Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಸಿ ಮನ್ನಾ ಭೂಮಿ ಮಂಜೂರಾತಿಗೆ...

ಡಿಸಿ ಮನ್ನಾ ಭೂಮಿ ಮಂಜೂರಾತಿಗೆ ಕಾನೂನಿನಲ್ಲಿ ತಿದ್ದುಪಡಿ ಮಾಡಿ ಹಂಚಿಕೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 Jun 2025 2:55 PM IST
share
ಡಿಸಿ ಮನ್ನಾ ಭೂಮಿ ಮಂಜೂರಾತಿಗೆ ಕಾನೂನಿನಲ್ಲಿ ತಿದ್ದುಪಡಿ ಮಾಡಿ ಹಂಚಿಕೆಗೆ ಒತ್ತಾಯ

ಮಂಗಳೂರು : ರಾಜ್ಯ ಸರಕಾರ ಇಚ್ಚಾಶಕ್ತಿ ವ್ಯಕ್ತಪಡಿಸಿ ಮುಂದಿನ ಅಧಿವೇಶನದಲ್ಲಿ ಡಿಸಿ ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿ ಕಾನೂನಿನಲ್ಲಿ ತಿದ್ದುಪಡಿ ತಂದು ಭೂರಹಿತ ಪರಿಶಿಷ್ಟ ಸಮುದಾಯಕ್ಕೆ ಭೂಮಿ ಹಂಚಿಕೆ ಮಾಡಲು ಕ್ರಮ ವಹಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆಗ್ರಹಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡ ಎಂ.ದೇವದಾಸ್, ಡಿಸಿ ಮನ್ನಾ ಭೂಮಿಯ ಹಂಚಿಕೆಯು ಕಾನೂನಿನ ತೊಡಕಿನಿಂದ ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಒತ್ತಾಯಿಸುತ್ತಲೇ ಬರಲಾಗುತ್ತಿದೆ. ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರನ್ನು ಭೇಟಿಯಾಗಿ ಈ ಬಗ್ಗೆ ರ್ಚಿಸಿದಾಗ ಅವರು ದಲಿತ ನಾಯಕರ ಸಮಕ್ಷಮ ಜಿಲ್ಲಾಧಿಕಾರಿ ಸಭೆ ನಡೆಸಿ ಚರ್ಚಿಸಿದ್ದಾರೆ. ಇದು ದಲಿತ ಸಂಘಟನೆಗಳಿಗೆ ಆಶಾಯದಾಯಕ ಬೆಳವಣಿಗೆಯಾಗಿ ಕಂಡು ಬಂದಿದೆ ಎಂದರು.

ಡಿಪ್ರೆಸ್ಟ್ ಕ್ಲಾಸ್ (ಡಿಸಿ) ಮನ್ನಾ ಭೂಮಿ ಅನ್ನುವ ಶಬ್ಧದಿಂದ ಕರೆಯಲ್ಪಡುವ ಭೂಮಿಗೆ ಸಂಬಂಧಿಸಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಿತರಣೆಗೆ ಸರಕಾರ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು. ಅದೇ ರೀತಿ ಕಾನೂನಿನಲ್ಲಿ ತಿದ್ದುಪಡಿ ತಂದು ಮಾತು ಉಳಿಸುವ ಕೆಲಸ ಮಾಡಲಿದ್ದೇವೆ ಎಂದು ಐವನ್ ಡಿಸೋಜಾ ಭರವಸೆ ನೀಡಿದ್ದಾರೆ ಎಂದವರು ಹೇಳಿದರು.

1968ರ ಪಹಣಿಯಂತೆ ಜಿಲ್ಲೆಯಲ್ಲಿ 8,509.728 ಎಕರೆ ಡಿಸಿ ಮನ್ನಾ ಭೂಮಿ ಇತ್ತು. ಈ ಪೈಕಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 5,698.774 ಎಕರೆ ಭೂಮಿ ಮಂಜೂರಾಗಿದೆ. 625.254 ಎರೆ ಇತರರಿಗೆ ಮಂಜೂರಾಗಿದ್ದು, ಮೀಸಲು ಅರಣ್ಯ, ಗೇರು ಅಭಿವೃದ್ಧಿ ನಿಗಮ ಹಾಗೂ ಇತರ ಸಾರ್ವಜನಿಕ ಉದ್ದೇಶಗಳಿಗೆ 1,042.154 ಎಕರೆ ಭೂಮಿ ನೀಡಲಾಗಿದೆ. 997.195 ಎಕರೆ ಭೂಮಿ ಅತಿಕ್ರಮಣವಾಗಿದೆ. 8 ತಾಲೂಕುಗಳಲ್ಲಿ ಸದ್ಯ ಉಳಿಕೆಯಾದ ಭೂಮಿ (2024ರ ಡಿಸೆಂಬರ್ 24ರವರೆಗೆ) 190.26 ಎಕರೆಯಾಗಿದ್ದು, ಅದನ್ನು ಪರಿಶಿಷ್ಟ ಜಾತಿಯವರಿಗೆ ಹಂಚಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಇನ್ನಷ್ಟು ವಿಳಂಬ ವಹಿಸಿದರೆ ದಲಿತ ಸಂಘಟನೆಗಳು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ಹೇಳಿದರು.

ಉಜಿರೆ, ಮೂಡಬಿದ್ರೆ, ಅಳಿಕೆ, ಮುಡಿಪು ಮೊದಲಾದ ಪ್ರಮುಖ ಸ್ಥಳದಲ್ಲಿ ನೂರಾರು ಎಕರೆ ಭೂಮಿ ಖಾಸಗಿ ಶಿಕ್ಷಣ ಸಂಸ್ಥೆಗೆ ನೀಡಲಾಗಿದೆ. ಕೆಲವೊಂದು ಕಡೆ ಡಿಸಿ ಮನ್ನಾ ಭೂಮಿಯಲ್ಲಿ ಅನಿವಾರ್ಯ ಪರಿಸ್ಥಿತಿಗಳಲ್ಲಿ ಮನೆ ಕಟ್ಟಿ ವಾಸ ಇರುವವರನ್ನು ಎಬ್ಬಿಸಲಾಗದು. ಆದರೆ ಅತಿಕ್ರಮಣ ಆಗಿರುವ ಜಾಗಕ್ಕೆ ಪರ್ಯಾಯವಾಗಿ ಒದಗಿಸುವ ಕಾರ್ಯವನ್ನು ಸರಕಾರ ಬದ್ಧತೆಯಿಂದ ಮಾಡಬೇಕು ಎಂಬುದು ನಮ್ಮ ಬೇಡಿಕೆ ಎಂದು ಮುಖಂಡರಾದ ಅಶೋಕ್ ಕೊಂಚಾಡಿ ಹೇಳಿದರು.

ಗೋಷ್ಟಿಯಲ್ಲಿ ದಲಿತ ಸಂಘಟನೆಗಳ ಮುಖಂಡರಾದ ಎಸ್.ಪಿ. ಆನಂದ್, ರಮೇಶ್ ಕೋಟ್ಯಾನ್, ಚಂದ್ರಕುಮಾರ್, ಸುಧಾಕರ ಬೋಳೂರು, ಕಾಂಗ್ರೆಸ್ ಪ.ಜಾತಿ ಘಟಕದ ಜಿಲ್ಲಾ ಉಪಾಧ್ಯಕ್ಷ ಪ್ರೇಮ್ ಬಳ್ಳಾಲ್‌ಬಾಗ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X