Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತ ಸೇರಿದಂತೆ ಜಗತ್ತಿನ ಎಲ್ಲಡೆ...

ಭಾರತ ಸೇರಿದಂತೆ ಜಗತ್ತಿನ ಎಲ್ಲಡೆ ಪ್ರಜಾಪ್ರಭುತ್ವವು ಸಂದಿಗ್ಧ ಸ್ಥಿತಿಯಲ್ಲಿದೆ: ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಶಿ

ವಾರ್ತಾಭಾರತಿವಾರ್ತಾಭಾರತಿ12 Oct 2025 5:49 PM IST
share
ಭಾರತ ಸೇರಿದಂತೆ ಜಗತ್ತಿನ ಎಲ್ಲಡೆ ಪ್ರಜಾಪ್ರಭುತ್ವವು ಸಂದಿಗ್ಧ ಸ್ಥಿತಿಯಲ್ಲಿದೆ: ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಶಿ
ಮಂಗಳೂರಿನಲ್ಲಿ 29ನೇ ‘ಪ್ರೊಫ್‌ಕಾನ್ ʼ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನ

ಮಂಗಳೂರು: ಭಾರತ ಸೇರಿದಂತೆ ಜಗತ್ತಿನ ಎಲ್ಲಡೆ ಪ್ರಜಾಪ್ರಭುತ್ವವು ಸಂದಿಗ್ಧ ಸ್ಥಿತಿಯಲ್ಲಿದೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಡಾ. ಎಸ್.ವೈ. ಖುರೈಶಿ ಕಳವಳ ವ್ಯಕ್ತಪಡಿಸಿದ್ದಾರೆ.

ವಿಸ್ಡಮ್ ಇಸ್ಲಾಮಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ರಾಜ್ಯ ಸಮಿತಿಯು ಮಂಗಳೂರಿನಲ್ಲಿ ನಗರದಲ್ಲಿ ಆಯೋಜಿಸಲಾಗಿರುವ 29 ನೇ ‘ಪ್ರೊಫ್‌ಕಾನ್ ʼ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಮೂರು ದಿನಗಳ ಸಮ್ಮೇಳನದಲ್ಲಿ ಶನಿವಾರ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಳೆದ ಮೂರು ದಶಕಗಳ ಜಗತ್ತಿನ ಆಡಳಿತ ವ್ಯವಸ್ಥೆಯನ್ನು ಗಮನಿಸಿದರೆ ಜನರು ಸರ್ವಾಧಿಕಾರಿ ಆಡಳಿತದಡಿಯಲ್ಲಿ ಜೀವನ ಸಾಗಿಸುತ್ತಿರುವುದನ್ನು ಗಮನಿಸಬಹುದಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರಗಳು ದಣಿದಂತೆ ಕಾಣುತ್ತಿವೆ. ಚುನಾವಣೆಗಳಲ್ಲಿ ಮತದಾರರ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆ ಕ್ಷೀಣಿಸುತ್ತಿದೆ ಎಂದು ಅವರು ಹೇಳಿದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತವು ಇಂತಹ ಕಾಲಘಟ್ಟದಲ್ಲಿ ನಿರ್ಣಾಯಕ ಪಾತ್ರ ಮತ್ತು ಜವಾಬ್ದಾರಿಯನ್ನು ಹೊಂದಿದೆ ಎಂದು ಡಾ. ಖುರೈಷಿ ಭಿಪ್ರಾಯಪಟ್ಟರು.

ದೇಶದಲ್ಲಿನ ಒಕ್ಕೂಟ ವ್ಯವಸ್ಥೆ ಮತ್ತು ರಾಜಕೀಯ ಪಕ್ಷಗಳೊಳಗಿನ ಆಂತರಿಕ ಪ್ರಜಾಪ್ರಭುತ್ವ ದುರ್ಬಲಗೊಂಡಿರುವುದು, ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿರುವುದು , ಸುಳ್ಳು ಸುದ್ದಿಗಳ ಪ್ರಸರಣ ಮತ್ತು ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಧ್ರುವೀಕರಣವು ಪ್ರಜಾಪ್ರಭುತ್ವದ ಮೂಲಕ ನಾವು ಗಳಿಸಿದ ಸಾಧನೆಗಳಿಗೆ ಅಪಾಯ ಎದುರಾಗಿದೆ ಎಂದು ನುಡಿದರು.

ವೃತ್ತಿಪರರು ನಾಗರಿಕ ಪ್ರಜ್ಞೆಯನ್ನು ಬೆಳೆಸುವುದರ ಜೊತೆಗೆ ತಾಂತ್ರಿಕ ಕೌಶಲ್ಯಗಳನ್ನು ಗಳಿಸಿಕೊಳ್ಳಬೇಕಾಗಿದೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆಗೆ ಶ್ರಮಿಸಬೇಕಾಗಿದೆ. ವೃತ್ತಿಪರ ಶಿಕ್ಷಣದಲ್ಲಿ ನಾಗರಿಕ ಸಾಕ್ಷರತೆಯನ್ನು ಸೇರಿಸಿಕೊಳ್ಳಬೇಕಾಗಿರುವುದು ಅಗತ್ಯ ಎಂದರು.

ಗಮನಾರ್ಹ ವಿದ್ಯಾರ್ಥಿಗಳ ಭಾಗವಹಿಸುವಿಕೆ:

ಕರ್ನಾಟಕದ ಶೈಕ್ಷಣಿಕ ರಾಜಧಾನಿ ಎಂದು ಕರೆಯಲ್ಪಡುವ ಮಂಗಳೂರಿನಲ್ಲಿ ನಡೆದ 29ನೇ ‘ಪ್ರೊಫ್ ಕಾನ್’ನಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಗಮನಾರ್ಹವಾಗಿತ್ತು. ಕೇರಳದ ಎಲ್ಲಾ ಜಿಲ್ಲೆಗಳಿಂದ ಮತ್ತು ಬೆಂಗಳೂರು, ಹೈದರಾಬಾದ್, ಚೆನ್ನೈ ಮತ್ತು ದಿಲ್ಲಿ ಸೇರಿದಂತೆ ದೇಶಾದ್ಯಂತ ಪ್ರಮುಖ ನಗರಗಳಿಂದ ಹಾಗೂ ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ನೂರಾರು ವಿದ್ಯಾರ್ಥಿ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಸಮ್ಮೇಳನಕ್ಕೆ ಆಗಮಿಸುವವರಿಗೆ ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಿಂದ ಬಸ್ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲಾಗಿತ್ತು. ಸಮ್ಮೇಳನ ಅಧಿವೇಶನಗಳು ಮುಂಬೈನ ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ರಾಜ್ಯ ಉಪಾಧ್ಯಕ್ಷ ಸೈಯದ್ ಪಟೇಲ್, ಫೈಸಲ್ ಮೌಲವಿ ಪುದುಪ್ಪರಂಬ, ಕಾರ್ಯದರ್ಶಿ ಅಬ್ದುಲ್ ಮಲಿಕ್ ಸಲಾಫಿ ಮತ್ತು ಇತರ ಅನೇಕ ವಿದ್ವಾಂಸರು ಮತ್ತು ಯುವ ಮುಖಂಡರು ಭಾಗವಹಿಸಿ ಸಮ್ಮೇಳನದಲ್ಲಿ ವಿವಿಧ ಅಧಿವೇಶನಗಳನ್ನು ನಡೆಸಿದರು.

ಅಧಿವೇಶನದಲ್ಲಿ ಕಲ್ಲಿಕೋಟೆಯ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಭೌಗೋಳಿಕ ರಾಜಕೀಯ ವಿಶ್ಲೇಷಕ ಮತ್ತು ಇತಿಹಾಸ ಪ್ರಾಧ್ಯಾಪಕ ಡಾ. ಪಿ.ಜೆ. ವಿನ್ಸೆಂಟ್ ಮತ್ತು ಡಾ. ಅಬ್ದುಲ್ಲಾ ಬಾಸಿಲ್ ಸಿ.ಪಿ. ಭಾಗವಹಿಸಿದ್ದರು. ಸಮ್ಮೇಳನವು ಫೆಲೆಸ್ತೀನಿಯನ್ ಜನರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿತು.

’ಆಡಳಿತ ವಿಫಲವಾದಾಗ, ಜನರು’ ಎಂಬ ಚರ್ಚೆಯಲ್ಲಿ ಎಂಎಸ್‌ಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಪಿ.ವಿ. ಅಹ್ಮದ್ ಸಾಜು ಮತ್ತು ಯುವ ಕಾಂಗ್ರೆಸ್‌ನ ಡಾ. ಜಿಂಟೋ ಜಾನ್ ಭಾಗವಹಿಸಿದ್ದರು.

ವಿಸ್ಡಮ್ ಮಹಿಳಾ ರಾಜ್ಯ ಅಧ್ಯಕ್ಷೆ ಡಾ. ಸಿ. ರಝೀಲಾ ಮತ್ತು ವಿಸ್ಡಮ್ ಗರ್ಲ್ಸ್ ರಾಜ್ಯ ಅಧ್ಯಕ್ಷೆ ಟಿ.ಕೆ. ಹನೀನಾ ಮಹಿಳಾಗೋಷ್ಠಿಯ ನೇತೃತ್ವ ವಹಿಸಿದ್ದರು.

‘ಆಧುನಿಕ ವ್ಯಸನಗಳನ್ನು ನಿಭಾಯಿಸುವುದು ಹೇಗೆ ’? ಎಂಬ ಕಾರ್ಯಾಗಾರವನ್ನು ಶೇಖ್ ಅಬ್ದುಸ್ಸಲಾಮ್ ಮದನಿ ಮತ್ತು ಶಫೀಕ್ ಬಿನ್ ರಹೀಮ್ ನಡೆಸಿಕೊಟ್ಟರು.

ರಾಜಕೀಯದಲ್ಲಿ ಹಿಂಸಾಚಾರ ಖಂಡನೀಯ: ಪ್ರೊಫ್‌ಕಾನ್

ವಿಸ್ಡಮ್ ಇಸ್ಲಾಮಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ರಾಜ್ಯ ಸಮಿತಿಯು ಮಂಗಳೂರಿನಲ್ಲಿ ಆಯೋಜಿಸಿದ್ದ 29ನೇ ‘ಪ್ರೊಫ್ಕಾನ್’ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನವು ದೇಶಾದ್ಯಂತ ವೃತ್ತಿಪರ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಬೇರೂರುತ್ತಿರುವ ಹಿಂಸಾಚಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ಸಂಸ್ಕೃತಿಯನ್ನು ಬಲವಾಗಿ ಖಂಡಿಸಿದೆ ಮತ್ತು ಅಂತಹ ಪ್ರವೃತ್ತಿಗಳ ವಿರುದ್ಧ ವಿದ್ಯಾರ್ಥಿ ಸಮುದಾಯ ಒಗ್ಗೂಡುವಂತೆ ಕರೆ ನೀಡಿದೆ.

ಜ್ಞಾನ ಮತ್ತು ಸಾಮಾಜಿಕ ಪ್ರಜ್ಞೆಯ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕಾದ ಶಿಕ್ಷಣ ಸಂಸ್ಥೆಗಳು ಹಿಂಸೆ ಮತ್ತು ವಿಭಜನೆಯ ಸ್ಥಳಗಳಾಗುತ್ತಿರುವುದು ದುರದೃಷ್ಟಕರ ಎಂದು ಸಮ್ಮೇಳನವು ಅಭಿಪ್ರಾಯಪಟ್ಟಿದೆ.

ಕ್ಯಾಂಪಸ್‌ಗಳಲ್ಲಿ ಹಿಂಸಾತ್ಮಕ ರಾಜಕೀಯವನ್ನು ಪ್ರೋತ್ಸಾಹಿಸಬಾರದು, ಅದು ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮಾದರಿಗಳಾಗಿರಬೇಕು ಎಂದು ಸಮ್ಮೇಳನವು ರಾಜ್ಯ ಸರಕಾರಗಳನ್ನು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X