Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ವಿಳಂಬ:...

ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ವಿಳಂಬ: ಸಂಸದ ಬ್ರಿಜೇಶ್ ಚೌಟ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ13 Sept 2024 7:16 PM IST
share
ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ವಿಳಂಬ: ಸಂಸದ ಬ್ರಿಜೇಶ್ ಚೌಟ ಅಸಮಾಧಾನ

ಮಂಗಳೂರು, ಸೆ. 13: ಅಧಿಕಾರಿಗಳು ಜನಪ್ರತಿನಿಧಿಗಳನ್ನು ಹೇಗೆ ಗೊಂದಲಕ್ಕೆ ಸಿಲುಕಿಸುತ್ತಾರೆ ಎಂಬುದನ್ನು ಕಳೆದ ಮೂರು ತಿಂಗಳ ಅವಧಿಯಲ್ಲಿ ಕಲಿತಿದ್ದೇನೆ. ಇಂತಹ ವ್ಯವಸ್ಥೆಯಿಂದ ಹಲವು ಯೋಜನೆಗಳು ವಿಳಂಬವಾಗುತ್ತಿವೆ ಎಂದು ಸಂಸದ ಬ್ರಿಜೇಶ್ ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಗಂಜಿಮಠದ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ವಿಳಂಬದ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

104 ಎಕರೆ ಪ್ರದೇಶದಲ್ಲಿ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣದ ಯೋಜನೆಗೆ ಕೇಂದ್ರ ಸಚಿವ ದಿ. ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. ಆದರೆ ಇನ್ನೂ ರಸ್ತೆ, ಒಳಚರಂಡಿ ವ್ಯವಸ್ಥೆ ಮಾಡಲು ಆಗಿಲ್ಲ. ಇದನ್ನು ಮಾಡಿಕೊಡುವ ವೇಳೆಗೆ ಈಗಾಗಲೇ ಕಾಯುತ್ತಿರುವ ಕಂಪನಿಗಳವರು ಬೇರೆ ಕಡೆ ಹೋಗು ತ್ತಾರೆ ಎಂದು ಅಸಮಾಧಾನಿಸಿದರು.

ಪಾರ್ಕ್‌ನೊಳಗೆ ಸ್ವಲ್ಪ ಜಮೀನಿಗೆ ಸಂಬಂಧಿಸಿ ಕೋರ್ಟ್ ವ್ಯಾಜ್ಯವಿದೆ. ಇದರಿಂದಾಗಿ ಸೆೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಸಿಐಪಿಇಟಿ) ಕೆಲಸವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ. 3.5 ಕಿಮೀ ರಸ್ತೆ ಪೂರ್ಣಗೊಂಡಿದೆ ಎಂದರು.

ಈಗಾಗಲೇ 42 ಕಂಪನಿಗಳವರು ಅಲ್ಲಿ ಘಟಕ ತೆರೆಯಲು ಮುಂದೆ ಬಂದಿದ್ದಾರೆ. ಮೂರು ತಿಂಗಳ ಹಿಂದೆ ಸಭೆ ನಡೆಸಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದ್ದರೂ ಇನ್ನೂ ಆ ವಿಷಯವನ್ನೇ ಪ್ರಸ್ತಾಪಿಸಿ ಗೊಂದಲ ಮಾಡುವುದು ಬೇಡ. ಈ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿ ವಿದ್ಯುತ್ ಸರಬರಾಜು ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು. ಶಾಸಕರು ಸಂಸದರನ್ನು ಒಳಗೊಂಡಂತೆ ಜಿಲ್ಲಾಧಿಕಾರಿಯವರು ಸಭೆ ಕರೆಯಲು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗೆ ಸಂಸದರು ಸೂಚಿಸಿದರು.

ಜಲಸಿರಿ ಅನುದಾನ ಅನ್ಯ ಕಾರ್ಯಕ್ಕೆ: ಶಾಸಕರು, ಸಂಸದರ ಅಸಮಾಧಾನ

ಮಂಗಳೂರು ನಗರಕ್ಕೆ 24*7 ನೀರು ಸರಬರಾಜು ಮಾಡಲು ಉದ್ದೇಶಿಸಿರುವ ಜಲಸಿರಿ ಯೋಜನೆಯಿಂದ ಅಡ್ಯಾರ್‌ ನಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಹಣವನ್ನು ವರ್ಗಾಯಿಸಲಾಗಿದೆ ಎಂಬುದಾಗಿ ಸಭೆಯಲ್ಲಿ ಹಾಜರಿದ್ದ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿಯವರು ಅಸಮಾಧಾನ ವ್ಯಕ್ತಪಡಿಸಿದರು.

2025ರ ಡಿಸೆಂಬರ್ ವೇಳೆಗೆ ಜಲಸಿರಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕುಡ್‌ಸೆಂಪ್ ಅಧಿಕಾರಿಗಳು ತಿಳಿಸಿದ್ದಾರೆ. ಪೈಪ್‌ಲೈನ್ ಹಾಕಲು ಅಗೆದ ರಸ್ತೆಗಳ ಪುನಶ್ಚೇತನಕ್ಕೆ ಮೀಸಲಿಟ್ಟ 67 ಕೋಟಿ ರೂ.ಗಳನ್ನು ಉನ್ನತ ಅಧಿಕಾರಿಗಳ ನಿರ್ದೇಶನದ ಮೇರೆಗೆ ನೀರು ಶುದ್ಧೀಕರಣ ಘಟಕಕ್ಕೆ ಬಳಸಲಾಗಿದೆ. ನಿರ್ವಹಣೆಯ ಹಣವನ್ನು ಬೇರೆಡೆಗೆ ವರ್ಗಾಯಿಸಿ ರುವುದರಿಂದ ನಗದಲ್ಲಿ ಯೋಜನೆಗಾಗಿ ಪೈಪ್‌ಲೈನ್ ಹಾಕಲು ಅಗೆದಿರುವ ರಸ್ತೆಗಳ ಮರು ಕಾಮಗಾರಿಗೆ ಹಣವಿಲ್ಲದೆ ತೊಂದರೆಯಾಗಿದೆ ಎಂದರು.

ಇಂತಹ ವ್ಯವಸ್ಥೆ ಸರಿಯಲ್ಲ. ಯಾವ ಮಾರ್ಗಸೂಚಿಯಡಿ ಈ ಬದಲಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಬೇಕು ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯಿಂದಲೂ ಹಣವನ್ನು ಇತರ ಕಾರ್ಯಗಳಿಗೆ ವರ್ಗಾಯಿಸಲಾಗಿದೆ ಎಂಬ ಶಾಸಕರ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಂಎಸ್‌ಸಿಎಲ್) ಜನರಲ್ ಮ್ಯಾನೇಜರ್ (ತಾಂತ್ರಿಕ) ಅರುಣ್ ಪ್ರಭಾ ಕೆ ಎಸ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಾಯೋಜಿತ ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿ ನಲ್ಲಿ 970 ಕೋಟಿ ರೂ.ಗಳಲ್ಲಿ 52 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಬಹುತೇಕ ಕಾಮಗಾರಿಗಳು ಪೂರ್ಣ ಗೊಂಡಿವೆ. ಒಟ್ಟು 872 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, 758.3 ಕೋಟಿ ರೂ.ಗಳ ಕಾಮಗಾರಿಗಳು ಪೂರ್ಣ ಗೊಂಡು ಪಾವತಿಯಾಗಿದೆ ಎಂದು ತಿಳಿಸಿದರು.

ಪಡೀಲ್‌ನಿಂದ ಪಂಪ್‌ವೆಲ್‌ವರೆಗಿನ ಉದ್ದೇಶಿತ 2.8 ಕಿಮೀ ರಸ್ತೆಯ ಅಗಲೀಕರಣದಲ್ಲಿ 170 ಮೀಟರ್ ಕಾಮಗಾರಿ ಬಾಕಿ ಉಳಿದಿದೆ. ಫುಟ್ ಪಾತ್ ಹಾಗೂ ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಬೇಕಿದ್ದು, ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣ ಗೊಳ್ಳಲಿದೆ ಎಂದು ಅಧಿಕಾರಿ ತಿಳಿಸಿದಾಗ, ಅಷ್ಟರಲ್ಲಿ ಕಾಮಗಾರಿ ಮುಗಿದರೆ ಅಧಿಕಾರಿಗೆ ಸನ್ಮಾನ ಮಾಡುವುದಾಗಿ ಶಾಸಕ ವೇದವ್ಯಾಸ ಕಾಮತ್ ನಗೆಚಟಾಕಿ ಹಾರಿಸಿದರು.

ಮಹಾಕಾಳಿಪಡ್ಪುರೈಲ್ವೆ ಕೆಳಸೇತುವೆ ಕಾಮಗಾರಿ ಬಗ್ಗೆ ವಿಚಾರಿಸಿದಾಗ, ಡಿಸೆಂಬರ್‌ನಲ್ಲಿ ರೈಲ್ವೇಯವರು ಕಾಮಗಾರಿ ಯನ್ನು ಪೂರ್ಣಗೊಳಿಸಲಿದೆ. ಬಳಿಕ ಎಂಎಲ್‌ಸಿಎಲ್‌ನಿಂದ ಸಂಪರ್ಕ ವ್ಯವಸ್ಥೆಗೆ ಒಂದು ತಿಂಗಳ ಅವಧಿ ಬೇಕಾಗುತ್ತದೆ ಎಂದು ಅರುಣ್ ಪ್ರಭಾ ತಿಳಿಸಿದರು.

ಕದ್ರಿ ಪಾರ್ಕ್ ಬಳಿ 38 ಫುಡ್ ಸ್ಟಾಲ್‌ಗಳಿಗೆ ಹರಾಜು ಹಾಗಿದೆ. ಇದರಿಂದ ಪಾಲಿಕೆಗೆ ಒಂದು ಕೋಟಿರೂ. ಆದಾಯ ಬರ ಲಿದೆ. ಒಂದೂವರೆ ತಿಂಗಳಲ್ಲಿ ಅಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಸ್ಟಾಲ್ ಆರಂಭಕ್ಕೆ ಅವಕಾಶ ನೀಡುವುದಾಗಿ ಅರುಣ್ ಪ್ರಭಾ ಅವರು ತಿಳಿಸಿದಾಗ, ಅಷ್ಟು ಸಮಯ ಬೇಡ ಅದನ್ನು ಬೇಗ ಉದ್ಘಾಟನೆ ಮಾಡಿ ಕ್ರಮ ವಹಿಸಿ ಎಂದು ಸಂಸದರು ಸೂಚಿಸಿದರು.

ಪಾಂಡೇಶ್ವರ ರೈಲ್ವೇ ಕ್ರಾಸಿಂಗ್‌ನಲ್ಲಿ ಮಳೆ ನೀರು ಹರಿದು ಹೋಗುವ ರಾಜಕಾಲುವೆ ಇರುವುದರಿಂದ ರೈಲ್ವೇ ಅಂಡರ್‌ ಪಾಸ್ ಮಾಡಲು ಸಾಧ್ಯವಿಲ್ಲ. ರಸ್ತೆಯನ್ನು 8 ಮೀಟರ್‌ನಿಂದ 18 ಮೀಟರ್‌ಗೆ ಅಗಲೀಕರಣಗೊಳಿಸಲು ಪ್ರಸ್ತಾಪಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X