ದೇರಳಕಟ್ಟೆ | ಸರಕಾರಿ ಉದ್ಯೋಗದಿಂದ ಸಮುದಾಯ ನಿರಾಸಕ್ತಿ: ನಾಸೀರ್

ದೇರಳಕಟ್ಟೆ,ನ.27:ಮುಸ್ಲಿಂ ಸಮುದಾಯದ ಯುವಕರು ಸರಕಾರಿ ಕೆಲಸದ ಬಗ್ಗೆ ನಿರಾಸಕ್ತಿ ಹೊಂದಿದ ಕಾರಣ ಸರಕಾರಿ ಉದ್ಯೋಗಿಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಜೀವನದಲ್ಲೇ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಜಮೀಯತುಲ್ ಫಲಾಹ್ ದ.ಕ.ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ನಾಸೀರ್ ಕೆ.ಕೆ. ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ಅಲ್ ಸಲಾಮ ವತಿಯಿಂದ ನಡೆದ ಸರಕಾರಿ ಉದ್ಯೋಗ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜಮೀಯತುಲ್ ಫಲಾಹ್ ಉಳಾಲ ತಾಲೂಕು ಅಧ್ಯಕ್ಷ ಅಬ್ದುಲ್ ರಹ್ಮಾನ್ ಕೋಡಿಜಾಲ್, ಮೇಲ್ತೆನೆ ಅಧ್ಯಕ್ಷ ವಿ.ಇಬ್ರಾಹಿಂ ನಡುಪದವು ಮಾತನಾಡಿದರು.
ಈ ಸಂದರ್ಭ ಶೈಕ್ಷಣಿಕ ಸಾಧನೆಗಾಗಿ ಸಂಸ್ಥೆಯ ಹಳೆ ವಿದ್ಯಾರ್ಥಿನಿ ಆಶುರಾ ಅಳಿಕೆ ಅವರನ್ನು ಅಭಿನಂದಿಸಲಾಯಿತು. ಅಭಿ ಗೌಡ ಬೆಂಗಳೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ, ಸಂಸ್ಥೆಯ ಸಂಸ್ಥಾಪಕ ಇಕ್ಬಾಲ್ ಬಾಳಿಲ, ಕರ್ನಾಟಕ ಮುಸ್ಲಿಂ ಭಾಂದವ್ಯ ವೇದಿಕೆ ಅಧ್ಯಕ್ಷ ಝಾಕಿರ್ ಹುಸೈನ್, ಪತ್ರಕರ್ತ ಅನ್ಸಾರ್ ಇನೋಳಿ, ಜೆಡಿಎಸ್ ಮುಖಂಡ ಹೈದರ್ ಪರ್ತಿಪ್ಪಾಡಿ, ನಝೀರ್ ಬೆಳುವಾಯಿ, ನಿಸಾರ್ ಬೆಂಗಳೂರು ಉಪಸ್ಥಿತರಿದ್ದರು.
ಸಂಸ್ಥೆಯ ಸಂಯೋಜಕ ಶೇಖ್ ಮುಹಮ್ಮದ್ ಇರ್ಫಾನಿ ಕಾರ್ಯಕ್ರಮ ನಿರೂಪಿಸಿದರು.







