜಿಡಿ ಪ್ಲಾನ್ : ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
► ಅಂದಾಜು 1200 ಕೋಟಿ ರೂ. ವೆಚ್ಚ- ಮುಂಬರುವ ಬಜೆಟ್‌ನಲ್ಲಿ ಮಂಡನೆ ► ಮನಪಾ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಯಿಂದ ಫೋನ್ ಇನ್

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಕಾಡುತ್ತಿರುವ ಒಳಚರಂಡಿ ವ್ಯವಸ್ಥೆ (ಮನೆ, ಅಪಾರ್ಟ್‌ಮೆಂಟ್‌ಗಳ ಕೊಳಚೆ ನೀರು ಹರಿಯುವ)ಯನ್ನು ಸಮರ್ಪಕಗೊಳಿಸಲು 1200 ಕೋಟಿರೂ.ಗಳ ಪ್ಲಾನ್ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ದ.ಕ. ಜಿಲ್ಲಾಧಿಕಾರಿಯವರು ಇಂದು ಮನಪಾ ಮೇಯರ್ ಕೊಠಡಿಯಲ್ಲಿ ಫೋನ್ ಇನ್ ಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ವೇಳೆ ಸುದ್ದಿಗಾರರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಮಳೆ ನೀರು ಹರಿಯುವ ಚರಂಡಿಗಳಲ್ಲಿ ಅಪಾರ್ಟ್‌ಮೆಂಟ್, ಮನೆಗಳ ಕೊಳಚೆ ನೀರು ಹರಿಯುತ್ತಿರುವುದು, ರಾಜಕಾಲುವೆಗಳಿಗೆ ಕೊಳಚೆ ನೀರು ಸೇರುತ್ತಿರುವ ಸಮಸ್ಯೆಗಳ ಕುರಿತಂತೆ ಹಲವು ಸಾರ್ವಜನಿಕರು ಫೋನ್ ಕರೆಗಳ ಮೂಲಕ ದೂರು ನೀಡಿದರು.

ಅಪಾರ್ಟ್‌ಮೆಂಟ್‌ಗಳ ನಿರ್ಮಾಣದ ಸಂದರ್ಭ ಪ್ರತ್ಯೇಕ ಎಸ್‌ಟಿಪಿಗಳನ್ನು ನಿರ್ವಹಿಸುವ ನಿಯಮ ಜಾರಿಯಲ್ಲಿದೆ. ಆದರೆ ಹಳೆ ಅಪಾರ್ಟ್‌ಮೆಂಟ್‌ಗಳಲ್ಲಿ ಈ ವ್ಯವಸ್ಥೆ ಇಲ್ಲ. ಹೊಸ ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿಗಳು ಕಾರ್ಯ ನಿರ್ವಹಿಸದೆ ಸಮಸ್ಯೆಯಾಗಿರುವುದು ಕಂಡು ಬಂದಿದೆ. ಹಾಗಾಗಿ ನಗರದ ಸಮಗ್ರ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ಮುಂದಿನ ಆರು ವರ್ಷಗಳ ಜನಸಂಖ್ಯೆಯನ್ನು ಆಧರಿಸಿ ಯುಜಿಡಿ ಪ್ಲಾನ್ ಸಿದ್ಧವಾಗಲಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿಸಚಿವರು ಸಭೆ ನಡೆಸಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜತೆಗೂ ಚರ್ಚೆಯಾಗಿದೆ. ಮುಂದಿನ ಬಜೆಟ್‌ನಲ್ಲಿ ಈ ಯೋಜನೆಯನ್ನು ಮಂಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ರಾಮಯ್ಯ ಎಂಬವರು ಕರೆ ಮಾಡಿ, ತಮ್ಮ ರೂಟಿನಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳು (9 ನಂಬ್ರ ಬಸ್) ಬೆಳಗ್ಗೆ ಮತ್ತು ರಾತ್ರಿ ಹೊತ್ತು ಟ್ರಿಪ್ ಕಟ್ ಮಾಡುತ್ತಿವೆ. ಹಿಂದೆ ಇಲ್ಲಿ ಸಂಚರಿಸುತ್ತಿದ್ದ್ದ ಕೆಎಸ್‌ಆರ್‌ಟಿಸಿ ಬಸ್ಸು ಸೇವೆಯೂ ಸ್ಥಗಿತಗೊಂಡಿದೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ದರ್ಶನ್, ಮಂಗಳೂರು ನಗರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ 100 ಇಲೆಕ್ಟ್ರಿಕ್ ಸರಕಾರಿ ಬಸ್ಸುಗಳು ಮಂಜೂರಾಗಿವೆ ಎಂದರು.

ಬಸ್ಸುಗಳ ಪೂರೈಕೆಗೆ ಟೆಂಡರ್ ಆಗಿದ್ದು, ಮುಂದಿನ ಮಾರ್ಚ್‌ನೊಳಗೆ ಶೇ. 50ರಷ್ಟು ಬಸ್ಸುಗಳು ಪ್ರಥಮ ಹಂತದಲ್ಲಿ ನಗರಕ್ಕೆ ಬರಲಿದ್ದು, ಬಳಿಕ ಮತ್ತೆ 3 ತಿಂಗಳೊಳಗೆ ಎರಡನೆ ಹಂತದಲ್ಲಿ ಇನ್ನುಳಿದ ಬಸ್ಸುಗಳು ಪೂರೈಕೆಯಾಗಲಿವೆ. ಇವುಗಳ ನಿಲುಗಡೆಗೆ ಮುಡಿಪು ಸೇರಿ ಎರಡು ಕಡೆ ನಗರದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಹೆಚ್ಚುವರಿ ಬಸ್ಸು ಚಾಲಕರ ನೇಮಕಾತಿಯೂ ನಡೆದಿದ್ದು, ತರಬೇತಿ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 30 ಕರೆಗಳು ಸ್ವೀಕೃತವಾಗಿದ್ದು, ಸಣ್ಣಪುಟ್ಟ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.

ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಹಾಗೂ ಪಾಲಿಕೆಯ ಇತರ ಹಿರಿಯ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರಿಂದ ವ್ಯಕ್ತವಾದ ಪ್ರಮುಖ ಸಮಸ್ಯೆಗಳು :

*ಪೊಲೀಸ್ ಲೇನ್ ಬಳಿ ತೆರೆದ ಚರಂಡಿಗೆ ಕೊಳಚೆ ನೀರು ಬಿಡಲಾಗುತ್ತಿದೆ. ಬೀದಿನಾಯಿಗಳ ಸಮಸ್ಯೆಯೂ ಹೆಚ್ಚಾಗಿದೆ.

*ಬೆಳಗ್ಗಿನ ಹೊತ್ತು ಕೊಟ್ಟಾರ ಚೌಕಿ ಬಳಿ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುವುದರಿಂದ ವಾಕಿಂಗ್ ಹೋಗುವವರಿಗೆ ಸಮಸ್ಯೆಯಾಗುತ್ತಿದೆ. ರಸ್ತೆ ಬದಿಗಳಲ್ಲಿಯೇ ತ್ಯಾಜ್ಯ ಎಸೆಯಲಾಗುತ್ತದೆ. ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ.

*ಎಕ್ಕೂರಿನ ಮನೆ ಪಕ್ಕದ ರಾಜಕಾಲುವೆಯಲ್ಲಿ ಕೊಳಚೆ ನೀರು ಹರಿಯುತ್ತಿದೆ. ವಾಸನೆಯಿಂದ ಮನೆಯ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ಸೊಳ್ಳೆಯ ಕಾಟ. ಪಾಲಿಕೆಗೆ ದೂರು ನೀಡಿದರೆ ತೋಡಿನ ಹೂಳು ತೆಗೆಯುತ್ತಾರೆ. ತೆಗೆದ ಹೂಳನ್ನು ಅಲ್ಲೇ ಮೇಲೆಹಾಕಿ ಹೋಗುವುದರಿಂದ ಮತ್ತೆ ಅದು ರಾಜಕಾಲುವೆ ಸೇರುತ್ತದೆ.

*ಕಾವೂರು ಜಂಕ್ಷನ್ ಬಳಿ ಝೀಬ್ರಾ ಕ್ರಾಸಿಂಗ್ ಇಲ್ಲ.

*ನಾಗುರಿ ಬಳಿ ಕೊಳಚೆ ನೀರು ಮಳೆ ನೀರು ಹರಿಯುವ ಚರಂಡಿಯಲ್ಲಿ ಹರಿಸಲಾಗುತ್ತಿದ್ದು, ವಾಸನೆ ಅಸಹನೀಯವಾಗಿದೆ.

*ಲೇಡಿಹಿಲ್, ಗೋರಿಗುಡ್ಡ, ಬೊಂದೇಲ್ ಮೊದಲಾದ ಕಡೆ ಸಂಜೆ 4.30ರಿಂದ ಬೆಳಗ್ಗೆ 8 ಗಂಟೆಯವರೆಗೆ ಬೀದಿ ದೀಪಗಳು ಉರಿಯುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್‌ಗೆ ಕರೆ ಮಾಹಿತಿ ನೀಡಿದ್ದರೂ ಕ್ರಮ ಆಗಿಲ್ಲ.

*ತ್ಯಾಜ್ಯ ಕೊಂಡೊಯ್ಯುವ ಸಣ್ಣ ವಾಹನಗಳಿಂದ ದೊಡ್ಡ ವಾಹನಗಳಿಗೆ ತ್ಯಾಜ್ಯವನ್ನು ಅಲ್ಲಲ್ಲಿ ಪ್ರಮುಖ ರಸ್ತೆಗಳಲ್ಲೇ ವರ್ಗಾಯಿಸಲಾಗುತ್ತಿದೆ. ಇದಕ್ಕೆ ನಿರ್ದಿಷ್ಟ ಜಾಗವನ್ನು ನಿಗದಿಪಡಿಸಬೇಕು.

*ಜಲಸಿರಿಯಡಿ ಪೈಪ್‌ಲೈನ್ ಅಳವಡಿಸಲಾಗಿದ್ದು, ನೀರು ಬರದಿದ್ದರೂ ಮೀಟರ್ ಓಡುತ್ತಿದೆ.

* ಪಾಂಡೇಶ್ವರದ ದೂಮಪ್ಪ ಕಂಪೌಂಡ್ ಬಳಿ ಮಲೆ ನೀರು ಮನೆಯೊಳಗೆ ಬರುತ್ತಿದೆ. ಸಾಕಷ್ಟು ದೂರು ನೀಡಿದ್ದರೂ ಪರಿಹಾರವಾಗಿಲ್ಲ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳತದ ವೇಳೆ ಮೇಯರ್‌ರಿಂದ ಜನರ ಸಮಸ್ಯೆ ಆಲಿಸಲು ಫೋನ್ ಇನ್ ಕಾರ್ಯಕ್ರಮ ಜಾರಿಯಲ್ಲಿತ್ತು. ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತಾವಧಿ 2025ರ ಫೆ. 27ರಂದು ಕೊನೆಗೊಂಡಿತ್ತು. ಬಳಿಕ ನಿಯಮದಂತೆ ದ.ಕ. ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿದ್ದಾರೆ. ಕಳೆದ ಸುಮಾರು 10 ತಿಂಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿಯಿಂದ ಫೋನ್‌ಇನ್ ಮೂಲಕ ಸಾರ್ವಜನಿಕರಿಂದ ದೂರುಗಳನ್ನು ಆಲಿಸಲಾಯಿತು.

ಖಾಸಗಿ ಕಾಲೇಜಿನಿಂದ ಮಗಳ ಶೈಕ್ಷಣಿಕ ದಾಖಲೆ ಪತ್ರಕ್ಕಾಗಿ ಡಿಸಿಗೆ ತಾಯಿಯ ಬೇಡಿಕೆ

ಉತ್ತಮ ಅಂಕಗಳನ್ನು ಪಡೆದಿದ್ದ ನನ್ನ ಮಗಳನ್ನು ಬಿಎಸ್ಸಿ ನರ್ಸಿಂಗ್ ಓದಿಸಲು ನಗರದ ಖಾಸಗಿ ಕಾಲೇಜಿಗೆ ದಾಖಲು ಮಾಡಲಾಗಿತ್ತು. ಶುಲ್ಕವನ್ನು ಭರಿಸಲಾಗಿತ್ತು. ಈ ನಡುವೆ ಸರಕಾರಿ ಕೋಟದಡಿ ಆಕೆಗೆ ಸೀಟು ಲಭ್ಯವಾದ ಹಿನ್ನೆಲೆಯಲ್ಲಿ ಆಕೆಯ ಕಾಲೇಜು ಬದಲಾಯಿಸಲಾಯಿತು. ಆದರೆ ಈ ಮೊದಲು ದಾಖಲಾಗಿದ್ದ ಖಾಸಗಿ ಕಾಲೇಜಿನವರು ಆಕೆಯ ಶೈಕ್ಷಣಿಕ ದಾಖಲಾತಿ ಮೂಲಪ್ರತಿಯನ್ನು ಹಿಂತಿರುಗಿಸುತ್ತಿಲ್ಲ. ಕಟ್ಟಿದ ಹಣ ಬೇಡ. ಕನಿಷ್ಟ ಮೂಲ ದಾಖಲೆ ನೀಡುವಂತೆ ಕಳೆದ ನಾಲ್ಕೈದು ತಿಂಗಳಿನಿಂದ ಮನವಿ ಮಾಡುತ್ತಿದ್ದರೂ ಸ್ಪಂದಿಸಿಲ್ಲ. ಇದಕ್ಕೊಂದು ನ್ಯಾಯ ಕೊಡಿ ಎಂದು ಕೊಟ್ಟಾರ ಚೌಕಿಯಿಂದ ಕರೆ ಮಾಡಿದ ಮಹಿಳೆಯೊಬ್ಬರು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು.

‘ಸುಪ್ರೀಂಕೋರ್ಟ್ ನಿರ್ದೇಶನ ಹಾಗೂ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ನಾಯಿಗಳ ಗಣತಿ ಆಧಾರದಲ್ಲಿ ಅವುಗಳಿಗೆ ಸ್ಥಳೀಯವಾಗಿ ಪುನರ್ವಸತಿ ಕಲ್ಪಿಸುವ ಕಾರ್ಯಕ್ಕೆ ಕ್ರಮಗಳು ನಡೆಯುತ್ತಿವೆ. ನಗರದ ನೀರುಮಾರ್ಗ ಹಾಗೂ ಬೊಂಡಂತಿಲ ಬಳಿ ಜಾಗಗಳನ್ನು ಪರಿಶೀಲಿಸಲಾಗಿದೆ. ಪುನರ್ವಸತಿ ಕಲ್ಪಿಸಲು ಕನಿಷ್ಟ 10 ಎಕರೆ ಜಾಗದ ಅಗತ್ಯವಿದೆ. ಮೊದಲ ಹಂತದಲ್ಲಿ ಮಂಗಳೂರು, ಮುಲ್ಕಿ, ಉಳ್ಳಾಲ ವ್ಯಾಪ್ತಿಯಲ್ಲಿ ಜಾಗವನ್ನು ಗುರುತಿಸಲಾಗುತ್ತಿದೆ. ಎರಡನೆ ಹಂತದಲ್ಲಿ ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣದಲ್ಲಿಯೂ ಜಾಗ ಗುರುತಿಸಿ ಅಗತ್ಯ ಅನುದಾನಕ್ಕೆ ಸರಕಾರವನ್ನು ಕೋರಲಾಗುವುದು’ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X