ಸೌಜನ್ಯಾ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹ: ಧರ್ಮಸ್ಥಳದಲ್ಲಿ ವಿಎಚ್ ಪಿ, ಬಜರಂಗದಳದಿಂದ ಪಾದಯಾತ್ರೆ

ಬೆಳ್ತಂಗಡಿ, ಆ.27: ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ನೇತೃತ್ವದಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳದಲ್ಲಿ ಪಾದಯಾತ್ರೆ ನಡೆಯಿತು.
ಇಲ್ಲಿನ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಚಾಲನೆ ಲಭಿಸಿದ್ದು, ಸೌಜನ್ಯ ಕುಟುಂಬಸ್ಥರು ಪಾದಯಾತ್ರೆ ಯಲ್ಲಿ ಭಾಗಿಗಳಾಗಿದ್ದಾರೆ.
ಪಾದಯಾತ್ರೆಯಲ್ಲಿ ಸೌಜನ್ಯಾರ ತಾಯಿ ಕುಸುಮಾವತಿ, ವಿಶ್ವ ಹಿಂದೂ ಪರಿಷತ್ ಮುಖಂಡರು ಭಾಗಿಯಾಗಿದ್ದಾರೆ. ಪಾದಯಾತ್ರೆ ಎರಡು ಕಿ.ಮೀ. ಸಾಗಿ ಬಂದು ಅಣ್ಣಪ್ಪ ಬೆಟ್ಟದಲ್ಲಿ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಮುಕ್ತಾಯವಾಗಲಿದೆ.
ಪಾದಯಾತ್ರೆಯ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
Next Story







